Home Bibles ☰ Books ಕೀರ್ತನೆಗಳು 116:3 · ಕನ್ನಡ ಬೈಬಲ್
ಕೀರ್ತನೆಗಳು 116:3 · ಕನ್ನಡ ಬೈಬಲ್

ಮರಣದ ದುಃಖ ಗಳು ನನ್ನನ್ನು ಆವರಿಸಿಕೊಂಡವು; ನರಕದ ಬಾಧೆ ಗಳೂ ಇಕ್ಕಟ್ಟೂ ದುಃಖವೂ ನನ್ನನ್ನು ಹಿಡಿದವು.

Cross references

ಕೀರ್ತನೆಗಳು 18:4

ಮರಣದ ದುಃಖಗಳು ನನ್ನನ್ನು ಆವರಿಸಿಕೊಂಡವು, ಭಕ್ತಿಹೀನರ ಪ್ರವಾಹಗಳು ನನ್ನನ್ನು ಹೆದರಿಸಿದವು.

ಕೀರ್ತನೆಗಳು 18:5

ಪಾತಾಳದ ದುಃಖಗಳು ನನ್ನನ್ನು ಸುತ್ತಿಕೊಂಡವು; ಮರಣದ ನೇಣುಗಳು ನನ್ನನ್ನು ಸುತ್ತಿದವು.

ಕೀರ್ತನೆಗಳು 32:3

ನಾನು ಮೌನವಾಗಿದ್ದಾಗ ದಿನವೆಲ್ಲಾ ನರಳುವದ ರಿಂದ ನನ್ನ ಎಲುಬುಗಳು ಸವೆದು ಹೋದವು.

ಕೀರ್ತನೆಗಳು 38:6

ನಾನು ಕುಗ್ಗಿದ್ದೇನೆ, ಬಹಳವಾಗಿ ಬೊಗ್ಗಿದ್ದೇನೆ; ದಿನವೆಲ್ಲಾ ದುಃಖವುಳ್ಳವನಾಗಿ ತಿರುಗಾಡುತ್ತೇನೆ.

ಕೀರ್ತನೆಗಳು 88:6

ಕೆಳಗಿನ ಆಳವಾದ ಕುಣಿಯಲ್ಲಿಯೂ ಕತ್ತಲೆಯಲ್ಲಿಯೂ ಅಗಾಧಗಳಲ್ಲಿಯೂ ನನ್ನನ್ನು ಇಟ್ಟಿದ್ದಿ.

ಯೆಶಾಯ 53:3

ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.

ಯೋನ 2:2

ನಾನು ನನ್ನ ವ್ಯಥೆಯ ದೆಸೆಯಿಂದ ಕರ್ತನಿಗೆ ಮೊರೆಯಿಟ್ಟೆನು; ಆತನು ನನ್ನ ಕೂಗನ್ನು ಕೇಳಿದನು; ನರಕದ ಹೊಟ್ಟೆ ಯೊಳಗಿಂದ ನಾನು ಕೂಗಿದೆನು, ಆಗ ನನ್ನ ಶಬ್ದವನ್ನು ನೀನು ಕೇಳಿದಿ.

ಮಾರ್ಕ 14:33

ಆತನು ಪೇತ್ರ ಯಾಕೋಬ ಯೋಹಾನರನ್ನು ತನ್ನೊಂದಿಗೆ ಕರಕೊಂಡು ಹೋಗಿ ಅತಿವಿಸ್ಮಯಗೊಂಡು ಬಹಳ ಮನಗುಂದಿದವನಾಗಿ--

ಲೂಕ 22:44

ಆತನು ವೇದನೆಯಲ್ಲಿದ್ದು ಬಹಳ ಆಸಕ್ತಿ ಯಿಂದ ಪ್ರಾರ್ಥಿಸಿದನು. ಆತನ ಬೆವರು ನೆಲಕ್ಕೆ ಬೀಳುತ್ತಿರುವ ದೊಡ್ಡ ರಕ್ತದ ಹನಿಗಳೋಪಾದಿಯಲ್ಲಿತ್ತು.

ಹೆಬ್ರಿಯರಿಗೆ 5:7

ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.

Interlinear

Choose Theme