Psalm
Chapter 112
ಕನ್ನಡ ಬೈಬಲ್1ನೀವು ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಟ್ಟು ಆತನ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವ ಮನುಷ್ಯನು ಧನ್ಯನು.
2ಅವನ ಸಂತತಿಯು ಭೂಮಿಯಲ್ಲಿ ಪರಾಕ್ರಮಶಾಲಿ ಯಾಗಿರುವದು. ಯಥಾರ್ಥರ ಸಂತತಿಯು ಆಶೀ ರ್ವಾದ ಹೊಂದುವದು.
3ದ್ರವ್ಯವೂ ಐಶ್ವರ್ಯವೂ ಅವನ ಮನೆಯಲ್ಲಿ ಅವೆ; ಆತನ ನೀತಿಯು ಎಂದೆಂ ದಿಗೂ ನಿಲ್ಲುತ್ತದೆ.
4ಯಥಾರ್ಥರಿಗೆ ಕತ್ತಲಲ್ಲಿ ಬೆಳಕು ಹುಟ್ಟುತ್ತದೆ; ಆತನು ಕೃಪೆಯೂ ಅಂತಃಕರಣವೂ ನೀತಿ ಯೂ ಉಳ್ಳಾತನೇ.
5ಒಳ್ಳೇಮನುಷ್ಯನು ದಯೆ ತೋರಿಸಿ ಸಾಲಕೊಡುತ್ತಾನೆ; ತನ್ನ ಕಾರ್ಯಗಳನ್ನು ನ್ಯಾಯದಿಂದ ನಡಿಸುವನು.
6ನಿಶ್ಚಯವಾಗಿ ಅವನು ಎಂದೆಂದಿಗೂ ಕದಲನು; ನೀತಿವಂತನು ನಿತ್ಯವಾಗಿ ಜ್ಞಾಪಕದಲ್ಲಿ ಇರುವನು.
7ಅವನು ಕೆಟ್ಟಸುದ್ದಿಗೆ ಭಯಪಡನು; ಅವನ ಹೃದಯವು ಕರ್ತನಲ್ಲಿ ಭರವಸವಿಟ್ಟು ಸ್ಥಿರವಾಗಿದೆ.
8ಅವನ ಹೃದಯವು ದೃಢವಾಗಿದೆ; ತನ್ನ ವೈರಿಗಳ ಮೇಲೆ ತನ್ನ ಇಷ್ಟವನ್ನು ನೋಡುವ ಮಟ್ಟಿಗೂ ಭಯಪಡನು.
9ಅವನು ಬಡವರಿಗೆ ಧಾರಾಳವಾಗಿ ಕೊಡುತ್ತಾನೆ; ಅವನ ನೀತಿ ಎಂದೆಂದಿಗೂ ನಿಲ್ಲು ತ್ತದೆ; ಅವನ ಕೊಂಬು ಘನದಿಂದ ಎತ್ತಲ್ಪಡುವದು.ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
10ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
Bible Study with Steffi App
Download Free ↗
Memorize verses with spaced repetition. Free, no ads, 15+ languages.