ಬಹಳ ಸಾರಿ ಆತನು ಅವರನ್ನು ಬಿಡಿಸಿದನು; ಆದರೆ ಅವರು ತಮ್ಮ ಆಲೋಚನೆಯಿಂದ ಆತನಿಗೆ ಕೋಪವನ್ನೆಬ್ಬಿಸಿದರು. ತಮ್ಮ ಅಕ್ರಮದಿಂದ ಅವರು ಕುಗ್ಗಿಹೋದರು.
Cross references
ಆದಾಗ್ಯೂ ಕರ್ತನು ಅವರನ್ನು ಕೊಳ್ಳೆ ಹೊಡೆಯುವವರ ಕೈಯೊಳಗಿಂದ ಬಿಡಿಸಿದ ನ್ಯಾಯಾಧಿಪತಿಗಳನ್ನು ಎಬ್ಬಿಸಿದರೂ;
ಅವರು ಹೊಸ ದೇವರುಗಳನ್ನು ಆದುಕೊಂಡರು; ಆಗ ಯುದ್ಧವು ಬಾಗಲುಗಳಲ್ಲಿ ಆಯಿತು. ಇಸ್ರಾಯೇಲಿನಲ್ಲಿ ನಾಲ್ವತ್ತು ಸಾವಿರ ಜನರೊಳಗೆ ಗುರಾಣಿಯೂ ಕಠಾರಿಯೂ ಕಾಣಲ್ಪಟ್ಟವೋ?
ಅವರು ತಮ್ಮ ಕುರಿದನಗಳೂ ಡೇರೆ ಗಳೂ ಸಹಿತವಾಗಿ ಮಿಡಿತೆಗಳ ಹಾಗೆ ಗುಂಪಾಗಿ ಬಂದರು. ಅವರಿಗೂ ಅವರ ಒಂಟೆಗಳಿಗೂ ಎಣಿಕೆ ಇರಲಿಲ್ಲ. ಹೀಗೆ ಅವರು ಅದನ್ನು ಕೆಡಿಸಿಬಿಡುವದಕ್ಕೆ ದೇಶದಲ್ಲಿ ಬಂದರು.
ಆದಕಾರಣ ಇಸ್ರಾಯೇಲ್ಯರು ಮಿದ್ಯಾನ್ಯರಿಂದ ಬಹಳ ಕುಗ್ಗಿಹೋದರು. ಆಗ ಇಸ್ರಾ ಯೇಲ್ ಮಕ್ಕಳು ಕರ್ತನಿಗೆ ಕೂಗಿಕೊಂಡರು.
ಇದಲ್ಲದೆ ಚೀದೋನ್ಯರೂ ಅಮಾಲೇಕ್ಯರೂ ಮಾವೋನ್ಯರೂ ನಿಮ್ಮನ್ನು ಬಾಧೆಪಡಿಸುವಾಗ ನೀವು ನನಗೆ ಕೂಗಿದ್ದರಿಂದ ನಾನು ನಿಮ್ಮನ್ನು ಅವರ ಕೈಗೆ ತಪ್ಪಿಸಿ ರಕ್ಷಿಸಿದೆನು.
ಆದರೆ ಅವರು ತಮ್ಮ ದೇವರಾದ ಕರ್ತನನ್ನು ಮರೆತುಹೋದಾಗ ಆತನು ಅವರನ್ನು ಹಾಚೋರಿನ ಸೈನ್ಯಾಧಿಪತಿಯಾದ ಸೀಸೆರನ ಕೈಗೂ ಫಿಲಿಷ್ಟಿಯರ ಕೈಗೂ ಮೋವಾಬ್ಯರ ಅರಸನ ಕೈಗೂ ಮಾರಿಬಿಟ್ಟನು.
ಆದರೆ ಇಬ್ರಿಯರು ತಮಗೆ ಕತ್ತಿಯನ್ನಾದರೂ ಈಟಿಯನ್ನಾ ದರೂ ಮಾಡಿಕೊಳ್ಳಬಾರದು ಎಂದು ಫಿಲಿಷ್ಟಿಯರು ಹೇಳಿಕೊಂಡದ್ದರಿಂದ ಆಗ ಇಸ್ರಾಯೇಲ್ ದೇಶದಲ್ಲಿ ಒಬ್ಬ ಕಮ್ಮಾರನಾದರೂ ಸಿಕ್ಕಲಿಲ್ಲ.
ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ
ಆದದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಲ್ಲಿ ನಡೆದುಕೊಂಡರು.
ತಮ್ಮ ಕ್ರಿಯೆಗಳಿಂದ ಆತನಿಗೆ ಕೋಪವನ್ನು ಎಬ್ಬಿಸಿದರು; ಆದದರಿಂದ ವ್ಯಾಧಿಯು ಅವರಲ್ಲಿ ಹೊಕ್ಕಿತು.
ದೇವರ ಮಾತುಗಳನ್ನು ಎದುರಿಸಿ, ಮಹೋನ್ನತನ ಆಲೋಚನೆಯನ್ನು ಅಸಹ್ಯಿಸಿದ್ದರಿಂದ