Home Bibles ಕೀರ್ತನೆಗಳು 129:2 · ಕನ್ನಡ ಬೈಬಲ್
ಕೀರ್ತನೆಗಳು 129:2 · ಕನ್ನಡ ಬೈಬಲ್

ನನ್ನ ಯೌವನ ದಿಂದ ಅವರು ನನ್ನನ್ನು ಬಹಳ ಬಾಧಿಸಿದರು; ಆದರೆ ಅವರು ನನ್ನನ್ನು ಗೆಲ್ಲಲಿಲ್ಲ.

Cross references

ನಿರ್ಗಮಕಾಂಡ 1:11

ಆಗ ಅವರನ್ನು ತಮ್ಮ ಬಿಟ್ಟೀಕೆಲಸಗಳಿಂದ ಶ್ರಮೆಪಡಿಸುವ ಹಾಗೆ ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ನೇಮಿಸಿದರು. ಅವರು ಫರೋಹನಿಗೆ ಪಿತೋಮ್‌ ರಾಮ್ಸೇಸ್‌ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.

ಯೋಬ 5:19

ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವನು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು.

ಕೀರ್ತನೆಗಳು 34:19

ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.

ಕೀರ್ತನೆಗಳು 42:1

ಓ ದೇವರೇ, ಜಿಂಕೆಯು ನೀರಿನ ತೊರೆಗಳನ್ನು ಹೇಗೆ ಬಯಸುವದೋ ಹಾಗೆಯೇ ನನ್ನ ಪ್ರಾಣವು ನಿನ್ನನ್ನು ಬಯಸುತ್ತದೆ.

ಕೀರ್ತನೆಗಳು 118:13

ನಾನು ಬೀಳುವ ಹಾಗೆ ನೀನು ನನ್ನನ್ನು ಕಠಿಣವಾಗಿ ನೂಕಿದ್ದೀ; ಆದರೆ ಕರ್ತನು ನನಗೆ ಸಹಾಯ ಮಾಡಿ ದನು.

ಕೀರ್ತನೆಗಳು 125:1

ಕರ್ತನಲ್ಲಿ ಭರವಸವಿಡುವವರು ಚೀಯೋನ್‌ ಪರ್ವತದ ಹಾಗಿ ದ್ದಾರೆ; ಅದು ಕದಲದೆ ಯುಗಯುಗಕ್ಕೂ ಇರುವದು.

ಮತ್ತಾಯ 16:18

ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.

ಯೋಹಾನ 16:33

ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.

ರೋಮಾಪುರದವರಿಗೆ 8:35

ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಬರಗಾಲವೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ?

2 ಕೊರಿಂಥದವರಿಗೆ 4:8

ಎಲ್ಲಾ ಕಡೆಗಳಲ್ಲಿ ನಮಗೆ ಕಳವಳ ವಿದ್ದರೂ ನಾವು ಸಂಕಟಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ.

ಪ್ರಕಟನೆ 12:8

ಆಗ ಪರಲೋಕದಲ್ಲಿ ಅವರಿಗೆ ಸ್ಥಾನವು ಇನ್ನೆಂದಿಗೂ ಇಲ್ಲದೆ ಹೋಯಿತು.

Interlinear

Choose Theme