Home Bibles ಕೀರ್ತನೆಗಳು 102:18 · ಕನ್ನಡ ಬೈಬಲ್
ಕೀರ್ತನೆಗಳು 102:18 · ಕನ್ನಡ ಬೈಬಲ್

ಇದು ಮುಂದಿನ ಸಂತತಿಗೋಸ್ಕರ ಬರೆಯಲ್ಪಡುವದು; ಹುಟ್ಟಲಿಕ್ಕಿರುವ ಜನರು ಕರ್ತನನ್ನು ಸ್ತುತಿಸುವರು.

Cross references

ನಿರ್ಗಮಕಾಂಡ 17:14

ಆಗ ಕರ್ತನು ಮೋಶೆಗೆ--ಇದನ್ನು ಜ್ಞಾಪಕಾರ್ಥ ವಾಗಿ ಪುಸ್ತಕದಲ್ಲಿ ಬರೆ; ನಾನು ಅಮಾಲೇಕ್ಯರ ನೆನಪು ಆಕಾಶದ ಕೆಳಗೆ ಇರದಂತೆ ಸಂಪೂರ್ಣವಾಗಿ ಅಳಿಸಿ ಬಿಡುವೆನು. ಇದನ್ನು ತಿರಿಗಿ ಯೆಹೋಶುವನಿಗೆ ಹೇಳು ಅಂದನು.

ದ್ವಿತೀಯೋಪದೇಶಕಾಂಡ 31:19

ಹೀಗಿರುವದರಿಂದ ಈಗ ಈ ಹಾಡನ್ನು ಬರೆದು ಕೊಳ್ಳಿರಿ; ಇಸ್ರಾಯೇಲ್‌ ಮಕ್ಕಳಿಗೆ ಅದನ್ನು ಕಲಿಸು; ಇಸ್ರಾಯೇಲ್‌ ಮಕ್ಕಳಲ್ಲಿ ಈ ಹಾಡು ನನಗೆ ಸಾಕ್ಷಿಯಾ ಗಿರುವ ಹಾಗೆ ಅದನ್ನು ಅವರ ಬಾಯಿಗಳಲ್ಲಿ ಇಡು.

ಯೋಬ 19:23

ಹಾ! ನನ್ನ ಮಾತುಗಳು ಬರಯಲ್ಪಟ್ಟಿದ್ದರೆ, ಅವು ಪುಸ್ತಕದಲ್ಲಿ ರಚಿಸಲ್ಪಟ್ಟಿದ್ದರೆ

ಕೀರ್ತನೆಗಳು 22:30

ಒಂದು ಸಂತಾನವು ಆತನನ್ನು ಸೇವಿಸುವದು. ಅದು ಕರ್ತನ ಸಂತತಿ ಎಂದು ಎಣಿಸ ಲ್ಪಡುವದು.ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು.

ಕೀರ್ತನೆಗಳು 45:16

ನಿನ್ನ ತಂದೆಗಳಿಗೆ ಬದಲಾಗಿ ನಿನ್ನ ಮಕ್ಕಳು ಇರುವರು; ಅವರನ್ನು ಭೂಮಿಯ ಮೇಲೆಲ್ಲಾ ಪ್ರಧಾನರನ್ನಾಗಿ ಮಾಡುವಿ.ತಲತಲಾಂತರಗಳ ಲ್ಲೆಲ್ಲಾ ನಿನ್ನ ಹೆಸರನ್ನು ನಾನು ಜ್ಞಾಪಕಪಡಿಸುವೆನು; ಆದದರಿಂದ ಜನರು ಯುಗಯುಗಾಂತರಗಳಿಗೂ ನಿನ್ನನ್ನು ಕೊಂಡಾಡುವರು.

ಕೀರ್ತನೆಗಳು 48:13

ಮುಂದಿನ ತಲಾಂತರಕ್ಕೆ ತಿಳಿಸುವದಕ್ಕೋಸ್ಕರ ಅದರ ಬುರುಜುಗಳ ಮೇಲೆ ಮನಸ್ಸಿಟ್ಟು ಆಕೆಯ ಅರಮನೆಗಳನ್ನು ಲಕ್ಷಿಸಿರಿ.ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವ ರಾಗಿದ್ದಾನೆ. ಆತನು ಮರಣದ ವರೆಗೂ ನಮ್ಮನ್ನು ನಡಿಸುವನು.

ಕೀರ್ತನೆಗಳು 69:34

ಆಕಾಶವೂ ಭೂಮಿಯೂ ಸಮುದ್ರಗಳೂ ಅವುಗಳಲ್ಲಿ ಸಂಚರಿಸುವುದೆಲ್ಲವೂ ಆತನನ್ನು ಸ್ತುತಿಸಲಿ.

ಕೀರ್ತನೆಗಳು 71:18

ಓ ದೇವರೇ, ನಾನು ಮುಪ್ಪಿನವನೂ ನರೆ ಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿನ್ನ ಶಕ್ತಿಯನ್ನೂ ಮುಂದೆ ಬರುವ ಪ್ರತಿಯೊಬ್ಬನಿಗೆ ನಿನ್ನ ಅಧಿಕಾರವನ್ನೂ ತಿಳಿಸುವ ವರೆಗೂ ನನ್ನನ್ನು ಕೈಬಿಡಬೇಡ.

