Home Bibles ಕೀರ್ತನೆಗಳು 110:4 · ಕನ್ನಡ ಬೈಬಲ್
ಕೀರ್ತನೆಗಳು 110:4 · ಕನ್ನಡ ಬೈಬಲ್

ನೀನು ಎಂದೆಂದಿಗೂ ಮೆಲ್ಕೀಜೆದೇಕನ ತರದ ಯಾಜಕನಾಗಿದ್ದೀ ಎಂದು ಕರ್ತನು ಆಣೆಯಿಟ್ಟು ನುಡಿ ದಿದ್ದಾನೆ; ಪಶ್ಚಾತ್ತಾಪಪಡನು.

Cross references

ಆದಿಕಾಂಡ 14:18

ಸಾಲೇಮಿನ ಅರಸನಾದ ಮೆಲ್ಕೀಚೆದೇಕನು ರೊಟ್ಟಿಯನ್ನೂ ದ್ರಾಕ್ಷಾ ರಸವನ್ನೂ ತಂದನು. ಇವನು ಮಹೋನ್ನತನಾದ ದೇವರ ಯಾಜಕನು.

ಅಂಕೆಗಳ ಪುಸ್ತಕ 23:19

ಸುಳ್ಳಾಡುವ ಹಾಗೆ ದೇವರು ಮನುಷ್ಯನಲ್ಲ, ಪಶ್ಚಾತ್ತಾಪಪಡುವ ಹಾಗೆ ನರಪುತ್ರನಲ್ಲ; ಆತನು ನುಡಿದದ್ದನ್ನು ಮಾಡದಿರುವನೇ? ಮಾತನಾಡಿದ್ದನ್ನು ಆತನು ಸ್ಥಾಪಿಸನೇ?

ಕೀರ್ತನೆಗಳು 89:34

ನನ್ನ ಒಡಂಬಡಿಕೆಯನ್ನು ನಾನು ಮುರಿ ಯೆನು; ಇಲ್ಲವೆ ನನ್ನ ತುಟಿಗಳಿಂದ ಹೊರಟದ್ದನ್ನು ಬದಲಾಯಿಸೆನು.

ಕೀರ್ತನೆಗಳು 132:11

ಕರ್ತನು ದಾವೀದನಿಗೆ ಸತ್ಯದ ಆಣೆ ಇಟ್ಟಿದ್ದಾನೆ; ಅದರಿಂದ ತಿರುಗಿಕೊಳ್ಳನು; ಅದು--ನಿನ್ನ ಸಂತಾನ ವನ್ನು ನಿನ್ನ ಸಿಂಹಾಸನದ ಮೇಲೆ ಇರಿಸು ವದು.

ಜೆಕರ್ಯ 6:13

ಹೌದು, ಆತನು ಕರ್ತನ ದೇವಾಲಯವನ್ನು ಕಟ್ಟು ವನು; ಆತನು ಮಹಿಮೆಯನ್ನು ಧರಿಸುವನು; ಕೂತು ಕೊಂಡು ತನ್ನ ಸಿಂಹಾಸನದಲ್ಲಿ ಆಳುವನು, ತನ್ನ ಸಿಂಹಾಸನದಲ್ಲಿ ಯಾಜಕನಾಗಿರುವನು; ಸಮಾಧಾನದ ಆಲೋಚನೆ ಅವರಿಬ್ಬರೊಳಗೆ ಇರುವದು.

ಹೆಬ್ರಿಯರಿಗೆ 5:6

ಆತನು ಇನ್ನೊಂದು ಸ್ಥಳದಲ್ಲಿ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಹೇಳುತ್ತಾನೆ.

ಹೆಬ್ರಿಯರಿಗೆ 6:13

ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದ್ದರಿಂದ ತನ್ನಾ ಣೆಯಿಟ್ಟು--

ಹೆಬ್ರಿಯರಿಗೆ 6:20

ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.

ಹೆಬ್ರಿಯರಿಗೆ 7:11

ಲೇವಿಯ ಯಾಜಕತ್ವದಿಂದ ಸಂಪೂರ್ಣ ಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿ ಜೆದೇಕನ ತರಹದ ಬೇರೊಬ್ಬ ಯಾಜಕನು ಎದ್ದೇಳು ವದು ಅವಶ್ಯವೇನಿತ್ತು? (ಅದರಲ್ಲಿ ಜನರು ನ್ಯಾಯ ಪ್ರಮಾಣವನ್ನು ಹೊಂದಿದರು).

ಹೆಬ್ರಿಯರಿಗೆ 7:17

ಆತನ ವಿಷಯದಲ್ಲಿ--ನೀನು ಸದಾಕಾಲವು ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನು ಸಾಕ್ಷಿ ಕೊಡುತ್ತಾನೆ.

ಹೆಬ್ರಿಯರಿಗೆ 7:21

(ಆ ಯಾಜಕರೂ ಆಣೆಯಿಲ್ಲದೆ ಯಾಜಕರಾದರು); ಈತನಾದರೊ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನಿಗೆ ಹೇಳಿದ ಕರ್ತನು ಆಣೆಯಿಟ್ಟು ನುಡಿದನು, ಪಶ್ಚಾತ್ತಾಪಪಡುವದಿಲ್ಲ.

ಹೆಬ್ರಿಯರಿಗೆ 7:28

ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.

ಪ್ರಕಟನೆ 1:6

ತನ್ನ ತಂದೆ ಯಾದ ದೇವರಿಗೆ ನಮ್ಮನ್ನು ರಾಜರನ್ನಾಗಿಯೂ ಯಾಜಕ ರನ್ನಾಗಿಯೂ ಮಾಡಿದನು. ಆತನಿಗೆ ಯುಗ ಯುಗಾಂತರಗಳಲ್ಲಿ ಮಹಿಮೆಯೂ ಅಧಿಪತ್ಯವೂ ಇರಲಿ. ಆಮೆನ್‌.

Interlinear

Choose Theme