ಜನಾಂಗಗಳೂ ರಾಜ್ಯಗಳೂ ಕರ್ತ ನನ್ನು ಸೇವಿಸುವದಕ್ಕೆ ಒಟ್ಟಾಗಿ ಕೂಡಿ ಬರುವಾಗ
Cross references
ಆಕಾಶದೊಳಗಿಂದ, ನಿನ್ನ ಪರಿಶುದ್ಧ ನಿವಾಸದೊ ಳಗಿಂದ ಕಣ್ಣಿಡು; ನಿನ್ನ ಜನರಾದ ಇಸ್ರಾಯೇಲನ್ನೂ ನೀನು ನಮ್ಮ ಪಿತೃಗಳಿಗೆ ಪ್ರಮಾಣಮಾಡಿದ ಪ್ರಕಾರ ನಮಗೆ ಕೊಟ್ಟಂಥ ಹಾಲೂ ಜೇನೂ ಹರಿಯುವ ದೇಶವಾಗಿರುವಂಥ ದೇಶವನ್ನೂ ಆಶೀರ್ವದಿಸು ಎಂದು ಹೇಳಬೇಕು.
ಈ ಮಂದಿರದ ಕಡೆಗೆ ತನ್ನ ಕೈಗಳನ್ನು ಚಾಚಿದರೆ ಆಗ ನೀನು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಅವರು ಬದುಕಿರುವ ವರೆಗೂ ಅವರು ನಿನಗೆ ಭಯಪಡುವ ಹಾಗೆ,
ಅವನು ಬಂದು ಈ ಮಂದಿರದ ಕಡೆಗೆ ಪ್ರಾರ್ಥನೆ ಮಾಡಿದರೆ ನಿನ್ನ ಜನರಾದ ಇಸ್ರಾಯೇಲ್ಯರ ಹಾಗೆ ಭೂಲೋಕದಲ್ಲಿರುವ ಸಮಸ್ತರು ನಿನಗೆ ಭಯಪಡುವದಕ್ಕಾಗಿ ನಿನ್ನ ಹೆಸರನ್ನು ತಿಳಿಯುವ ಹಾಗೆಯೂ ನಾನು ಕಟ್ಟಿಸಿದ ಈ ಮನೆಯು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದೆ ಎಂದು ಅವರು ತಿಳಿಯುವ ಹಾಗೆಯೂ ನಿನ್ನ ನಿವಾಸವಾಗಿರುವ ಪರಲೋಕದಿಂದ ಕೇಳಿ ಪರದೇಶಸ್ಥನು ನಿನಗೆ ಕೂಗಿದ ಪ್ರಕಾರ ಮಾಡು.
ಕರ್ತನ ಸಮ್ಮುಖದಲ್ಲಿ ಪೂರ್ಣ ಹೃದಯವುಳ್ಳವರ ನಿಮಿತ್ತ ಬಲವನ್ನು ತೋರಿಸುವದಕ್ಕೆ ಆತನ ಕಣ್ಣುಗಳು ಸಮಸ್ತ ಭೂಮಿಯಲ್ಲಿ ಓಡಾಡುತ್ತವೆ. ಈಗ ನೀನು ಬುದ್ಧಿ ಹೀನನಾಗಿ ನಡಕೊಂಡಿದ್ದೀ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಉಂಟಾಗಿರುವವು ಅಂದನು.
ದೇವರು ಆಕಾಶದ ಎತ್ತರದಲ್ಲಿದ್ದಾನಲ್ಲವೋ? ನಕ್ಷತ್ರಗಳ ಎತ್ತರ ನೋಡು, ಅವು ಎಷ್ಟು ಉನ್ನತ!
ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ಕರ್ತನು ಆಕಾಶದಿಂದ ಮನುಷ್ಯನ ಮಕ್ಕಳ ಮೇಲೆ ಕಣ್ಣಿಟ್ಟನು.
ಕರ್ತನು ಆಕಾಶದಿಂದ ಮನುಷ್ಯರ ಮಕ್ಕಳೆಲ್ಲರನ್ನು ದೃಷ್ಟಿಸಿ ನೋಡುತ್ತಾನೆ.
ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ನನಗೋಸ್ಕರ ರೂಪಿಸಿದ್ದೇನೆ.
ನಾವು ಈಗ ಹೇಳುವ ವಿಷಯಗಳ ಸಾರಾಂಶವೇನಂದರೆ--ಪರಲೋಕದೊ ಳಗೆ ಮಹಿಮೆಯುಳ್ಳಾತನ ಸಿಂಹಾಸನದ ಬಲಗಡೆಯಲ್ಲಿ ಕೂತುಕೊಂಡಿರುವ ಮಹಾಯಾಜಕನು ನಮಗಿದ್ದಾನೆ.
ಪರಲೋಕದಲ್ಲಿರುವ ವಸ್ತುಗಳಿಗೆ ಮಾದರಿಯಾಗಿ ರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ ಪರಲೋಕದವುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಬೇಕು.