ನನ್ನ ದಿವಸಗಳು ಹೊಗೆಯಂತೆ ಕಳೆದುಹೋಗು ತ್ತವೆ; ನನ್ನ ಎಲುಬುಗಳು ಕೊಳ್ಳಿಯ ಹಾಗೆ ಸುಟ್ಟು ಹೋಗಿವೆ.
Cross references
ನನ್ನ ಮೇಲಿನ ಚರ್ಮವು ಕಪ್ಪಗಾಯಿತು; ನನ್ನ ಎಲುಬುಗಳು ಉಷ್ಣ ದಿಂದ ಬೆಂದಿವೆ.ನನ್ನ ಕಿನ್ನರಿ ಗೋಳಾಟವೂ ನನ್ನ ಕೊಳಲು ಅಳುವವರ ಶಬ್ಧವೂ ಆಯಿತು.
ನಾನು ನೀರಿನ ಹಾಗೆ ಹೊಯ್ಯಲ್ಪಟ್ಟಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿವೆ; ನನ್ನ ಹೃದ ಯವು ಮೇಣದ ಹಾಗೆ ನನ್ನ ಕರುಳುಗಳ ಮಧ್ಯದಲ್ಲಿ ಕರಗಿಹೋಗಿದೆ.
ನಿನ್ನ ಮುಖವನ್ನು ನನಗೆ ಮರೆಮಾಡಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ; ನೀನು ನನಗೆ ಸಹಾಯಕನಾಗಿದ್ದೀ; ನನ್ನನ್ನು ವಿಸರ್ಜಿಸಬೇಡ; ನನ್ನ ರಕ್ಷಣೆಯ ಓ ದೇವರೇ, ನನ್ನನ್ನು ಬಿಟ್ಟುಬಿಡಬೇಡ.
ನನ್ನ ಬಂಡೆಯೂ ಕೋಟೆಯೂ ನೀನೇ; ನಿನ್ನ ಹೆಸರಿನ ನಿಮಿತ್ತ ನನ್ನನ್ನು ನಡಿಸು; ನನಗೆ ಮಾರ್ಗ ದರ್ಶಕನಾಗಿರು.
ನನ್ನ ಜೀವವು ಚಿಂತೆ ಯಿಂದಲೂ ನನ್ನ ವರುಷಗಳು ನಿಟ್ಟುಸುರಿನಿಂದಲೂ ತೀರಿಹೋಗಿವೆ; ನನ್ನ ಶಕ್ತಿಯು ನನ್ನ ಅಪರಾಧದಿಂದ ಕುಂದಿ ಎಲುಬುಗಳು ಕ್ಷೀಣವಾಗಿವೆ.
ದುಷ್ಟರು ನಾಶವಾಗುವರು; ಕರ್ತನ ಶತ್ರುಗಳು ಕುರಿಮರಿಗಳ ಕೊಬ್ಬಿನ ಹಾಗೆ ಇದ್ದು ಕರಗಿಹೋಗು ವರು; ಹೊಗೆಯಲ್ಲಿ ಕರಗಿಹೋಗುವರು.
ನಿನ್ನ ಕೋಪದ ನಿಮಿತ್ತವಾಗಿ ನನ್ನ ಶರೀರದಲ್ಲಿ ಸ್ವಸ್ಥವೇನೂ ಇಲ್ಲ; ನನ್ನ ಪಾಪದ ನಿಮಿತ್ತ ನನ್ನ ಎಲುಬುಗಳಲ್ಲಿ ವಿಶ್ರಾಂತಿಯೇ ಇಲ್ಲ.
ನಾನು ಹೊಗೆಯಲ್ಲಿರುವ ಬುದ್ಧಲಿಯ ಹಾಗೆ ಇದ್ದರೂ ನಿನ್ನ ನಿಯಮಗಳನ್ನು ನಾನು ಮರೆತುಬಿಡಲಿಲ್ಲ.
ಆತನು ಮೇಲಿನಿಂದ ನನ್ನ ಎಲುಬುಗಳಿಗೆ ಬೆಂಕಿಯನ್ನು ಕಳುಹಿಸಿ ದ್ದಾನೆ, ಅದು ಅವುಗಳನ್ನು ವಶಪಡಿಸಿಕೊಂಡಿದೆ; ನನ್ನ ಪಾದದ ಮೇಲೆ ಒಂದು ಬಲೆಯನ್ನು ಬೀಸಿ ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾನೆ; ನನ್ನನ್ನು ದಿನವೆಲ್ಲಾ ಹಾಳಾಗಿಯೂ ಮೂರ್ಛೆ ಹೋಗುವಂತೆಯೂ ಮಾಡಿದ್ದಾನೆ.
ಆತನು ನನ್ನ ಮಾಂಸ ಚರ್ಮವನ್ನೂ ಎಲುಬುಗಳನ್ನೂ ಮುರಿದಿದ್ದಾನೆ.
ನಾಳೆ ಏನಾಗುವದೋ ನಿಮಗೆ ತಿಳಿಯದು. ನಿಮ್ಮ ಜೀವ ಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿ ಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ.