ನನ್ನ ಮಾರ್ಗಗಳು ನಿನ್ನ ನಿಯಮಗಳನ್ನು ಕೈಕೊಳ್ಳುವದಕ್ಕೆ ನನ್ನನ್ನು ನಡಿ ಸಲಿ.
Cross references
ಓ ದೇವರೇ, ಶುದ್ಧಹೃದಯವನ್ನು ನನ್ನಲ್ಲಿ ಸೃಷ್ಟಿಸು, ಸ್ಥಿರವಾದ ಆತ್ಮವನ್ನು ನನ್ನ ಅಂತರಂಗದಲ್ಲಿ ನೂತನಪಡಿಸು.
ನಿನ್ನ ಆಜ್ಞೆಗಳ ಮಾರ್ಗದಲ್ಲಿ ಓಡುವೆನು; ನೀನು ನನ್ನ ಹೃದಯವನ್ನು ವಿಶಾಲಮಾಡುತ್ತೀ.
ಲೋಭದ ಕಡೆಗಲ್ಲ, ನಿನ್ನ ಸಾಕ್ಷಿಗಳ ಕಡೆಗೆ ನನ್ನ ಹೃದಯವನ್ನು ತಿರುಗಿಸು.
ನಿನ್ನ ನ್ಯಾಯಪ್ರಮಾಣವನ್ನು ಸತತವಾಗಿ ಎಂದೆಂದಿಗೂ ಕೈಕೊಳ್ಳುವೆನು.
ನನ್ನ ಬಾಯಿಯನ್ನು ತೆರೆದು ಏದುತ್ತಿದ್ದೇನೆ. ನಿನ್ನ ಆಜ್ಞೆಗಳನ್ನು ನಾನು ಬಯಸಿದ್ದೇನೆ.
ನಿನ್ನ ಕಟ್ಟಳೆಗಳನ್ನು ಪ್ರೀತಿಮಾಡುತ್ತೇನೆಂದು ನೋಡು; ಓ ಕರ್ತನೇ, ನಿನ್ನ ಪ್ರೀತಿ ಕರುಣೆಯ ಪ್ರಕಾರ ನನ್ನನ್ನು ಬದುಕಿಸು.
ನಿನ್ನ ಕೈ ನನ್ನ ಸಹಾಯಕ್ಕಾಗಿರಲಿ; ನಿನ್ನ ಕಟ್ಟಳೆ ಗಳನ್ನು ನಾನು ಆದುಕೊಂಡಿದ್ದೇನೆ.
ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ನಾನು ಅವರಿಗೆ ಬೋಧಿಸಿದೆನು. ಬೆಳಿಗ್ಗೆ ಎದ್ದು ಬೋಧಿಸಿದೆನು, ಆದಾಗ್ಯೂ ಉಪದೇಶ ಹೊಂದುವದಕ್ಕೆ ಅವರು ಕಿವಿ ಗೊಡಲಿಲ್ಲ.
ಹೀಗಿದ್ದಾಗ್ಯೂ ಒಳಮನುಷ್ಯನಿಗನು ಗುಣವಾಗಿ ದೇವರ ನಿಯಮದಲ್ಲಿ ಆನಂದಪಡುವವ ನಾಗಿದ್ದೇನೆ.
ಕರ್ತನು ನಿಮ್ಮ ಹೃದಯಗಳನ್ನು ದೇವರ ಪ್ರೀತಿಯಲ್ಲಿಯೂ ಕ್ರಿಸ್ತನಿಗಾಗಿ ತಾಳ್ಮೆಯಿಂದ ಕಾದು ಕೊಂಡಿರುವ ಹಾಗೆಯೂ ನಡಿಸಲಿ.
ನಿಮ್ಮನ್ನು ಸಕಲ ಸತ್ಕಾರ್ಯಗಳಲ್ಲಿ ಆತನ ಚಿತ್ತವನ್ನು ಮಾಡುವಂತೆ ಪರಿಪೂರ್ಣ ಮಾಡಲಿ. ತನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದ ದ್ದನ್ನು ಯೇಸು ಕ್ರಿಸ್ತನ ಮೂಲಕ ನಿಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.