Psalm
Chapter 12
ಕನ್ನಡ ಬೈಬಲ್1ಕರ್ತನೇ, ಸಹಾಯಮಾಡು; ಯಾಕಂದರೆ ಭಕ್ತನು ಮುಗಿದು ಹೋಗುತ್ತಾನೆ; ನಂಬಿಗಸ್ತರು ಮನುಷ್ಯನ ಮಕ್ಕಳೊಳಗಿಂದ ಇಲ್ಲದೆ ಹೋಗುತ್ತಾರೆ.
2ಒಬ್ಬೊಬ್ಬನು ತನ್ನ ನೆರೆಯವನ ಸಂಗಡ ವ್ಯರ್ಥವಾದ ಮಾತನ್ನು ಆಡುತ್ತಾನೆ; ಮುಖಸ್ತುತಿಯ ತುಟಿಯಿಂದಲೂ ವಂಚನೆಯ ಹೃದಯದಿಂದಲೂ ಅವರು ಮಾತನಾಡುತ್ತಾರೆ.
3ಮುಖಸ್ತುತಿಯ ಎಲ್ಲಾ ತುಟಿಗಳನ್ನೂ ಗರ್ವದಿಂದ ಮಾತನಾಡುವ ನಾಲಿಗೆಯನ್ನೂ ಕರ್ತನು ಕಡಿದು ಬಿಡುವನು.
4ಅವರು--ನಮ್ಮ ನಾಲಿಗೆಯಿಂದ ನಾವು ಬಲಗೊಳ್ಳುವೆವು; ನಮ್ಮ ತುಟಿಗಳು ನಮ್ಮವೇ; ನಮಗೆ ಪ್ರಭುವು ಯಾರು ಅನ್ನುತ್ತಾರೆ.
5ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.
6ಕರ್ತನ ವಾಕ್ಯಗಳು ಶುದ್ಧವಾಕ್ಯಗಳಾಗಿವೆ: ಮಣ್ಣಿನ ಕುಲುಮೆಯಲ್ಲಿ ಏಳು ಸಾರಿ ಕರಗಿ ಪುಟಕ್ಕೆ ಹಾಕಿದ ಬೆಳ್ಳಿಯಂತೆ ಇವೆ.
7ಓ ಕರ್ತನೇ, ನೀನು ಅವರನ್ನು ಕಾಪಾಡಿ ಯುಗ ಯುಗಕ್ಕೂ ಈ ಸಂತತಿಯಿಂದ ಅವರನ್ನು ಬಿಡಿಸಿ ಕಾಯುವಿ.ಅತಿ ನೀಚರು ಹೆಚ್ಚಿಸಲ್ಪಟ್ಟಾಗ ದುಷ್ಟರು ಪ್ರತಿಯೊಂದು ಕಡೆಗೂ ತಿರುಗಾಡುತ್ತಾರೆ.
8ಅತಿ ನೀಚರು ಹೆಚ್ಚಿಸಲ್ಪಟ್ಟಾಗ ದುಷ್ಟರು ಪ್ರತಿಯೊಂದು ಕಡೆಗೂ ತಿರುಗಾಡುತ್ತಾರೆ.
Bible Study with Steffi App
Download Free ↗
Memorize verses with spaced repetition. Free, no ads, 15+ languages.