ದೇವರೇ, ಆಕಾಶಗಳ ಮೇಲೆ ನೀನು ಘನಹೊಂದು; ಭೂಮಿಯ ಮೇಲೆ ನಿನ್ನ ಮಹಿಮೆಯು ಇರಲಿ.
Cross references
ಆಗ ದಾವೀದನು ಸಮಸ್ತ ಕೂಟದ ಮುಂದೆ ಕರ್ತನನ್ನು ಕೊಂಡಾಡಿ ಹೇಳಿದ್ದೇನಂದರೆ -- ನಮ್ಮ ತಂದೆ ಯಾದ ಇಸ್ರಾಯೇಲಿನ ದೇವರಾದ ಕರ್ತನೇ, ನೀನು ಯುಗಯುಗಾಂತರಗಳಿಂದ ಯುಗಯುಗಾಂತರ ಗಳಿಗೂ ಸ್ತುತಿಸಲ್ಪಡುವವನಾಗಿದ್ದೀ.
ನಮ್ಮ ದೇವರಾದ ಓ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ. ನಿನ್ನ ಮಹಿಮೆಯನ್ನು ಆಕಾಶಗಳ ಮೇಲೆ ಇರಿಸಿದ್ದೀ.
ಕರ್ತನೇ, ನಿನ್ನ ಸ್ವಂತ ಬಲದಿಂದ ನೀನು ಘನ ಹೊಂದಿದವನಾಗು; ಹೀಗೆ ನಾವು ನಿನ್ನ ಪರಾಕ್ರಮ ವನ್ನು ಹಾಡಿ ಕೀರ್ತಿಸುವೆವು.
ಓ ದೇವರೇ, ಆಕಾಶಗಳಿಗಿಂತ ನೀನು ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಮಹಿಮೆಯು ಇರಲಿ.
ಓ ದೇವರೇ, ಆಕಾಶಕ್ಕಿಂತ ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಘನವು ಇರಲಿ.
ಆತನ ಮಹಿಮೆಯುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ; ಆತನ ಮಹಿ ಮೆಯು ಭೂಮಿಯನ್ನೆಲ್ಲಾ ತುಂಬಲಿ. ಆಮೆನ್. ಆಮೆನ್.ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.
ಕರ್ತನ ಹೆಸರನ್ನು ಸ್ತುತಿಸಿರಿ; ಆತನ ಹೆಸರು ಮಾತ್ರ ಶ್ರೇಷ್ಠವಾಗಿದೆ; ಆತನ ಮಹಿಮೆಯು ಭೂಮ್ಯಾಕಾಶಗಳ ಮೇಲೆ ಅದೆ.ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ; ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು, ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ; ಕರ್ತನನ್ನು ಸ್ತುತಿಸಿರಿ.
ಒಬ್ಬನು ಮತ್ತೊಬ್ಬನಿಗೆ--ಸೈನ್ಯಗಳ ಕರ್ತನು ಪರಿ ಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲ ವೆಲ್ಲಾ ಆತನ ಮಹಿಮೆಯಿಂದ ತುಂಬಿಯದೆ ಎಂದು ಕೂಗಿ ಹೇಳಿದನು.
ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.
ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.