ಓ ಕರ್ತನೇ, ನಿನ್ನ ವಾಕ್ಯದ ಪ್ರಕಾರ ನಿನ್ನ ಸೇವಕ ನಿಗೆ ಒಳ್ಳೇದನ್ನು ಮಾಡಿದ್ದೀ.
Cross references
ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಯಾಕಂದರೆ ಸಮಸ್ತವೂ ನಿನ್ನಿಂದಲೇ; ನೀನು ಕೊಟ್ಟದ್ದನ್ನೇ ನಿನಗೆ ಅರ್ಪಿಸಿದೆವು.
ನಾನು ಕರ್ತನಿಗೆ ಹಾಡುವೆನು; ಆತನು ನನಗೆ ಮೇಲು ಮಾಡಿದ್ದಾನೆ.
ಕರ್ತನು ನನ್ನ ಪಾಲಿನ ಮತ್ತು ನನ್ನ ಪಾತ್ರೆಯ ಭಾಗವಾಗಿದ್ದಾನೆ; ನೀನು ನನ್ನ ಸ್ವಾಸ್ತ್ಯವನ್ನು ಸ್ಥಿರವಾಗಿ ಕಾಪಾಡುತ್ತೀ.
ನಿನ್ನ ರಕ್ಷಣೆಯ ಗುರಾಣಿಯನ್ನು ಸಹ ನನಗೆ ನೀನು ಕೊಟ್ಟಿದ್ದೀ; ನಿನ್ನ ಬಲಗೈ ನನ್ನನ್ನು ಹಿಡಿದಿದೆ. ನಿನ್ನ ಸಾತ್ವಿಕತ್ವವು ನನ್ನನ್ನು ಹೆಚ್ಚಿಸಿಯದೆ.
ನನ್ನ ವೈರಿಗಳ ಎದುರಿನಲ್ಲಿ ನನ್ನ ಮುಂದೆ ಮೇಜನ್ನು ಸಿದ್ಧಮಾಡುತ್ತೀ; ನೀನು ನನ್ನ ತಲೆಯನ್ನು ಎಣ್ಣೆಯಿಂದ ಅಭಿಷೇಕಿಸುತ್ತೀ; ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.ನಿಶ್ಚಯವಾಗಿ ಒಳ್ಳೇತನವೂ ಕರುಣೆಯೂ ನನ್ನ ಜೀವನದ ದಿವಸ ಗಳಲ್ಲೆಲ್ಲಾ ನನ್ನನ್ನು ಹಿಂಬಾಲಿಸುವವು; ನಾನು ಕರ್ತನ ಮನೆಯಲ್ಲಿ ಎಂದೆಂದಿಗೂ ವಾಸಮಾಡುವೆನು.
ನೀನು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರು ಗಿಸಿದ್ದೀ; ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಸಂತೋಷ ದಿಂದ ನನ್ನ ನಡುವನ್ನು ಕಟ್ಟಿದ್ದೀ.ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.
ನನ್ನ ಮನವೇ, ನಿನ್ನ ವಿಶ್ರಾಂತಿಗೆ ತಿರುಗಿಕೋ; ಕರ್ತನು ನಿನಗೆ ಉಪಕಾರ ಮಾಡಿದ್ದಾನೆ.
ನಿನ್ನ ಸೇವಕನಿಗೆ ಉಪಕಾರಮಾಡು; ಆಗ ನಾನು ಬದುಕಿ, ನಿನ್ನ ವಾಕ್ಯವನ್ನು ಕೈಕೊಳ್ಳುವೆನು.