Psalm
Chapter 110
ಕನ್ನಡ ಬೈಬಲ್1ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ,
2ನಿನ್ನ ಬಲಕ್ಕಾಗಿ ಚೀಯೋ ನಿನಿಂದ ಕರ್ತನು ದಂಡವನ್ನು ಕಳುಹಿಸುವನು; ನಿನ್ನ ಶತ್ರುಗಳ ಮಧ್ಯದಲ್ಲಿ ದೊರೆತನಮಾಡು.
3ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.
4ನೀನು ಎಂದೆಂದಿಗೂ ಮೆಲ್ಕೀಜೆದೇಕನ ತರದ ಯಾಜಕನಾಗಿದ್ದೀ ಎಂದು ಕರ್ತನು ಆಣೆಯಿಟ್ಟು ನುಡಿ ದಿದ್ದಾನೆ; ಪಶ್ಚಾತ್ತಾಪಪಡನು.
5ಕರ್ತನು ನಿನ್ನ ಬಲ ಪಾರ್ಶ್ವದಲ್ಲಿದ್ದು ತನ್ನ ಕೋಪದ ದಿವಸದಲ್ಲಿ ಅರಸ ರನ್ನು ಹೊಡೆಯುವನು.
6ಆತನು ಅನ್ಯಜನರಲ್ಲಿ ನ್ಯಾಯತೀರಿಸಿ ಹೆಣಗಳಿಂದ ತುಂಬಿಸುವನು; ಬಹು ದೇಶಗಳ ಮೇಲಿರುವ ತಲೆ ಗಳನ್ನು ಗಾಯಮಾಡುವನು.ದಾರಿಯಲ್ಲಿ ಹಳ್ಳದ ನೀರು ಕುಡಿಯುವನು; ಆದದರಿಂದ ಆತನು ತಲೆ ಎತ್ತುವನು.
7ದಾರಿಯಲ್ಲಿ ಹಳ್ಳದ ನೀರು ಕುಡಿಯುವನು; ಆದದರಿಂದ ಆತನು ತಲೆ ಎತ್ತುವನು.
Bible Study with Steffi App
Download Free ↗
Memorize verses with spaced repetition. Free, no ads, 15+ languages.