ದೇವರು ಮರೆತು ಬಿಟ್ಟಿ ದ್ದಾನೆ; ತನ್ನ ಮುಖವನ್ನು ಮರೆಮಾಡುತ್ತಾನೆ; ಆತನು ಎಂದೂ ನೋಡನು ಎಂದು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ.
Cross references
ಆದರೆ ನೀನು ಹೇಳುತ್ತೀ--ದೇವರು ಏನು ಬಲ್ಲನು? ಆತನು ಕಾರ್ಗತ್ತಲಿಂದ ನ್ಯಾಯತೀರಿಸುವನೋ?
ನಾನು ಕದಲು ವದಿಲ್ಲ; ನಾನು ಎಂದಿಗೂ ಕೇಡಿನಲ್ಲಿರುವದಿಲ್ಲ ಎಂದು ಅವನು ತನ್ನ ಹೃದಯದಲ್ಲಿ ಅಂದುಕೊಂಡಿದ್ದಾನೆ.
ಆದರೆ ಓ ಕರ್ತನೇ, ನೀನು ಅವರನ್ನು ನೋಡಿ ನಗುವಿ, ನೀನು ಅನ್ಯಜನಾಂಗ ಗಳನ್ನೆಲ್ಲಾ ಗೇಲಿಮಾಡುವಿ.
ಕೆಟ್ಟಕಾರ್ಯದಲ್ಲಿ ಅವರು ತಮ್ಮನ್ನು ತಾವೇ ಪ್ರೋತ್ಸಾಹ ಮಾಡಿಕೊಳ್ಳುತ್ತಾರೆ; ಬಲೆಗಳನ್ನು ಒಡ್ಡು ವದಕ್ಕೆ ಮಾತನಾಡುತ್ತಾ--ನಮ್ಮನ್ನು ನೋಡುವವ ರಾರೆಂದು ಹೇಳುತ್ತಾರೆ.
ಅವರು ದ್ರೋಹಗಳನ್ನು ಹುಡುಕುತ್ತಾರೆ; ಎಚ್ಚರಿಕೆಯಿಂದ ಹುಡುಕಿದ್ದನ್ನು ಅವರು ಪೂರೈಸುತ್ತಾರೆ; ಅವರೆಲ್ಲರ ಅಂತರಗವೂ ಹೃದಯವೂ ಅಶೋದ್ಯವಾಗಿವೆ.
ಅವರು-- ದೇವರು ಹೇಗೆ ಬಲ್ಲನು? ಮಹೋನ್ನತನಲ್ಲಿ ತಿಳುವಳಿಕೆ ಉಂಟೋ ಎಂದು ಅಂದುಕೊಳ್ಳುತ್ತಾರೆ.
ಕರ್ತನು ನೋಡುವದಿಲ್ಲ; ಇಲ್ಲವೆ ಯಾಕೋಬನ ದೇವರು ಲಕ್ಷಿಸುವದಿಲ್ಲ ಅನ್ನುತ್ತಾರೆ.
ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವದರಿಂದ ಮನುಷ್ಯಪುತ್ರರ ಹೃದ ಯವು ಅವರನ್ನು ಕೆಟ್ಟದ್ದನ್ನು ಮಾಡುವದರಲ್ಲಿಯೇ ತುಂಬಿಸುವದು.
ಆಗ ಆತನು ನನಗೆ ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರ ಪೂರ್ವಿಕರು ಕತ್ತಲೆ ಯಲ್ಲಿ ಪ್ರತಿಯೊಬ್ಬನೂ ತನ್ನ ಕೊಠಡಿಗಳಲ್ಲಿ ಚಿತ್ರಗಳನ್ನು ಮಾಡುವದನ್ನು ನೋಡಿದೆಯಾ?--ಕರ್ತನು ನಮ್ಮನ್ನು ನೋಡುವದಿಲ್ಲ, ಕರ್ತನು ಭೂಮಿಯನ್ನು ತೊರೆದು ಬಿಟ್ಟಿದ್ದಾನೆ ಎಂದು ಹೇಳುವರು.
ಆಗ ಆತನು ನನಗೆ ಹೇಳಿದ್ದೇನಂದರೆಇಸ್ರಾಯೇಲಿನ ಮತ್ತು ಯೆಹೂದ ಮನೆತನದವರ ಅಕ್ರಮವು ಅತಿ ದೊಡ್ಡದಾಗಿದೆ; ದೇಶವು ರಕ್ತದಿಂದ ತುಂಬಿದೆ; ಪಟ್ಟಣವು ವಕ್ರತ್ವದಿಂದ ತುಂಬಿದೆ; ಯಾಕಂದರೆ ಕರ್ತನು ಭೂಮಿಯನ್ನು ತೊರೆದುಬಿಟ್ಟಿದ್ದಾನೆ; ಕರ್ತನು ನೋಡುವದಿಲ್ಲ ಎಂದು ಅವರು ಹೇಳುತ್ತಾರೆ.
ನಾನು ಅವರ ಕೆಟ್ಟತನವನ್ನೆಲ್ಲಾ ಜ್ಞಾಪಕಮಾಡು ತ್ತೇನೆಂದು ಅವರು ತಮ್ಮ ಹೃದಯಗಳಲ್ಲಿ ನೆನಸಿಕೊಳ್ಳು ವದಿಲ್ಲ; ಈಗ ಅವರ ಸ್ವಂತ ಕೃತ್ಯಗಳು ಅವರನ್ನು ಸುತ್ತಿಕೊಂಡಿವೆ; ಅವು ನನ್ನ ಮುಖದ ಮುಂದೆ ಇವೆ.
ಆದರೆ ಅಲ್ಲಿ ಕೂತುಕೊಂಡಿದ್ದ ಶಾಸ್ತ್ರಿಗಳಲ್ಲಿ ಕೆಲವರು--
ಆಗ ಆತನನ್ನು ಕರೆದ ಫರಿಸಾಯನು ಅದನ್ನು ನೋಡಿ ತನ್ನೊಳಗೆ--ಈ ಮನುಷ್ಯನು ಒಬ್ಬ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿದ್ದವಳು ಯಾರು ಎಂದೂ ಎಂಥತರವಾದ ಹೆಂಗಸು ಎಂದೂ ತಿಳಿದುಕೊಳ್ಳುತ್ತಿದ್ದನು; ಯಾಕಂದರೆ ಅವಳು ಒಬ್ಬ ಪಾಪಿ ಎಂದು ತನ್ನೊಳಗೆ ಅಂದು ಕೊಂಡನು.