ನಿನ್ನ ಸೇವಕನ ದಿವಸಗಳು ಎಷ್ಟು? ನನ್ನನ್ನು ಹಿಂಸಿಸುವವರಿಗೆ ಯಾವಾಗ ನ್ಯಾಯ ತೀರಿಸುವಿ?
Cross references
ನನ್ನ ದಿನಗಳು ಮಗ್ಗದ ಲಾಳಿಗಿಂತ ತ್ವರೆಯಾಗಿವೆ; ನಿರೀಕ್ಷೆ ಇಲ್ಲದೆ ಅವು ಮುಗಿಯುತ್ತವೆ.
ಓ ಕರ್ತನೇ, ನಿನ್ನ ಕೋಪದಿಂದ ಏಳು; ನನ್ನ ವೈರಿಗಳ ಉಗ್ರತೆಗಾಗಿ ಎದ್ದೇಳು; ನನ್ನ ನಿಮಿತ್ತ ಎಚ್ಚರಗೊಳ್ಳು; ನೀನು ನ್ಯಾಯತೀರ್ವಿಕೆಯನ್ನು ಆಜ್ಞಾ ಪಿಸಿದ್ದೀಯಲ್ಲಾ.
ಕರ್ತನೇ, ನಾನು ಎಷ್ಟು ಅಸ್ಥಿರನೆಂದು ತಿಳಿಯುವ ಹಾಗೆ ನನ್ನ ಅಂತ್ಯವನ್ನೂ ನನ್ನ ದಿವಸಗಳು ಕೊಂಚ ವೆಂಬದನ್ನೂ ನನಗೆ ತಿಳಿಸು.
ನನ್ನ ಆಯುಸ್ಸು ಎಷ್ಟು ಕಡಿಮೆ ಯೆಂದು ಜ್ಞಾಪಕಮಾಡಿಕೋ; ಎಲ್ಲಾ ಮನುಷ್ಯರನ್ನು ಯಾಕೆ ವ್ಯರ್ಥವಾಗಿ ನಿರ್ಮಿಸಿದ್ದೀ?
ಮರಣವನ್ನು ನೋಡದೆ ಬದುಕುವಂಥ, ಸಮಾಧಿಯ ವಶದಿಂದ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳುವಂಥ, ಪುರುಷನು ಯಾರು ಸೆಲಾ.
ನಾವು ಜ್ಞಾನವುಳ್ಳ ಹೃದಯವನ್ನು ಹೊಂದುವ ಹಾಗೆ, ನಮ್ಮ ದಿವಸಗಳನ್ನು ಲೆಕ್ಕಿಸುವದಕ್ಕೆ ನಮಗೆ ಕಲಿಸು.
ಅವರು--ಓ ಕರ್ತನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂಮಿಯ ಮೇಲೆ ವಾಸಿಸುವವರು ನಮ್ಮ ರಕ್ತವನ್ನು ಸುರಿಸಿದ್ದಕ್ಕಾಗಿ ನೀನು ಎಷ್ಟು ಕಾಲದವರೆಗೆ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದರು.