ಬಲ ವುಳ್ಳ ಪಟ್ಟಣಕ್ಕೆ ನನ್ನನ್ನು ಕರೆತರುವವನಾರು? ಏದೋಮಿನ ವರೆಗೆ ನನ್ನನ್ನು ನಡಿಸುವವನಾರು?
Cross references
ಕರ್ತನು ತನ್ನ ಅಭಿಷಕ್ತನನ್ನು ರಕ್ಷಿಸುತ್ತಾ ನೆಂದೂ ತನ್ನ ಪರಿಶುದ್ಧ ಪರಲೋಕದೊಳಗಿಂದ ತನ್ನ ಬಲಗೈಯ ರಕ್ಷಣಕರವಾದ ಪರಾಕ್ರಮದಿಂದ ಅವನಿಗೆ ಉತ್ತರ ಕೊಡುವನೆಂದೂ ಈಗ ನಾನು ಬಲ್ಲೆನು.
ಓ ದೇವರೇ, ಕೋಪಿಸಿಕೊಂಡು ನಮ್ಮನ್ನು ತಳ್ಳಿ ಚದರಿಸಿಬಿಟ್ಟಿದ್ದೀ; ಮತ್ತೆ ನಮ್ಮ ಕಡೆಗೆ ತಿರುಗಿಕೋ.
ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರಗಳನ್ನು ತೊಟ್ಟುಕೊಂಡ ವನಾಗಿ ತನ್ನ ಮಹಾಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? ನೀತಿಯಲ್ಲಿ ಮಾತನಾಡು ವವನೂ ರಕ್ಷಿಸಲು ಬಲಿಷ್ಠನೂ ಆಗಿರುವ ನಾನೇ.
ಅವರನ್ನು ಕಂಡವರೆಲ್ಲರು ಅವರನ್ನು ನುಂಗಿಬಿಟ್ಟರು, ಅವರ ಎದುರಾಳಿಗಳು--ನಮ್ಮಲ್ಲಿ ಅಪರಾಧವಿಲ್ಲ; ನೀತಿಯ ನಿವಾಸವಾದ ಕರ್ತನಿಗೆ, ಅವರ ತಂದೆಗಳ ನಿರೀಕ್ಷಣೆಯಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿದ್ದಾರೆಂದು ಅಂದರು.
ನೀನು ಬಹಳವಾಗಿ ತಿರಸ್ಕರಿಸಲ್ಪಟ್ಟಿದ್ದೀ. ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸ ಮಾಡಿಕೊಂಡವನೇ--ಯಾರು ನನ್ನನ್ನು ನೆಲಕ್ಕೆ ಇಳಿಸ ಬಲ್ಲರೆಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ.