Home Bibles ಕೀರ್ತನೆಗಳು 118:15 · ಕನ್ನಡ ಬೈಬಲ್
ಕೀರ್ತನೆಗಳು 118:15 · ಕನ್ನಡ ಬೈಬಲ್

ರಕ್ಷಣೆಯ ಉತ್ಸಾಹದ ಧ್ವನಿಯು ನೀತಿವಂತರ ಗುಡಾರಗಳಲ್ಲಿ ಅದೆ; ಕರ್ತನ ಬಲಗೈ ಪರಾಕ್ರಮವನ್ನು ನಡಿಸುತ್ತದೆ.

Cross references

ನಿರ್ಗಮಕಾಂಡ 15:6

ಓ ಕರ್ತನೇ, ನಿನ್ನ ಬಲಗೈ ಶಕ್ತಿಯಲ್ಲಿ ಮಹಿಮೆಯುಳ್ಳ ದ್ದಾಗಿದೆ. ಓ ಕರ್ತನೇ, ನಿನ್ನ ಬಲಗೈ ಶತ್ರುವನ್ನು ಜಜ್ಜಿ ಪುಡಿಮಾಡಿತು.

ದ್ವಿತೀಯೋಪದೇಶಕಾಂಡ 12:12

ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ಸಂತೋಷವಾಗಿರಬೇಕು; ನೀವೂ ನಿಮ್ಮ ಕುಮಾರ ಕುಮಾರ್ತೆಯರೂ ನಿಮ್ಮ ದಾಸದಾಸಿಯರೂ; ನಿಮ್ಮ ಬಾಗಲುಗಳಲ್ಲಿರುವ ಲೇವಿಯನು ಸಹ. ಅವನಿಗೆ ನಿಮ್ಮ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.

ಕೀರ್ತನೆಗಳು 5:12

ಕರ್ತನೇ, ನೀನು ನೀತಿವಂತನನ್ನು ಆಶೀರ್ವದಿಸುತ್ತೀ. ಖೇಡ್ಯದ ಹಾಗೆ ಅನುಗ್ರಹದಿಂದ ಅವನನ್ನು ಸುತ್ತಿಕೊಳ್ಳುತ್ತೀ.

ಕೀರ್ತನೆಗಳು 30:11

ನೀನು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರು ಗಿಸಿದ್ದೀ; ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಸಂತೋಷ ದಿಂದ ನನ್ನ ನಡುವನ್ನು ಕಟ್ಟಿದ್ದೀ.ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.

ಕೀರ್ತನೆಗಳು 32:11

ನೀತಿವಂತರೇ, ಕರ್ತನಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯಉಳ್ಳವರೇ, ಉತ್ಸಾಹ ಧ್ವನಿಮಾಡಿರಿ.

ಕೀರ್ತನೆಗಳು 44:3

ಅವರು ತಮ್ಮ ಕತ್ತಿಯಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರನ್ನು ರಕ್ಷಿಸಲಿಲ್ಲ; ಆದರೆ ನಿನ್ನ ಬಲಗೈಯೂ ತೋಳೂ ನಿನ್ನ ಮುಖದ ಪ್ರಕಾಶವೂ ಇವುಗಳೇ ಅವರನ್ನು ರಕ್ಷಿಸಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ.

ಕೀರ್ತನೆಗಳು 45:4

ಸತ್ಯತೆ ಸಾತ್ವಿಕತೆ ನೀತಿಗೋಸ್ಕರವೂ ನಿನ್ನ ಘನತೆಯಿಂದ ಅಭಿವೃದ್ಧಿಹೊಂದಿ ಸವಾರಿಮಾಡು; ನಿನ್ನ ಬಲಗೈ ಭಯಂಕರವಾದವುಗಳನ್ನು ನಿನಗೆ ಕಲಿಸುವದು.

ಕೀರ್ತನೆಗಳು 60:12

ದೇವ ರಿಂದ ಪರಾಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.

ಕೀರ್ತನೆಗಳು 68:3

ಆದರೆ ನೀತಿವಂತರು ಸಂತೋಷಿಸಲಿ; ದೇವರ ಮುಂದೆ ಉತ್ಸಾಹಪಡಲಿ; ಹೌದು, ಅವರು ಅತಿಸಂತೋಷದಿಂದ ಹರ್ಷಿಸುವವರಾಗಲಿ.

ಕೀರ್ತನೆಗಳು 89:13

ನಿನಗೆ ಪರಾಕ್ರಮವುಳ್ಳ ತೋಳು ಉಂಟು; ಕೈ ಬಲವುಳ್ಳದ್ದು. ನಿನ್ನ ಬಲಗೈ ಉನ್ನತವಾ ದದ್ದು.

ಕೀರ್ತನೆಗಳು 98:1

ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಆತನು ಅದ್ಭುತಗಳನ್ನು ಮಾಡಿದ್ದಾನೆ; ಆತನ ಬಲಗೈಯೂ ಪರಿಶುದ್ಧತೋಳೂ ಆತನಿಗೆ ಜಯ ವನ್ನು ತಂದಿವೆ.

ಕೀರ್ತನೆಗಳು 111:2

ಕರ್ತನ ಕೆಲಸಗಳು ದೊಡ್ಡವು; ಅವುಗಳಲ್ಲಿ ಸಂತೋಷಪಡುವವರೆಲ್ಲರು ಅವುಗಳನ್ನು ಶೋಧಿಸುತ್ತಾರೆ.

ಕೀರ್ತನೆಗಳು 119:54

ನನ್ನ ಪ್ರವಾಸದ ಮನೆಯಲ್ಲಿ ನಿನ್ನ ನಿಯಮಗಳು ನನಗೆ ಕೀರ್ತನೆಗಳಾಗಿವೆ.

ಕೀರ್ತನೆಗಳು 119:111

ನಿನ್ನ ಸಾಕ್ಷಿಗಳನ್ನು ನಿತ್ಯಸ್ವಾಸ್ತ್ಯವಾಗಿ ತೆಗೆದುಕೊಂಡಿದ್ದೇನೆ; ಅವು ನನ್ನ ಹೃದಯಕ್ಕೆ ಆನಂದವಾಗಿವೆ.

ಯೆಶಾಯ 51:9

ಓ ಕರ್ತನ ತೋಳೇ, ಎಚ್ಚರಗೊಳ್ಳು, ಎಚ್ಚರ ಗೊಳ್ಳು, ಬಲವನ್ನು ಹೊಂದಿಕೋ; ಹಿಂದಿನ ಜನಾಂಗ ಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂ ತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?

ಯೆಶಾಯ 65:13

ಹೀಗಿರುವದರಿಂದ ದೇವರಾದ ಕರ್ತನು ಹೇಳು ವದೇನಂದರೆ--ಇಗೋ, ನನ್ನ ಸೇವಕರು ತಿನ್ನುವರು ಆದರೆ ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ಆದರೆ ನೀವು ಬಾಯಾರಿರುವಿರಿ; ಇಗೋ, ನನ್ನ ಸೇವಕರು ಸಂತೋಷಪಡುವರು; ಆದರೆ ನೀವು ನಾಚಿಕೆಪಡುವಿರಿ;

ಲೂಕ 1:51

ಆತನು ತನ್ನ ಬಾಹುಬಲವನ್ನು ತೋರಿಸಿ ಗರ್ವಿಷ್ಠರನ್ನು ಅವರ ಹೃದಯದ ಕಲ್ಪನೆಗಳ ನಿಮಿತ್ತವಾಗಿ ಅವರನ್ನು ಚದರಿಸಿಬಿಟ್ಟಿದ್ದಾನೆ;

ಅಪೋಸ್ತಲರ ಕೃತ್ಯಗಳು 2:46

ಅವರು ದೇವಾಲಯದಲ್ಲಿ ಪ್ರತಿ ದಿನ ಒಮ್ಮನಸ್ಸಿನಿಂದ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಉಲ್ಲಾಸದಿಂದಲೂ ಏಕಹೃದಯ ದಿಂದಲೂ ಊಟಮಾಡುತ್ತಿದ್ದರು.ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.

ಅಪೋಸ್ತಲರ ಕೃತ್ಯಗಳು 16:34

ತರುವಾಯ ಅವರನ್ನು ತನ್ನ ಮನೆಗೆ ಕರಕೊಂಡು ಹೋಗಿ ಊಟಮಾಡಿಸಿ ತನ್ನ ಮನೆಯವರೆಲ್ಲರ ಸಂಗಡ ದೇವರಲ್ಲಿ ನಂಬಿಕೆಯಿಟ್ಟು ಉಲ್ಲಾಸಗೊಂಡನು.

ಪ್ರಕಟನೆ 18:20

ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.

ಪ್ರಕಟನೆ 19:1

ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು; ಅವರು--ಹಲ್ಲೆಲೂಯಾ; ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು.

Interlinear

Choose Theme