ಕರ್ತನೇ, ನೀನು ನೀತಿವಂತನು; ನಿನ್ನ ನ್ಯಾಯ ವಿಧಿಗಳು ಯಥಾರ್ಥವಾದವುಗಳೇ.
Cross references
ಆತನೇ ಬಂಡೆ. ಆತನ ಕಾರ್ಯವು ಸಂಪೂರ್ಣ ವಾದದ್ದು. ಆತನ ಮಾರ್ಗಗಳೆಲ್ಲಾ ನ್ಯಾಯವಾಗಿವೆ; ಆತನು ಸತ್ಯದ ಮತ್ತು ದೋಷರಹಿತನಾದ ದೇವರು, ಆತನು ನೀತಿವಂತನೂ ಯಥಾರ್ಥನೂ ಆಗಿದ್ದಾನೆ.
ಇಸ್ರಾಯೇಲ್ ದೇವ ರಾಗಿರುವ ಕರ್ತನೇ, ನೀನು ನೀತಿವಂತನಾಗಿದ್ದೀ; ಇಂದಿನ ಪ್ರಕಾರ ನಾವು ತಪ್ಪಿಸಿಕೊಂಡವರಾಗಿ ಉಳಿ ದಿದ್ದೇವೆ. ಇಗೋ, ನಾವು ನಿನ್ನ ಮುಂದೆ ನಮ್ಮ ಅಪರಾಧಗಳಲ್ಲಿದ್ದೇವೆ. ಇದರ ನಿಮಿತ್ತವಾಗಿ ನಿನ್ನ ಮುಂದೆ ನಿಲ್ಲಲಾರದವರಾಗಿದ್ದೇವೆ.
ಆದರೆ ನೀನು ನಮ್ಮ ಮೇಲೆ ಬರಮಾಡಿದ ಎಲ್ಲಾದರಲ್ಲಿ ನೀತಿಪರನಾಗಿದ್ದಿ. ಯಾಕಂದರೆ ನೀನು ಮಾಡಿದ್ದು ಸತ್ಯವಾದದ್ದು; ಆದರೆ ನಾವು ದುಷ್ಟರಾಗಿ ನಡೆದೆವು.
ಅರಸನ ಬಲವು ನ್ಯಾಯವನ್ನು ಪ್ರೀತಿ ಮಾಡುತ್ತದೆ; ನೀನು ನೀತಿಯನ್ನು ಸ್ಥಿರಪಡಿಸುತ್ತೀ; ನ್ಯಾಯವನ್ನೂ ನೀತಿಯನ್ನೂ ಯಾಕೋ ಬಿನಲ್ಲಿ ನೀನು ಮಾಡಿದ್ದೀ.
ಕುಗ್ಗಿಸಲ್ಪಡುವವರೆಲ್ಲರಿಗೆ ಕರ್ತನು ನೀತಿಯನ್ನೂ ನ್ಯಾಯವನ್ನೂ ನಡಿಸುತ್ತಾನೆ.
ಕರ್ತನು ತನ್ನ ಎಲ್ಲಾ ಮಾರ್ಗಗಳಲ್ಲಿ ನೀತಿವಂತನೂ ತನ್ನ ಎಲ್ಲಾ ಕೆಲಸಗಳಲ್ಲಿ ಪರಿಶುದ್ಧನೂ ಆಗಿದ್ದಾನೆ.
ಕರ್ತನು ನನಗೆ--ನೀನು ಹೋಗಿ ನಾರಿನ ದಟ್ಟಿಯನ್ನು ತೆಗೆದುಕೊಂಡು ನಿನ್ನ ನಡುವಿಗೆ ಕಟ್ಟು, ಆದರೆ ಅದನ್ನು ನೀರಿನಲ್ಲಿ ಹಾಕಬೇಡ ಅಂದನು;
ಓ ಕರ್ತನೇ, ನೀನು ನೀತಿವಂತನು; ಆದರೆ ನಾವು ಈ ದಿನದ ಪ್ರಕಾರ ನಾಚಿಕೆಗೀಡಾದವರು; ಯೆಹೂದದ ಮನುಷ್ಯರನ್ನೂ ಯೆರೂಸಲೇಮಿನ ನಿವಾ ಸಿಗಳನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಹತ್ತಿರದಲ್ಲಿ ರುವವರನ್ನೂ ಮತ್ತು ದೂರದಲ್ಲಿರುವವರನ್ನೂ ಅವರು ನಿನಗೆ ವಿರುದ್ಧವಾಗಿ ಮಾಡಿರುವ ಅವರ ಅಪರಾಧದ ನಿಮಿತ್ತ ನೀನು ಅವರನ್ನು ಎಲ್ಲಾ ದೇಶಗಳಲ್ಲಿಯೂ ಓಡಿಸಿ ಬಿಟ್ಟಿದ್ದೀ.
ಆದದರಿಂದ ಕರ್ತನು ಕೇಡಿ ಗಾಗಿ ಕಾದುಕೊಂಡು ಅದನ್ನು ನಮ್ಮ ಮೇಲೆ ತಂದಿ ದ್ದಾನೆ. ನಮ್ಮ ದೇವರಾದ ಕರ್ತನು ತಾನು ಮಾಡುವ ಎಲ್ಲಾ ಕೆಲಸಗಳಲ್ಲೂ ನೀತಿವಂತನೇ; ನಾವಾದರೋ ಆತನ ಸ್ವರಕ್ಕೆ ವಿಧೇಯರಾಗಲಿಲ್ಲ.
ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
ಆದರೆ ನಮ್ಮ ಅನೀತಿಯು ದೇವರ ನೀತಿಯನ್ನು ಪ್ರಸಿದ್ಧಿಪಡಿಸುವದಾದರೆ ನಾವು ಏನು ಹೇಳೋಣ? ಪ್ರತೀಕಾರ ಮಾಡುವ ದೇವರು ಅನೀತಿವಂತನೇನು? (ನಾನು ಮನುಷ್ಯನಂತೆ ಮಾತನಾಡುತ್ತೇನೆ).
ಹಾಗಾದರೆ ನಾವು ಏನು ಹೇಳೋಣ? ದೇವರಲ್ಲಿ ಅನೀತಿ ಉಂಟೋ? ಹಾಗೆ ಎಂದಿಗೂ ಇಲ್ಲ.
ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.
ಆಮೇಲೆ ಯಜ್ಞವೇದಿಯೊಳಗಿಂದ ಮತ್ತೊಬ್ಬನು--ಹೌದು, ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ ಎಂದು ಹೇಳುವದನ್ನು ನಾನು ಕೇಳಿದೆನು.
ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು.