ನೀನು ನನ್ನ ಪ್ರಾಣ ವನ್ನು ಮರಣಕ್ಕೂ ಕಣ್ಣುಗಳನ್ನು ಕಣ್ಣೀರಿಗೂ ನನ್ನ ಪಾದಗಳು ಬೀಳದಂತೆಯೂ ತಪ್ಪಿಸಿದ್ದೀ.
Cross references
ಪಾಳತಿಯವರು ಪಟ್ಟಣದೊಳಗಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ--ದಯಮಾಡಿ ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ನಮಗೆ ತೋರಿಸು; ನಾವು ನಿನಗೆ ಕರುಣೆ ತೋರಿಸುವೆವು ಅಂದರು.
ಅವನು ಬಿದ್ದು ಹೋದಾಗ್ಯೂ ಪೂರ್ಣ ವಾಗಿ ಕೆಡವಲ್ಪಡುವದಿಲ್ಲ. ಯಾಕಂದರೆ ಕರ್ತನು ತನ್ನ ಕೈಯಿಂದ ಅವನನ್ನು ಮೇಲೆ ಎತ್ತುತ್ತಾನೆ.
ಆದರೆ ದೇವರು ನನ್ನ ಪ್ರಾಣವನ್ನು ಸಮಾಧಿಯ ಬಲದಿಂದ ವಿಮೋಚನೆ ಮಾಡುವನು, ಆತನು ನನ್ನನ್ನು ಅಂಗೀಕರಿಸುವನು. ಸೆಲಾ.
ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀ, ಹಾಗೆ ನಾನು ಜೀವಿತರ ಬೆಳಕಿನಲ್ಲಿ ದೇವರ ಮುಂದೆ ನಡೆಯುವ ನನ್ನ ಪಾದಗಳನ್ನು ಬೀಳದಂತೆ ನೀನು ತಪ್ಪಿಸುವದಿಲ್ಲವೋ?
ನಿನ್ನ ಕರುಣೆಯು ನನ್ನ ಮೇಲೆ ದೊಡ್ಡದಾಗಿದೆ; ಪಾತಾಳ ದೊಳಗಿಂದ ನನ್ನ ಪ್ರಾಣವನ್ನು ಬಿಡಿಸಿದ್ದೀ.
ನನ್ನ ಕಾಲುಜಾರಿತೋ ಎಂದು ನಾನು ಅಂದಾಗಲೇ ಓ ಕರ್ತನೇ, ನಿನ್ನ ಕರುಣೆಯು ನನ್ನನ್ನು ಎತ್ತಿಹಿಡಿಯಿತು.
ಆತನು ಮರಣವನ್ನು ಜಯದಲ್ಲಿ ನುಂಗಿಬಿಡುವನು. ಕರ್ತನಾದ ದೇವರು ಎಲ್ಲಾ ಮುಖ ಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವನು. ತನ್ನ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕು ವನು, ಕರ್ತನೇ ಇದನ್ನು ನುಡಿದಿದ್ದಾನೆ.
ನೀನು ಹೋಗಿ ಹಿಜ್ಕೀ ಯನಿಗೆ ಹೇಳತಕ್ಕದ್ದೇನಂದರೆ--ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೀಗೆ ಹೇಳುತ್ತಾನೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ನೋಡಿದ್ದೇನೆ; ಇಗೋ, ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನೂ ಕೂಡಿಸುತ್ತೇನೆ.
ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು.