Home Bibles ☰ Books ಕೀರ್ತನೆಗಳು 113:1 · ಕನ್ನಡ ಬೈಬಲ್
ಕೀರ್ತನೆಗಳು 113:1 · ಕನ್ನಡ ಬೈಬಲ್

ಕರ್ತನನ್ನು ಸ್ತುತಿಸಿರಿ; ಕರ್ತನ ಸೇವಕರೇ; ಸ್ತುತಿಸಿರಿ; ಕರ್ತನ ಹೆಸರನ್ನು ಸ್ತುತಿಸಿರಿ;

Cross references

ಕೀರ್ತನೆಗಳು 33:1

ಓ ನೀತಿವಂತರೇ, ನೀವು ಕರ್ತನಲ್ಲಿ ಸಂತೋಷಪಡಿರಿ; ಯಥಾರ್ಥರು ಸ್ತೋತ್ರ ಮಾಡುವದು ಯೋಗ್ಯವಾಗಿದೆ.

ಕೀರ್ತನೆಗಳು 34:22

ಕರ್ತನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ; ಆತನಲ್ಲಿ ಭರವಸವಿಡುವವರು ಹಾಳಾಗುವದಿಲ್ಲ.

ಕೀರ್ತನೆಗಳು 69:36

ಅವನ ಸೇವಕರ ಸಂತತಿಯು ಸಹ ಅದನ್ನು ಬಾಧ್ಯವಾಗಿ ಹೊಂದುವದು; ಆತನ ಹೆಸರನ್ನು ಪ್ರೀತಿಮಾಡುವವರು ಅದರಲ್ಲಿ ವಾಸಮಾಡುವರು.

ಕೀರ್ತನೆಗಳು 103:20

ಆತನ ದೂತರೇ, ಆತನ ಮಾತಿನ ಸ್ವರವನ್ನು ಕೇಳಿ, ಆತನ ಆಜ್ಞೆಗಳನ್ನು ನಡಿಸುವ ಶ್ರೇಷ್ಠರಾದ ಶೂರರೇ,

ಕೀರ್ತನೆಗಳು 112:1

ನೀವು ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಟ್ಟು ಆತನ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವ ಮನುಷ್ಯನು ಧನ್ಯನು.

ಕೀರ್ತನೆಗಳು 134:1

ಇಗೋ, ಕರ್ತನ ಆಲಯದಲ್ಲಿ ಪ್ರತಿ ರಾತ್ರಿ ನಿಲ್ಲುವವರಾದ ಕರ್ತನ ಸೇವಕರೆ ಎಲ್ಲಾ ಕರ್ತನನ್ನು ಸ್ತುತಿಸಿರಿ.

ಕೀರ್ತನೆಗಳು 135:1

ಕರ್ತನನ್ನು ಸ್ತುತಿಸಿರಿ. ಕರ್ತನ ಹೆಸರನ್ನು ಸ್ತುತಿಸಿರಿ; ಕರ್ತನ ಆಲಯ ದಲ್ಲಿಯೂ

ಕೀರ್ತನೆಗಳು 135:20

ಲೇವಿಯ ಮನೆಯವರೇ, ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಡುವವರೇ, ಕರ್ತನನ್ನು ಸ್ತುತಿಸಿರಿ.ಯೆರೂಸಲೇಮಿನಲ್ಲಿ ವಾಸಿಸುವ ಕರ್ತನಿಗೆ ಚೀಯೋನಿನೊಳಗಿಂದ ಸ್ತುತಿಯುಂಟಾಗಲಿ. ಕರ್ತನನ್ನು ಸ್ತುತಿಸಿರಿ.

ಕೀರ್ತನೆಗಳು 145:10

ಓ ಕರ್ತನೇ, ನಿನ್ನ ಕೆಲಸಗಳೆಲ್ಲಾ ನಿನ್ನನ್ನು ಕೊಂಡಾಡುವವು; ನಿನ್ನ ಪರಿಶುದ್ಧರು ನಿನ್ನನ್ನು ಸ್ತುತಿಸುವರು.

ಎಫೆಸದವರಿಗೆ 5:19

ಕೀರ್ತನೆಗಳಿಂದಲೂ ಸಂಗೀತ ಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮಗೆ ನೀವೇ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯದಲ್ಲಿ ಕರ್ತನಿಗೆ ಗಾನಮಾಡುತ್ತಾ ಇಂಪಾಗಿ ಹಾಡುತ್ತಾ ಇರ್ರಿ.

ಪ್ರಕಟನೆ 19:5

ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಶಬ್ದವು--ದೇವರ ಸೇವಕರೆಲ್ಲರೇ, ಆತನಿಗೆ ಭಯ ಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಕೊಂಡಾಡಿರಿ ಎಂದು ಹೇಳಿತು.

Interlinear

Choose Theme