Home Bibles ಕೀರ್ತನೆಗಳು 122:8 · ಕನ್ನಡ ಬೈಬಲ್
ಕೀರ್ತನೆಗಳು 122:8 · ಕನ್ನಡ ಬೈಬಲ್

ನನ್ನ ಸಹೋದರರ ನಿಮಿತ್ತವೂ ನನ್ನ ಸ್ನೇಹಿತರ ನಿಮಿತ್ತವೂ ನಿನ್ನಲ್ಲಿ ಸಮಾಧಾನವಿರಲೆಂದು ಈಗ ಹೇಳುತ್ತೇನೆ.ನಮ್ಮ ದೇವರಾದ ಕರ್ತನ ಆಲಯದ ನಿಮಿತ್ತ ನಿನಗೆ ಒಳ್ಳೇದನ್ನು ಹುಡುಕುತ್ತೇನೆ.

Cross references

1 ಸಮುವೇಲ 25:6

ಅಭಿವೃದ್ಧಿಯಲ್ಲಿ ಬಾಳುವವನಾದ ಅವನಿಗೆ ಹೇಳ ಬೇಕಾದದ್ದೇನಂದರೆ--ನಿನಗೆ ಸಮಾಧಾನವೂ ನಿನ್ನ ಮನೆಗೆ ಸಮಾಧಾನವೂ ನಿನಗೆ ಉಂಟಾದ ಎಲ್ಲಕ್ಕೂ ಸಮಾಧಾನವೂ ಆಗಲಿ.

ಕೀರ್ತನೆಗಳು 16:3

ಭೂಮಿಯಲ್ಲಿರುವ ಪರಿಶುದ್ಧರಿಗೂ ನನ್ನ ಸಂತೋಷ ವಾಗಿರುವ ಮುಖ್ಯಸ್ಥರಿಗೂ ಸೇರುತ್ತದೆಂದು ಓ ನನ್ನ ಆತ್ಮವೇ, ನೀನು ಕರ್ತನಿಗೆ ಹೇಳಿದ್ದೀ.

ಕೀರ್ತನೆಗಳು 42:4

ಇವುಗಳನ್ನು ಜ್ಞಾಪಕಮಾಡಿಕೊಂಡಾಗ ನನ್ನ ಪ್ರಾಣವು ನನ್ನಲ್ಲಿ ಕ್ಷೀಣಿಸುತ್ತದೆ; ಸಮೂಹ ದೊಂದಿಗೆ ನಾನು ಹೋಗಿ ಉತ್ಸಾಹಧ್ವನಿಯಿಂದಲೂ ಸ್ತೋತ್ರದಿಂದಲೂ ಪರಿಶುದ್ಧ ದಿನವನ್ನು ಆಚರಿಸುವ ಸಮೂಹದ ಸಂಗಡ ದೇವರ ಆಲಯಕ್ಕೆ ಅವರೊಂ ದಿಗೆ ನಾನು ಹೋದೆನಲ್ಲಾ.

ಕೀರ್ತನೆಗಳು 119:63

ನಿನಗೆ ಭಯಪಡುವವರೆಲ್ಲರಿಗೂ ನಿನ್ನ ಕಟ್ಟಳೆಗ ಳನ್ನು ಕೈಕೊಳ್ಳುವವರಿಗೂ, ನಾನು ಸಂಗಡಿಗನಾಗಿದ್ದೇನೆ.

ಎಫೆಸದವರಿಗೆ 4:4

ನಿಮ್ಮ ಕರೆಯುವಿಕೆಯ ಒಂದೇ ನಿರೀಕ್ಷೆಯಲ್ಲಿ ನೀವು ಕರೆಯಲ್ಪಟ್ಟಂತೆಯೇ ದೇಹವು ಒಂದೇ, ಆತ್ಮನು ಒಬ್ಬನೇ,

ಫಿಲಿಪ್ಪಿಯವರಿಗೆ 2:2

ಐಕ್ಯಮತ್ಯವುಳ್ಳವ ರಾಗಿದ್ದು ನನ್ನ ಸಂತೋಷವನ್ನು ಪರಿಪೂರ್ಣ ಮಾಡಿರಿ. ನಿಮ್ಮೆಲ್ಲರಲ್ಲಿ ಒಂದೇ ಪ್ರೀತಿಯಿರಲಿ; ಅನ್ಯೋ ನ್ಯತೆಯುಳ್ಳವರೂ ಒಂದೇ ಮನಸ್ಸಿನವರೂ ಆಗಿರ್ರಿ.

ಯಾಕೋಬ 3:13

ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ.

Interlinear

Choose Theme