Home Bibles ಕೀರ್ತನೆಗಳು 124:6 · ಕನ್ನಡ ಬೈಬಲ್
ಕೀರ್ತನೆಗಳು 124:6 · ಕನ್ನಡ ಬೈಬಲ್

ಆದರೆ ನಮ್ಮನ್ನು ಅವರ ಹಲ್ಲುಗಳಿಗೆ ಬೇಟೆ ಯಾಗಿ ಕೊಡದೆ ಇದ್ದ ಕರ್ತನಿಗೆ ಸ್ತೋತ್ರವಾಗಲಿ.

Cross references

ನಿರ್ಗಮಕಾಂಡ 15:9

ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು.

ನ್ಯಾಯಾಧಿಪತಿಗಳು 5:30

ಅವರು ಓಡಲಿಲ್ಲವೋ? ಕೊಳ್ಳೆಹಂಚಿ ಕೊಳ್ಳಲಿಲ್ಲವೋ? ಒಬ್ಬೊಬ್ಬ ಮನುಷ್ಯನಿಗೆ ಒಂದೆರಡು ಹೆಣ್ಣು, ಸೀಸೆರನಿಗೆ ನಾನಾ ವರ್ಣವುಳ್ಳ ಕೊಳ್ಳೆ, ನಾನಾ ವರ್ಣವುಳ್ಳಂಥ ವಿಚಿತ್ರವಾಗಿ, ಹೊಲಿದಂಥ, ಎರಡು ಪಕ್ಕೆಗಳಲ್ಲಿ ವಿಚಿತ್ರವಾಗಿ ಹೊಲಿದಂಥ, ಕೊಳ್ಳೆ ಹಿಡಿ ಯುವರ ಕಂಠಗಳಿಗೆ ತಕ್ಕಂಥ ನಾನಾ ವರ್ಣವುಳ್ಳ ಕೊಳ್ಳೆ, ಸಿಕ್ಕಲಿಲ್ಲವೋ?ಓ ಕರ್ತನೇ, ಹೀಗೆಯೇ ನಿನ್ನ ಶತ್ರುಗಳೆಲ್ಲರು ನಾಶವಾಗಲಿ, ಆದರೆ ಆತನನ್ನು ಪ್ರೀತಿಮಾಡುವವರು ತನ್ನ ಪರಾಕ್ರಮದಿಂದ ಹೊರ ಡುವ ಸೂರ್ಯನ ಹಾಗೆಯೇ ಇರಲಿ. ದೇಶವು ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.

1 ಸಮುವೇಲ 26:20

ಆದದರಿಂದ ಕರ್ತನ ಮುಖದ ಮುಂದೆ ನನ್ನ ರಕ್ತವು ನೆಲದ ಮೇಲೆ ಬೀಳದಿರಲಿ. ಯಾಕಂದರೆ ಒಬ್ಬನು ಬೆಟ್ಟಗಳಲ್ಲಿ ಕೌಜುಗವನ್ನು ಬೇಟೆಯಾಡುವಂತೆ ಇಸ್ರಾಯೇಲಿನ ಅರಸನು ಒಂದು ಕೀಟವನ್ನು ಹುಡು ಕಲು ಹೊರಟನು ಎಂಬದೇ.

ಕೀರ್ತನೆಗಳು 17:9

ನಿನ್ನ ರೆಕ್ಕೆ ಗಳ ನೆರಳಿನಲ್ಲಿ ನನ್ನನ್ನು ಮರೆಮಾಡು, ನನ್ನನ್ನು ಬಾಧಿ ಸುವ ದುಷ್ಟರಿಗೂ ನನ್ನನ್ನು ಸುತ್ತಿಕೊಳ್ಳುವ ಪ್ರಾಣ ಶತ್ರುಗಳಿಗೂ ಸಿಕ್ಕದಂತೆ ತಪ್ಪಿಸುವಿ.

ಕೀರ್ತನೆಗಳು 118:13

ನಾನು ಬೀಳುವ ಹಾಗೆ ನೀನು ನನ್ನನ್ನು ಕಠಿಣವಾಗಿ ನೂಕಿದ್ದೀ; ಆದರೆ ಕರ್ತನು ನನಗೆ ಸಹಾಯ ಮಾಡಿ ದನು.

ಕೀರ್ತನೆಗಳು 145:5

ನಿನ್ನ ಮಹಿಮೆಯ ಘನದ ಪ್ರಭೆಯ ವಿಷಯ ವಾಗಿಯೂ ನಿನ್ನ ಅದ್ಭುತಕಾರ್ಯಗಳ ವಿಷಯ ವಾಗಿಯೂ

ಯೆಶಾಯ 10:14

ಜನಗಳ ಐಶ್ವರ್ಯವು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ, ಬಿಡಲ್ಪಟ್ಟ ಮೊಟ್ಟೆಗಳನ್ನು ಕೂಡಿಸುವಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ; ರೆಕ್ಕೆಯಾ ಡಿಸಿ ಬಾಯಿತೆರೆದು ಕಿಚುಗುಟ್ಟುವವರು ಯಾರೂ ಇಲ್ಲವೆಂದು ಅಂದುಕೊಂಡನು.

Interlinear

Choose Theme