Home Bibles ☰ Books ಕೀರ್ತನೆಗಳು 113:8 · ಕನ್ನಡ ಬೈಬಲ್
ಕೀರ್ತನೆಗಳು 113:8 · ಕನ್ನಡ ಬೈಬಲ್

ಧೂಳಿನೊಳಗಿಂದ ದರಿದ್ರನನ್ನು ಏಳಮಾಡಿ ತಿಪ್ಪೆಯೊಳಗಿಂದ ಬಡವನನ್ನು ಎತ್ತುತ್ತಾನೆ.ಬಂಜೆಯಾದವಳನ್ನು ಮಕ್ಕಳ ಸಂತೋಷ ವುಳ್ಳ ತಾಯಿಯಾಗಿ ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾನೆ ಕರ್ತನನ್ನು ಸ್ತುತಿಸಿರಿ.

Cross references

ಆದಿಕಾಂಡ 41:41

ಇದಲ್ಲದೆ ಫರೋಹನು ಯೋಸೇಫನಿಗೆ--ನೋಡು, ನಾನು ನಿನ್ನನ್ನು ಐಗುಪ್ತದೇಶದ ಮೇಲೆಲ್ಲಾ ನೇಮಿಸಿದ್ದೇನೆ ಅಂದನು.

1 ಸಮುವೇಲ 2:8

ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.

ಯೋಬ 36:7

ನೀತಿವಂತರಿಂದ ತನ್ನ ಕಣ್ಣುಗಳನ್ನು ತೊಲಗಿಸುವದಿಲ್ಲ. ಅವರು ಅರಸುಗಳ ಸಂಗಡ ಸಿಂಹಾಸನದಲ್ಲಿ ಇದ್ದಾರೆ. ಹೌದು, ಆತನು ಅವರನ್ನು, ಎಂದೆಂದಿಗೂ ಸ್ಥಿರಪಡಿಸುತ್ತಾನೆ. ಅವರು ಉನ್ನತಕ್ಕೇರಿಸಲ್ಪಟ್ಟಿದ್ದಾರೆ.

ಕೀರ್ತನೆಗಳು 45:16

ನಿನ್ನ ತಂದೆಗಳಿಗೆ ಬದಲಾಗಿ ನಿನ್ನ ಮಕ್ಕಳು ಇರುವರು; ಅವರನ್ನು ಭೂಮಿಯ ಮೇಲೆಲ್ಲಾ ಪ್ರಧಾನರನ್ನಾಗಿ ಮಾಡುವಿ.ತಲತಲಾಂತರಗಳ ಲ್ಲೆಲ್ಲಾ ನಿನ್ನ ಹೆಸರನ್ನು ನಾನು ಜ್ಞಾಪಕಪಡಿಸುವೆನು; ಆದದರಿಂದ ಜನರು ಯುಗಯುಗಾಂತರಗಳಿಗೂ ನಿನ್ನನ್ನು ಕೊಂಡಾಡುವರು.

ಕೀರ್ತನೆಗಳು 68:13

ನೀವು ಮಡಿಕೆ ಗಳ ಮಧ್ಯದಲ್ಲಿ ಮಲಗಿದಾಗ್ಯೂ ಬೆಳ್ಳಿಯಿಂದಲೂ ಅದರ ರೆಕ್ಕೆಗಳು ಹಳದಿ ಚಿನ್ನದಿಂದಲೂ ಮುಚ್ಚಿದ ಪಾರಿವಾಳದ ರೆಕ್ಕೆಗಳ ಹಾಗಿದ್ದೀರಿ.

ಫಿಲಿಪ್ಪಿಯವರಿಗೆ 2:8

ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಾಗ ತನ್ನನ್ನು ತಗ್ಗಿಸಿ ಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣ ವನ್ನಾದರೂ ಹೊಂದುವಷ್ಟು ವಿಧೇಯನಾದನು.

ಪ್ರಕಟನೆ 5:9

ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;

Interlinear

Choose Theme