Home Psalm 116 · ಕನ್ನಡ ಬೈಬಲ್

Psalm

Chapter 116

ಕನ್ನಡ ಬೈಬಲ್
1ನಾನು ಕರ್ತನನ್ನು ಪ್ರೀತಿ ಮಾಡುತ್ತೇನೆ.ಆತನು ನನ್ನ ಸ್ವರವನ್ನೂ ವಿಜ್ಞಾಪನೆಯನ್ನೂ ಕೇಳಿದ್ದಾನೆ.
2ಆತನು ನನ್ನ ಮೊರೆಯನ್ನು ಆಲಿಸಿದ್ದರಿಂದ ನಾನು ಜೀವದಿಂದಿರುವ ವರೆಗೂ ಆತನನ್ನೇ ಬೇಡುವೆನು.
3ಮರಣದ ದುಃಖ ಗಳು ನನ್ನನ್ನು ಆವರಿಸಿಕೊಂಡವು; ನರಕದ ಬಾಧೆ ಗಳೂ ಇಕ್ಕಟ್ಟೂ ದುಃಖವೂ ನನ್ನನ್ನು ಹಿಡಿದವು.
4ಆಗ ನಾನು ಅಯ್ಯೋ, ಕರ್ತನೇ, ನನ್ನ ಪ್ರಾಣವನ್ನು ತಪ್ಪಿಸು ಎಂದು ಕರ್ತನ ಹೆಸರಿನಲ್ಲಿ ಬೇಡಿದೆನು.
5ಕರ್ತನು ಕೃಪೆಯೂ ನೀತಿಯೂ ಉಳ್ಳವನು; ಹೌದು, ನಮ್ಮ ದೇವರು ಅಂತಃಕರಣವುಳ್ಳವನು.
6ಕರ್ತನು ಸಾಧು ಜನರನ್ನು ಕಾಪಾಡುತ್ತಾನೆ; ನಾನು ಕುಗ್ಗಿದವನಾದಾಗ ನನಗೆ ಸಹಾಯಮಾಡಿದನು.
7ನನ್ನ ಮನವೇ, ನಿನ್ನ ವಿಶ್ರಾಂತಿಗೆ ತಿರುಗಿಕೋ; ಕರ್ತನು ನಿನಗೆ ಉಪಕಾರ ಮಾಡಿದ್ದಾನೆ.
8ನೀನು ನನ್ನ ಪ್ರಾಣ ವನ್ನು ಮರಣಕ್ಕೂ ಕಣ್ಣುಗಳನ್ನು ಕಣ್ಣೀರಿಗೂ ನನ್ನ ಪಾದಗಳು ಬೀಳದಂತೆಯೂ ತಪ್ಪಿಸಿದ್ದೀ.
9ಜೀವಿತರ ದೇಶದಲ್ಲಿ ಕರ್ತನ ಮುಂದೆ ನಡೆದುಕೊಳ್ಳುವೆನು.
10ನಾನು ನಂಬಿದೆನು; ಆದದರಿಂದ ಮಾತಾಡಿದೆನು; ನಾನು ಬಹಳವಾಗಿ ಕುಗ್ಗಿಹೋದೆನು.
11ಮನುಷ್ಯ ರೆಲ್ಲರು ಸುಳ್ಳುಗಾರರೆಂದು ನಾನು ಆತುರತೆಯಿಂದ ಹೇಳಿದೆನು.
12ಆತನು ನನಗೆ ಮಾಡಿದ ಎಲ್ಲಾ ಉಪಕಾರಗಳಿಗೋಸ್ಕರ ನಾನು ಕರ್ತನಿಗೆ ಏನು ಬದಲು ಮಾಡಲಿ?
13ನಾನು ರಕ್ಷಣೆಯ ಪಾತ್ರೆಯನ್ನು ತಕ್ಕೊಂಡು, ಕರ್ತನ ಹೆಸರನ್ನು ಕರೆಯುವೆನು.
14ನನ್ನ ಪ್ರಮಾಣಗಳನ್ನು ಆತನ ಜನರೆಲ್ಲರ ಮುಂದೆಯೇ ಕರ್ತನಿಗೆ ಸಲ್ಲಿಸುವೆನು.
15ಕರ್ತನ ದೃಷ್ಟಿಯಲ್ಲಿ ಆತನ ಪರಿಶುದ್ಧರ ಮರಣವು ಅಮೂಲ್ಯವಾಗಿದೆ.
16ಓ ಕರ್ತನೇ, ನಿಜವಾಗಿ ನಾನು ನಿನ್ನ ಸೇವಕನು. ಹೌದು, ನಾನು ನಿನ್ನ ಸೇವಕನು ನಿನ್ನ ದಾಸಿಯ ಮಗನು; ನೀನು ನನ್ನ ಬಂಧನಗಳನ್ನು ಬಿಚ್ಚಿದ್ದೀ.
17ನಾನು ನಿನಗೆ ಸ್ತೋತ್ರದ ಬಲಿಯನ್ನು ಅರ್ಪಿಸುವೆನು; ಕರ್ತನ ಹೆಸರನ್ನು ಕರೆಯುವೆನು.
18ಓ ಯೆರೂಸಲೇಮೇ, ನನ್ನ ಪ್ರಮಾಣಗಳನ್ನು ಆತನ ಜನರೆಲ್ಲರ ಮುಂದೆಯೇ,ಅಂದರೆ ಕರ್ತನ ಆಲ ಯದ ಅಂಗಳಗಳ ಮಧ್ಯದಲ್ಲಿಯೇ ನಿನಗೆ ಸಲ್ಲಿಸು ವೆನು. ಕರ್ತನನ್ನು ಸ್ತುತಿಸಿರಿ.
19ಅಂದರೆ ಕರ್ತನ ಆಲ ಯದ ಅಂಗಳಗಳ ಮಧ್ಯದಲ್ಲಿಯೇ ನಿನಗೆ ಸಲ್ಲಿಸು ವೆನು. ಕರ್ತನನ್ನು ಸ್ತುತಿಸಿರಿ.
Bible Study with Steffi App

Memorize verses with spaced repetition. Free, no ads, 15+ languages.

Download Free ↗

Choose Theme