Home Bibles ಕೀರ್ತನೆಗಳು 130:3 · ಕನ್ನಡ ಬೈಬಲ್
ಕೀರ್ತನೆಗಳು 130:3 · ಕನ್ನಡ ಬೈಬಲ್

ಕರ್ತನೇ, ನೀನು ಅಕ್ರಮಗಳ ಮೇಲೆ ಕಣ್ಣಿಟ್ಟರೆ ಓ ಕರ್ತನೇ, ಯಾರು ನಿಲ್ಲುವರು?

Cross references

ದ್ವಿತೀಯೋಪದೇಶಕಾಂಡ 9:27

ನಿನ್ನ ದಾಸರಾದ ಅಬ್ರಹಾಮ್‌ ಇಸಾಕ್‌ ಯಾಕೋಬರನ್ನು ಜ್ಞಾಪಕಮಾಡಿಕೋ; ಈ ಜನರ ಕಾಠಿಣ್ಯದ ಮೇಲೆಯೂ ಇಲ್ಲವೆ ಅವರ ದುಷ್ಟತ್ವದ ಮೇಲೆಯೂ ಅವರ ಪಾಪದ ಮೇಲೆಯೂ ದೃಷ್ಟಿ ಇಡಬೇಡ.

ಎಜ್ರಾ 9:15

ಇಸ್ರಾಯೇಲ್‌ ದೇವ ರಾಗಿರುವ ಕರ್ತನೇ, ನೀನು ನೀತಿವಂತನಾಗಿದ್ದೀ; ಇಂದಿನ ಪ್ರಕಾರ ನಾವು ತಪ್ಪಿಸಿಕೊಂಡವರಾಗಿ ಉಳಿ ದಿದ್ದೇವೆ. ಇಗೋ, ನಾವು ನಿನ್ನ ಮುಂದೆ ನಮ್ಮ ಅಪರಾಧಗಳಲ್ಲಿದ್ದೇವೆ. ಇದರ ನಿಮಿತ್ತವಾಗಿ ನಿನ್ನ ಮುಂದೆ ನಿಲ್ಲಲಾರದವರಾಗಿದ್ದೇವೆ.

ಯೋಬ 9:2

ಸತ್ಯವು ಹೀಗೆ ಇರುವದೆಂದು ಬಲ್ಲೆನು. ಆದರೆ ಮನುಷ್ಯನು ದೇವರ ಮುಂದೆ ನೀತಿವಂತ ನಾಗುವದು ಹೇಗೆ?

ಯೋಬ 9:20

ನನ್ನನ್ನು ನಾನು ನೀತಿವಂತನನ್ನಾಗಿ ಮಾಡಿ ಕೊಂಡರೆ ನನ್ನ ಸ್ವಂತ ಬಾಯಿ ನನ್ನನ್ನು ಖಂಡಿಸುತ್ತದೆ. ನಾನು ಸಂಪೂರ್ಣನಾಗಿದ್ದೇನೆಂದು ಹೇಳಿದರೆ ನಾನು ವಕ್ರನಾಗಿದ್ದೇನೆಂದು ಅದು ಸಿದ್ಧಾಂತಮಾಡುವದು.

ಯೋಬ 10:14

ನಾನು ಪಾಪಮಾಡಿದರೆ ನನ್ನನ್ನು ಗುರುತಿಸಿ ನನ್ನ ಅಕ್ರಮವನ್ನು ಪರಿಹರಿಸುವದಿಲ್ಲ.

ಯೋಬ 15:14

ನಿರ್ಮಲನಾಗುವ ಹಾಗೆ ಮನುಷ್ಯನು ಎಷ್ಟರವನು? ನೀತಿವಂತನಾಗಿರುವ ಹಾಗೆ ಸ್ತ್ರೀಯಿಂದ ಹುಟ್ಟಿದವನು ಯಾರು?

ಕೀರ್ತನೆಗಳು 76:7

ನೀನು, ನೀನೇ, ಭಯಹುಟ್ಟಿಸುತ್ತೀ; ನೀನು ಒಂದು ಸಾರಿ ಕೋಪಿಸಿಕೊಂಡರೆ ನಿನ್ನ ಮುಂದೆ ನಿಲ್ಲುವವನಾರು?

ಕೀರ್ತನೆಗಳು 143:2

ನಿನ್ನ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡ; ಜೀವಿತರಲ್ಲಿ ಒಬ್ಬನಾದರೂ ನಿನ್ನ ಮುಂದೆ ನೀತಿವಂತನಾಗುವದಿಲ್ಲ.

ಯೆಶಾಯ 53:6

ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.

ನಹೂಮ 1:6

ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.

ಮಲಾಕಿ 3:2

ಆದರೆ ಆತನ ಬರುವಿಕೆಯ ದಿವಸದಲ್ಲಿ ಯಾರು ಉಳಿದಾರು? ಆತನು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಆತನು ಅಕ್ಕಸಾಲಿಗನ ಬೆಂಕಿಯ ಹಾಗೆಯೂ ಅಗಸನ ಚೌಳಿನ ಹಾಗೆಯೂ ಇದ್ದಾನೆ.

ಯೋಹಾನ 8:7

ಆದರೆ ಅವರು ಬಿಡದೆ ಆತನನ್ನು ಕೇಳುತ್ತಿರಲು ಆತನು ಮೇಲಕ್ಕೆ ನೋಡಿ--ನಿಮ್ಮೊಳಗೆ ಯಾವನು ಪಾಪವಿಲ್ಲದವನಾಗಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲನ್ನು ಹಾಕಲಿ ಎಂದು ಅವರಿಗೆ ಹೇಳಿದನು.

ರೋಮಾಪುರದವರಿಗೆ 3:20

ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ.

ಪ್ರಕಟನೆ 6:17

ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.

Interlinear

Choose Theme