ಆಕಾಶದ ಮೇಲೆಯೂ ಭೂಮಿಯ ಮೇಲೆಯೂ ದೃಷ್ಟಿ ಇಡುವದಕ್ಕೆ ಆತನು ತನ್ನನ್ನು ತಗ್ಗಿಸಿಕೊಳ್ಳುತ್ತಾನೆ.
Cross references
ಇಗೋ, ತನ್ನ ಸೇವಕರಲ್ಲಿ ಆತನು ನಂಬಿಕೆ ಇಡುವದಿಲ್ಲ; ತನ್ನ ದೂತರಲ್ಲಿ ತಪ್ಪನ್ನೆಣಿಸುತ್ತಾನೆ.
ಇಗೋ, ತನ್ನ ಪರಿಶುದ್ಧರಲ್ಲಿ ಆತನು ನಂಬಿಕೆ ಇಡುವದಿಲ್ಲ; ಹೌದು, ಆಕಾಶಗಳು ಆತನ ದೃಷ್ಟಿಯಲ್ಲಿ ನಿರ್ಮಲವಲ್ಲ.
ಗಾಳಿಗೂ ತೂಕವನ್ನು ನೇಮಿಸಿ ಆತನು ಭೂಮಿಯ ಕಟ್ಟಕಡೆಗೂ ದೃಷ್ಟಿಸಿ ಆಕಾಶದ ಕೆಳಗೆ ನೋಡುತ್ತಾನೆ.
ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಕರ್ತನ ಸಿಂಹಾಸನವು ಪರಲೋಕದಲ್ಲಿ ಅದೆ; ಆತನ ಕಣ್ಣುಗಳು ದೃಷ್ಟಿಸುತ್ತವೆ; ಆತನ ರೆಪ್ಪೆಗಳು ಮನು ಷ್ಯನ ಮಕ್ಕಳನ್ನು ಶೋಧಿಸುತ್ತವೆ;
ತನ್ನ ನಿವಾಸಸ್ಥಳದಿಂದ ಭೂನಿವಾ ಸಿಗಳೆಲ್ಲರ ಮೇಲೆ ಕಣ್ಣಿಡುತ್ತಾನೆ.
ಕರ್ತನು ಉನ್ನತನಾಗಿದ್ದರೂ ದೀನನನ್ನು ಗಮನಿ ಸುತ್ತಾನೆ. ಆದರೆ ಗರ್ವಿಷ್ಟನನ್ನು ದೂರದಿಂದ ತಿಳು ಕೊಳ್ಳುತ್ತಾನೆ.
ಅದರ ಮೇಲೆ ಸೆರಾಫಿಯರು ನಿಂತಿದ್ದರು! ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು.
ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
ಇವುಗಳ ನ್ನೆಲ್ಲಾ ನನ್ನ ಕೈ ಉಂಟುಮಾಡಿತು; ಇವುಗಳೆಲ್ಲಾ ಇದ್ದವೆಂದು ಕರ್ತನು ಅನ್ನುತ್ತಾನೆ. ಆದರೆ ಇವನ ಮೇಲೆ ದೃಷ್ಟಿ ಇಡುವೆನು ದೀನನೂ ಜಜ್ಜಿದ ಆತ್ಮವುಳ್ಳ ವನೂ ನನ್ನ ವಾಕ್ಯಕ್ಕೆ ನಡುಗುವವನೂ ಯಾವನೋ ಅವನ ಮೇಲೆಯೂ ದೃಷ್ಟಿ ಇಡುವೆನು.