Home Bibles ಕೀರ್ತನೆಗಳು 134:3 · ಕನ್ನಡ ಬೈಬಲ್
ಕೀರ್ತನೆಗಳು 134:3 · ಕನ್ನಡ ಬೈಬಲ್

ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.

Cross references

ರೂತ 2:4

ಇಗೋ, ಬೋವಜನು ಬೇತ್ಲೆಹೇಮಿನಿಂದ ಬಂದು ಕೊಯ್ಯುವವರಿಗೆ ಕರ್ತನು ನಿಮ್ಮ ಸಂಗಡ ಇರಲಿ ಅಂದನು. ಅದಕ್ಕೆ ಅವರು ಕರ್ತನು ನಿನ್ನನ್ನು ಆಶೀರ್ವ ದಿಸಲಿ ಅಂದರು.

ಕೀರ್ತನೆಗಳು 14:7

ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬರಲಿ; ಕರ್ತನು ತನ್ನ ಜನರನ್ನು ಸೆರೆಯಿಂದ ತಿರಿಗಿ ಬರಮಾಡುವಾಗ ಯಾಕೋಬನು ಉಲ್ಲಾಸಿ ಸುವನು, ಇಸ್ರಾಯೇಲನು ಸಂತೋಷಿಸುವನು.

ಕೀರ್ತನೆಗಳು 20:2

ಪರಿಶುದ್ಧ ಸ್ಥಳದೊಳಗಿಂದ ನಿನಗೆ ಸಹಾಯ ಕಳುಹಿಸಲಿ; ಚೀಯೋ ನಿನಿಂದ ನಿನ್ನನ್ನು ಬಲಪಡಿಸಲಿ.

ಕೀರ್ತನೆಗಳು 20:3

ನಿನ್ನ ಅರ್ಪಣೆಗಳನ್ನೆಲ್ಲಾ ಜ್ಞಾಪಕಮಾಡಿ ನಿನ್ನ ದಹನಬಲಿಯನ್ನು ಅಂಗೀಕರಿಸಲಿ. ಸೆಲಾ.

ಕೀರ್ತನೆಗಳು 110:2

ನಿನ್ನ ಬಲಕ್ಕಾಗಿ ಚೀಯೋ ನಿನಿಂದ ಕರ್ತನು ದಂಡವನ್ನು ಕಳುಹಿಸುವನು; ನಿನ್ನ ಶತ್ರುಗಳ ಮಧ್ಯದಲ್ಲಿ ದೊರೆತನಮಾಡು.

ಕೀರ್ತನೆಗಳು 115:15

ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಕರ್ತನಿಂದ ನೀವು ಆಶೀರ್ವದಿಸಲ್ಪಟ್ಟವರು.

ಕೀರ್ತನೆಗಳು 124:8

ನಮ್ಮ ಸಹಾಯವು ಆಕಾ ಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನ ಹೆಸರಿನಲ್ಲಿ ಇದೆ.

ಕೀರ್ತನೆಗಳು 128:5

ಕರ್ತನು ನಿನ್ನನ್ನು ಚೀಯೋನಿನೊಳಗಿಂದ ಆಶೀರ್ವದಿಸುವನು; ನಿನ್ನ ಜೀವನದ ದಿವಸಗಳೆಲ್ಲಾ ನೀನು ಯೆರೂಸಲೇಮಿನ ಒಳ್ಳೆಯದನ್ನು ನೋಡುವಿ.ಹೌದು, ನಿನ್ನ ಮಕ್ಕಳ ಮಕ್ಕಳನ್ನೂ ಇಸ್ರಾಯೇಲಿನ ಮೇಲಿರುವ ಸಮಾಧಾನ ವನ್ನೂ ನೀನು ನೋಡುವಿ.

ಕೀರ್ತನೆಗಳು 135:21

ಯೆರೂಸಲೇಮಿನಲ್ಲಿ ವಾಸಿಸುವ ಕರ್ತನಿಗೆ ಚೀಯೋನಿನೊಳಗಿಂದ ಸ್ತುತಿಯುಂಟಾಗಲಿ. ಕರ್ತನನ್ನು ಸ್ತುತಿಸಿರಿ.

ಕೀರ್ತನೆಗಳು 136:5

ಆಕಾಶ ವನ್ನು ಜ್ಞಾನದಿಂದ ಉಂಟುಮಾಡಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

ಕೀರ್ತನೆಗಳು 146:5

ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು.

ಜೆಕರ್ಯ 12:1

ಇಸ್ರಾಯೇಲಿನ ವಿಷಯವಾದ ಕರ್ತನ ವಾಕ್ಯದ ಭಾರವು ಆಕಾಶವನ್ನು ಹರಡಿಸು ವಾತನೂ ಭೂಮಿಯ ಅಸ್ತಿವಾರವನ್ನು ಹಾಕುವಾತನೂ ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತನೂ ಆದ ಕರ್ತನು ಹೇಳುವದೇನಂದರೆ--

ರೋಮಾಪುರದವರಿಗೆ 11:26

ಹೀಗೆ ಇಸ್ರಾಯೇಲ್‌ ಜನರೆಲ್ಲಾ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ--ಬಿಡಿಸು ವಾತನು ಚೀಯೋನಿನೊಳಗಿಂದ ಹೊರಟುಬಂದು ಯಾಕೋಬಿನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆ ಮಾಡುವನು.

Interlinear

Choose Theme