Home Bibles ಕೀರ್ತನೆಗಳು 104:21 · ಕನ್ನಡ ಬೈಬಲ್
ಕೀರ್ತನೆಗಳು 104:21 · ಕನ್ನಡ ಬೈಬಲ್

ಸಿಂಹದ ಮರಿಗಳು ಬೇಟೆ ಗೋಸ್ಕರವೂ ದೇವರಿಂದ ತಮ್ಮ ಆಹಾರವನ್ನು ಹುಡು ಕುವದಕ್ಕೋಸ್ಕರವೂ ಗರ್ಜಿಸುತ್ತವೆ.

Cross references

ಯೋಬ 38:39

ಸಿಂಹಕ್ಕೋಸ್ಕರ ನೀನು ಬೇಟೆಯಾಡುವಿಯೋ?

ಯೋಬ 38:41

ಅದರ ಮರಿಗಳು ತಿನ್ನುವದಕ್ಕೆ ಇಲ್ಲದೆ ಅಲೆದು, ದೇವರಿಗೆ ಮೊರೆಯಿಡುವಾಗ ಕಾಗೆಗೆ ಅದರ ಆಹಾರವನ್ನು ಸಿದ್ಧಮಾಡುವವನಾರು?

ಕೀರ್ತನೆಗಳು 34:10

ಪ್ರಾಯದ ಸಿಂಹಗಳು ಕೊರತೆಯಾಗಿ ಹಸಿಯುತ್ತವೆ; ಆದರೆ ಕರ್ತನನ್ನು ಹುಡುಕುವವರು ಯಾವ ಒಳ್ಳೆಯ ದಕ್ಕಾದರೂ ಕೊರತೆ ಪಡುವದಿಲ್ಲ.

ಕೀರ್ತನೆಗಳು 145:15

ಎಲ್ಲರ ಕಣ್ಣುಗಳು ನಿನಗೆ ಕಾದುಕೊಳ್ಳುತ್ತವೆ; ನೀನು ಅವರಿಗೆ ಅವರ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುತ್ತೀ.

ಕೀರ್ತನೆಗಳು 147:9

ಆತನು ಪಶುಗಳಿಗೂ ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾನೆ.

ಯೆಶಾಯ 31:4

ಕರ್ತನು ನನಗೆ ಹೀಗೆ ಹೇಳಿದ್ದಾನೆ -- ಸಿಂಹವು, ಪ್ರಾಯದ ಸಿಂಹವು ಬೇಟೆಯ ಮೇಲೆ ಬಿದ್ದು ಗುರು ಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ ಹೇಗೆ ಅವರ ಶಬ್ದಕ್ಕೆ ಭಯಪಡದೆ ಇಲ್ಲವೆ ಅವರ ಗದ್ದಲಕ್ಕೆ ಕುಂದಿಹೋಗದೆ ಇರುವದೋ ಹಾಗೆಯೇ ಸೈನ್ಯಗಳ ಕರ್ತನು ಚೀಯೋನ್‌ ಪರ್ವತ ಕ್ಕೋಸ್ಕರವೂ ಅದರ ಗುಡ್ಡಕ್ಕೋಸ್ಕರವೂ ಯುದ್ಧ ಮಾಡಲು ಇಳಿದು ಬರುವನು.

ಯೆಹೆಜ್ಕೇಲ 19:2

ಹೀಗೆ ಹೇಳು--ನಿನ್ನ ತಾಯಿ ಏನು? ಒಂದು ಸಿಂಹಿಣಿಯೇ, ಆಕೆ ಸಿಂಹಗಳ ಜೊತೆ ಮಲಗಿ ಪ್ರಾಯದ ಸಿಂಹಗಳ ಮಧ್ಯದಲ್ಲಿ ತನ್ನ ಮರಿಗಳನ್ನು ಸಾಕಿದಳು.

ಯೋವೇಲ 1:18

ಪಶುಗಳು ಎಷ್ಟೋ ಮುಲುಗುತ್ತವೆ; ದನದ ಹಿಂಡುಗಳು ಕಳವಳಗೊಂಡಿವೆ; ಅವಕ್ಕೆ ಮೇವು ಇಲ್ಲ; ಕುರಿಮಂದೆಗಳು ಸಹ ನಾಶ ವಾಗುತ್ತವೆ.

ಯೋವೇಲ 1:20

ಅಡವಿಯ ಮೃಗಗಳು ಸಹ ನಿನ್ನ ಕಡೆಗೆ ಹೂಂಕರಿಸುತ್ತವೆ; ನೀರಿನ ಹೊಳೆಗಳು ಬತ್ತಿ ಹೋಗಿವೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ದಹಿಸಿಬಿಟ್ಟಿದೆ.

ಯೋವೇಲ 2:22

ಹೊಲದ ಮೃಗಗಳೇ, ಭಯಪಡಬೇಡಿರಿ; ಅಡ ವಿಯ ಮೇವಿನ ಸ್ಥಳಗಳು ಮೊಳೆಯುತ್ತವೆ; ಮರಗಳು ತಮ್ಮ ಫಲವನ್ನು ಫಲಿಸುತ್ತವೆ; ಅಂಜೂರದ ಗಿಡವೂ ದ್ರಾಕ್ಷೇ ಬಳ್ಳಿಯೂ ತಮ್ಮ ಫಲವನ್ನು ಕೊಡುತ್ತವೆ.

ಆಮೋಸ 3:4

ಬೇಟೆ ಇಲ್ಲದಿದ್ದರೆ ಅಡವಿಯಲ್ಲಿ ಸಿಂಹವು ಗರ್ಜಿಸುವದೇ? ಏನಾದರೂ ಹಿಡಿಯದಿದ್ದರೆ ಗುಹೆಯಲ್ಲಿರುವ ಎಳೇ ಸಿಂಹವು ಅರ ಚುವದೇ?

Interlinear

Choose Theme