Home Bibles ಕೀರ್ತನೆಗಳು 136 · ಕನ್ನಡ ಬೈಬಲ್ ||

ಕೀರ್ತನೆಗಳು

Chapter 136

ಕನ್ನಡ ಬೈಬಲ್
1ಕರ್ತನನ್ನು ಕೊಂಡಾಡಿರಿ, ಆತನು ಒಳ್ಳೆಯವನು; ಆತನ ಕರುಣೆಯು ಎಂದೆಂದಿಗೂ ಅದೆ. 2ದೇವರುಗಳ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 3ಕರ್ತರ ಕರ್ತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 4ಒಬ್ಬನಾಗಿ ದೊಡ್ಡ ಅದ್ಭುತಗಳನ್ನು ಮಾಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 5ಆಕಾಶ ವನ್ನು ಜ್ಞಾನದಿಂದ ಉಂಟುಮಾಡಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 6ಭೂಮಿಯನ್ನು ನೀರಿನ ಮೇಲೆ ಹಾಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 7ದೊಡ್ಡ ಬೆಳಕುಗಳನ್ನು ಉಂಟು ಮಾಡಿದಾತ ನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 8ಹಗಲನ್ನು ಆಳುವದಕ್ಕೆ ಸೂರ್ಯನನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 9ಇರುಳನ್ನು ಆಳುವದಕ್ಕೆ ಚಂದ್ರ ನಕ್ಷತ್ರಗಳನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 10ಐಗುಪ್ತದ ಚೊಚ್ಚಲಾದವುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 11ಇಸ್ರಾಯೇಲನನ್ನು ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ. 12ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಅವರನ್ನು ಹೊರಗೆ ತಂದನು; ಆತನ ಕರುಣೆಯು ಎಂದೆಂದಿಗೂ ಅದೆ. 13ಕೆಂಪು ಸಮುದ್ರವನ್ನು ವಿಭಾಗಿಸಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 14ಇಸ್ರಾಯೇಲನ್ನು ಅದರ ನಡುವೆ ನಡಿಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 15ಫರೋಹನನ್ನೂ ಅವನ ಸೈನ್ಯವನ್ನೂ ಕೆಂಪು ಸಮು ದ್ರದಲ್ಲಿ ಕೆಡವಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 16ತನ್ನ ಜನರನ್ನು ಅರಣ್ಯದಲ್ಲಿ ನಡೆಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 17ದೊಡ್ಡ ಅರಸುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 18ಪ್ರಸಿ ದ್ಧರಾದ ಅರಸುಗಳನ್ನು ಕೊಂದುಹಾಕಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 19ಅಮೋರಿಯರ ಅರಸನಾದ ಸೀಹೋನನು ಒಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ. 20ಬಾಷಾ ನಿನ ಅರಸನಾದ ಓಗನೊಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ. 21ಅವರ ದೇಶವನ್ನು ಬಾಧ್ಯತೆ ಯಾಗಿ ಕೊಟ್ಟಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ. 22ತನ್ನ ಸೇವಕನಾದ ಇಸ್ರಾಯೇಲಿಗೆ ಅದು ಬಾಧ್ಯತೆಯಾಗಿದೆ; ಆತನ ಕರುಣೆಯು ಎಂದೆಂದಿಗೂ ಅದೆ. 23ನಮ್ಮ ದೀನಸ್ಥಿತಿಯಲ್ಲಿ ನಮ್ಮನ್ನು ನೆನಸಿ ಕೊಂಡಾ ತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂ ದಿಗೂ ಅದೆ. 24ನಮ್ಮ ವೈರಿಗಳಿಂದ ನಮ್ಮನ್ನು ಬಿಡಿ ಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 25ಮನುಷ್ಯರಿಗೆಲ್ಲಾ ಆಹಾರ ಕೊಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.ಪರಲೋಕದ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 26ಪರಲೋಕದ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

Choose Theme