Home Bibles ಕೀರ್ತನೆಗಳು 106:13 · ಕನ್ನಡ ಬೈಬಲ್
ಕೀರ್ತನೆಗಳು 106:13 · ಕನ್ನಡ ಬೈಬಲ್

ಆತನ ಕೆಲಸಗಳನ್ನು ಬೇಗ ಮರೆತುಬಿಟ್ಟು ಆತನ ಆಲೋಚನೆಗೆ ಅವರು ಕಾದುಕೊಳ್ಳದೆ ಇದ್ದರು.

Cross references

ನಿರ್ಗಮಕಾಂಡ 15:17

ನೀನು ಅವರನ್ನು ಒಳಗೆ ಬರಮಾಡಿ ಓ ಕರ್ತನೇ, ನಿನ್ನ ಕೈಗಳು ಸ್ಥಾಪಿಸಿದ ಪರಿಶುದ್ಧ ನಿವಾಸದಲ್ಲಿಯೂ (ಓ ಕರ್ತನೇ,) ನೀನು ವಾಸಿಸುವದಕ್ಕೆ ಮಾಡಿಕೊಂಡಿರುವ ನಿನ್ನ ಸ್ವಾಸ್ಥ್ಯದ ಪರ್ವತದಲ್ಲಿಯೂ ಅವರನ್ನು ಸ್ಥಾಪಿಸುವಿ.

ನಿರ್ಗಮಕಾಂಡ 15:24

ಆದದ ರಿಂದ ಜನರು--ನಾವು ಏನು ಕುಡಿಯೋಣ ಎಂದು ಹೇಳಿ ಮೋಶೆಗೆ ವಿರೋಧವಾಗಿ ಗುಣುಗುಟ್ಟಿದರು.

ನಿರ್ಗಮಕಾಂಡ 16:2

ಆಗ ಇಸ್ರಾಯೇಲ್‌ ಮಕ್ಕಳ ಸಭೆಯೆಲ್ಲಾ ಅರಣ್ಯದಲ್ಲಿ ಮೋಶೆಗೂ ಆರೋನನಿಗೂ ವಿರೋಧ ವಾಗಿ ಗುಣುಗುಟ್ಟಿತು.

ನಿರ್ಗಮಕಾಂಡ 17:2

ಆದಕಾರಣ ಜನರು ಮೋಶೆಯ ಸಂಗಡ ವಿವಾದಮಾಡಿ--ನಮಗೆ ಕುಡಿ ಯುವದಕ್ಕೆ ನೀರು ಕೊಡು ಅಂದಾಗ ಮೋಶೆಯು ಅವರಿಗೆ--ಯಾಕೆ ನನ್ನ ಸಂಗಡ ವಿವಾದ ಮಾಡುತ್ತೀರಿ? ಕರ್ತನನ್ನು ಯಾಕೆ ಪರೀಕ್ಷಿಸುತ್ತೀರಿ ಅಂದನು.

ನಿರ್ಗಮಕಾಂಡ 17:7

ಅವನು ಆ ಸ್ಥಳಕ್ಕೆ ಮಸ್ಸಾ ಮೆರಿಬಾ ಎಂದು ಹೆಸರಿಟ್ಟನು. ಯಾಕಂದರೆ ಅಲ್ಲಿ ಇಸ್ರಾಯೇಲ್‌ ಮಕ್ಕಳು ವಿವಾದ ಮಾಡಿದರು.-- ಕರ್ತನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ ಎಂದು ಪರೀಕ್ಷಿಸಿದರು.

ಕೀರ್ತನೆಗಳು 78:11

ಆತನು ಅವರಿಗೆ ತೋರಿ ಸಿದ ಆತನ ಕೃತ್ಯಗಳನ್ನೂ ಆದ್ಭುತಗಳನ್ನೂ ಮರೆತು ಬಿಟ್ಟರು.

ಕೀರ್ತನೆಗಳು 107:11

ದೇವರ ಮಾತುಗಳನ್ನು ಎದುರಿಸಿ, ಮಹೋನ್ನತನ ಆಲೋಚನೆಯನ್ನು ಅಸಹ್ಯಿಸಿದ್ದರಿಂದ

ಸಾಮೇತಿಗಳು 1:25

ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ ನನ್ನ ಗದರಿಕೆ ಯನ್ನು ನೀವು ಬೇಡವೆಂದು ತಳ್ಳಿಬಿಟ್ಟದ್ದರಿಂದಲೂ

ಸಾಮೇತಿಗಳು 1:30

ನನ್ನ ಆಲೋಚನೆಯನ್ನು ಗಮನಿಸದೆ ಇದ್ದದಕ್ಕಾಗಿಯೂ ನನ್ನ ಗದರಿಕೆಯನ್ನೆಲ್ಲಾ ಅಸಡ್ಡೆ ಮಾಡಿದ್ದಕ್ಕಾಗಿಯೂ

ಯೆಶಾಯ 48:17

ನಿನ್ನ ವಿಮೋಚ ಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಕರ್ತನು ಹೀಗೆನ್ನುತ್ತಾನೆ--ನಿನ್ನ ಉಪಯೋಗಕ್ಕಾಗಿ ನಿನಗೆ ಬೋಧಿಸುವವನೂ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡಿಸುವವನೂ ಆದ ನಾನೇ ನಿನ್ನ ಕರ್ತನೂ ನಿನ್ನ ದೇವರೂ ಆಗಿದ್ದೇನೆ.

ಯೆಶಾಯ 51:13

ಆಕಾಶವನ್ನು ಹಾಸಿ, ಭೂಮಿಗೆ ಅಸ್ತಿವಾರವನ್ನು ಹಾಕಿ, ನಿನ್ನನ್ನು ಉಂಟು ಮಾಡಿದ ಕರ್ತನನ್ನು ನೀನು ಮರೆತುಬಿಟ್ಟು ಹಿಂಸಕನ ಉಗ್ರಕ್ಕೆ ಎಡೆಬಿಡದೆ ಪ್ರತಿದಿನವೂ ಅವನು ನಾಶ ಪಡಿಸುವನೋ ಎಂಬಂತೆ ಅಂಜಿಕೊಂಡಿದ್ದಿಯಲ್ಲಾ? ಮತ್ತು ಆ ಹಿಂಸಕನ ಉಗ್ರವು ಎಲ್ಲಿ?

Interlinear

Choose Theme