ಮೂಢರನ್ನು ಬಿಟ್ಟು ಬಾಳು ಮತ್ತು ವಿವೇಕದ ಮಾರ್ಗದಲ್ಲಿ ಹೋಗು ಎಂದೂ ಕೂಗುತ್ತಾಳೆ.
Cross references
ನಿಷ್ಪ್ರಯೋಜಕರೊಂದಿಗೆ ನಾನು ಕೂತುಕೊಳ್ಳ ಲಿಲ್ಲ; ವಂಚಕರ ಸಂಗಡ ನಾನು ಹೋಗುವದಿಲ್ಲ.
ಓ ಮಗಳೇ, ಕಿವಿಗೊಟ್ಟು ಕೇಳಿ ಆಲೋಚಿಸು, ನಿನ್ನ ಸ್ವಂತ ಜನರನ್ನು ನಿನ್ನ ತಂದೆಯ ಮನೆಯನ್ನು ಮರೆತುಬಿಡು.
ಕೇಡು ಮಾಡುವವರೇ, ನನ್ನಿಂದ ತೊಲಗಿರಿ; ನನ್ನ ದೇವರ ಆಜ್ಞೆಗಳನ್ನು ಕೈಕೊಳ್ಳುವೆನು.
ಜ್ಞಾನದ ಮಾರ್ಗದಲ್ಲಿ ನಾನು ನಿನಗೆ ಬೋಧಿಸಿದೆನು; ಸರಿಯಾದ ದಾರಿಗಳಲ್ಲಿ ನಾನು ನಿನ್ನನ್ನು ನಡಿಸಿದೆನು.
ದುಷ್ಟರ ದಾರಿಯೊಳಗೆ ಪ್ರವೇಶಿಸದಿರು, ಕೆಟ್ಟವರ ಮಾರ್ಗದಲ್ಲಿ ಹೋಗಬೇಡ.
ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಂಡು ಕರ್ತನ ದಯವನ್ನು ಹೊಂದುವನು.ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.
ನನ್ನ ಮೂಲಕ ನಿನ್ನ ದಿನಗಳು ಹೆಚ್ಚುವವು; ನಿನ್ನ ಜೀವನದ ವರುಷಗಳು ವೃದ್ಧಿಯಾಗುವವು.
ಶಿಕ್ಷಣವನ್ನು ಕೈಕೊಳ್ಳುವವನು ಜೀವನದ ಮಾರ್ಗದಲ್ಲಿ ಇದ್ದಾನೆ; ಗದರಿಕೆಯನ್ನು ತಿರಸ್ಕರಿಸುವವನು ತಪ್ಪುಮಾಡುತ್ತಾನೆ.
ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.
ಇಕ್ಕಟ್ಟಾದ ದ್ವಾರದೊಳಗೆ ನೀವು ಪ್ರವೇಶಿಸಿರಿ; ಯಾಕಂದರೆ ನಾಶನಕ್ಕೆ ನಡಿಸುವ ದ್ವಾರವು ಅಗಲವೂ ಮಾರ್ಗವು ವಿಶಾಲವೂ ಆಗಿದೆ. ಅದರೊಳಗೆ ಪ್ರವೇಶಿಸುವವರು ಬಹು ಜನ.
ಇಕ್ಕಟ್ಟಾದ ಬಾಗಲಿನಿಂದ ಒಳಗೆ ಪ್ರವೇಶಿಸುವದಕ್ಕೆ ಪ್ರಯಾಸಪಡಿರಿ; ಯಾಕಂ ದರೆ ಅನೇಕರು ಒಳಗೆ ಪ್ರವೇಶಿಸುವದಕ್ಕೆ ಪ್ರಯತ್ನಿಸಿ ದರೂ ಆಗುವದಿಲ್ಲ ಎಂದು ನಾನು ನಿಮಗೆ ಹೇಳು ತ್ತೇನೆ.
ಅವನು ಇನ್ನೂ ಬೇರೆ ಅನೇಕ ಮಾತುಗಳಿಂದ ಸಾಕ್ಷಿಕೊಟ್ಟು--ಈ ಮೂರ್ಖ ಸಂತತಿಯವರಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಿರಿ ಎಂದು ಎಚ್ಚರಿಸಿ ಹೇಳಿದನು.
ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
ಪರಲೋಕದಿಂದ ಮತ್ತೊಂದು ಶಬ್ದವನ್ನು ನಾನು ಕೇಳಿದೆನು; ಅದು--ನನ್ನ ಜನರೇ, ಅವಳಿಂದ ಹೊರಗೆ ಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗ ಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿ ಯಾಗಬಾರದು.