ಕೀರ್ತನೆಗಳು 78:4

ನಾವು ಕರ್ತನ ಸ್ತೋತ್ರಗಳನ್ನೂ ಆತನ ತ್ರಾಣವನ್ನೂ ಆತನು ಮಾಡಿದ ಅದ್ಭುತಗಳನ್ನೂ ವಿವರಿಸುತ್ತಾ ಅವರ ಮಕ್ಕಳಿಗೆ, ಮುಂದಿನ ವಂಶಕ್ಕೆ ಮರೆಮಾಡುವದಿಲ್ಲ.

ಯೆಶಾಯ 43:7

ನನ್ನ ಹೆಸರಿ ನಿಂದ ಕರೆಯಲ್ಪಟ್ಟ ಪ್ರತಿಯೊಬ್ಬನನ್ನೂ ಬರಮಾಡು ವೆನು; ಅವನನ್ನು ನನ್ನ ಮಹಿಮೆಗಾಗಿ ಸೃಷ್ಟಿಸಿದ್ದೇನೆ, ನಾನು ಅವನನ್ನು ನಿರ್ಮಿಸಿದ್ದೇನೆ: ಹೌದು, ನಾನು ಅವನನ್ನು ಉಂಟುಮಾಡಿದ್ದೇನೆ.

ಯೆಶಾಯ 43:21

ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ನನಗೋಸ್ಕರ ರೂಪಿಸಿದ್ದೇನೆ.

ಯೆಶಾಯ 65:17

ಇಗೋ, ನಾನು ಹೊಸ ಆಕಾಶವನ್ನೂ ಹೊಸ ಭೂಮಿಯನ್ನೂ ಸೃಷ್ಟಿಸುತ್ತೇನೆ. ಮುಂಚಿನವುಗಳು ಜ್ಞಾಪಕದಲ್ಲಿರುವದಿಲ್ಲ ಇಲ್ಲವೆ ಅದರ ಸ್ಮರಣೆಗೆ ಬರುವ ದಿಲ್ಲ.

ದಾನಿಯೇಲ 9:2

ಅವನ ಆಳಿಕೆಯ ಮೊದಲನೆಯ ವರುಷದಲ್ಲಿ ದಾನಿಯೇಲನಾದ ನಾನು ಕರ್ತನು ತನ್ನ ವಾಕ್ಯವನ್ನು ಪ್ರವಾದಿಯಾದ ಯೆರೆವಿಾಯನಿಗೆ ದಯಪಾಲಿಸಿದ ಹಾಗೆ ತಾನು ಯೆರೂಸಲೇಮಿಗೆ ಹಾಳು ಬೀಳುವಿಕೆಗಳಲ್ಲಿ ಎಪ್ಪತ್ತು ವರುಷಗಳನ್ನು ಸಂಪೂರ್ಣಮಾಡುವ ಹಾಗೆ ವರುಷಗಳ ಲೆಕ್ಕವನ್ನು ಪುಸ್ತಕದಿಂದ ತಿಳಿದುಕೊಂಡೆನು.

ಯೋಹಾನ 20:31

ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.

ರೋಮಾಪುರದವರಿಗೆ 15:4

ನಾವು ತಾಳ್ಮೆಯ ಮತ್ತು ಬರಹಗಳ ಆದರಣೆಯ ಮೂಲಕ ನಿರೀಕ್ಷೆ ಹೊಂದುವಂತೆ ಪೂರ್ವಕಾಲದಲ್ಲಿ ಬರೆಯಲ್ಪಟ್ಟವುಗಳೆಲ್ಲಾ ನಮಗೆ ಉಪದೇಶಿಸುವ ದಕ್ಕಾಗಿಯೇ ಬರೆಯಲ್ಪಟ್ಟವು.

1 ಕೊರಿಂಥದವರಿಗೆ 10:11

ಅವರಿಗೆ ಸಂಭವಿಸಿದ ಈ ಎಲ್ಲಾ ಸಂಗತಿಗಳು ನಿದರ್ಶನಗಳಾಗಿವೆ; ಲೋಕದ ಅಂತ್ಯಕ್ಕೆ ಬಂದಿರುವ ವರಾದ ನಮಗೆ ಅವು ಬುದ್ಧಿವಾದಗಳಾಗಿ ಬರೆದವೆ.

2 ಕೊರಿಂಥದವರಿಗೆ 5:17

ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಹಳೆಯವುಗಳು ಅಳಿದುಹೋದವು; ಇಗೋ, ಎಲ್ಲವೂ ನೂತನವಾದವು.

ಎಫೆಸದವರಿಗೆ 2:10

ದೇವರು ಮುಂದಾಗಿ ನೇಮಿಸಿದ ಸತ್ಕ್ರಿಯೆ ಗಳಲ್ಲಿ ನಾವು ನಡೆಯುವಂತೆ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟವರಾದ ನಾವು ಆತನ ಕೆಲಸವಾಗಿದ್ದೇವೆ.

2 ತಿಮೋಥೆಯ 3:16

ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.

1 ಪೇತ್ರ 2:9

ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.

2 ಪೇತ್ರ 1:15

ಹೇಗಿದ್ದರೂ ನೀವು ನನ್ನ ಮರಣಾನಂತರದಲ್ಲಿ ಇವುಗಳನ್ನು ಯಾವಾಗಲೂ ಜ್ಞಾಪಕಮಾಡಿಕೊಳ್ಳುವದು ಸಾಧ್ಯವಾಗುವಂತೆ ಪ್ರಯಾಸಪಡುವೆನು.

Interlinear

Choose Theme