ನಿನ್ನ ಪರಿಶುದ್ಧ ಮಂದಿರದ ಕಡೆಗೆ ಅಡ್ಡ ಬಿದ್ದು ನಿನ್ನ ಪ್ರೀತಿ ಕರುಣೆಯ ನಿಮಿತ್ತವೂ ನಿನ್ನ ಸತ್ಯದ ನಿಮಿತ್ತವೂ ನಿನ್ನ ಹೆಸರನ್ನು ಕೊಂಡಾಡುವೆನು; ನಿನ್ನ ವಾಕ್ಯವನ್ನು ನಿನ್ನ ಎಲ್ಲಾ ಹೆಸರಿಗಿಂತಲೂ ಮಿಗಿಲಾಗಿ ಘನಪಡಿಸಿದ್ದೀ.
Cross references
ಅವನುನನ್ನ ತಂದೆಯಾದ ದಾವೀದನ ಸಂಗಡ ಮಾತನಾಡಿ ತನ್ನ ಕೈಯಿಂದ ನೆರವೇರಿಸಿದ ಇಸ್ರಾಯೇಲಿನ ದೇವ ರಾದ ಕರ್ತನು ಸ್ತುತಿಸಲ್ಪಡಲಿ. ಆತನು ಹೇಳಿದ್ದೇ ನಂದರೆ--
ಈಗ ಕರ್ತನು ತಾನು ಹೇಳಿದ ವಾಕ್ಯ ವನ್ನು ಪೂರೈಸಿದ್ದಾನೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಎದ್ದು, ಕರ್ತನು ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ದೇವರಾದ ಕರ್ತನ ನಾಮಕ್ಕೆ ಮಂದಿರವನ್ನು ಕಟ್ಟಿಸಿದ್ದೇನೆ.
ನಿನ್ನ ಸೇವಕನಾದಂಥ ನನ್ನ ತಂದೆ ಯಾದ ದಾವೀದನಿಗೆ ವಾಗ್ದಾನಮಾಡಿ ನೆರವೇರಿಸಿದಾ ತನೇ,
ನಿನ್ನ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀನು ಕೇಳುವ ಹಾಗೆ ಅಲ್ಲಿ ನನ್ನ ಹೆಸರಿರುವದೆಂದು ನೀನು ಹೇಳಿದ ಸ್ಥಳವಾದ ಈ ಮಂದಿರದ ಮೇಲೆ ರಾತ್ರಿ ಹಗಲು ನಿನ್ನ ಕಟಾಕ್ಷವಿರಲಿ.
ನಾನಾದರೋ, ನಿನ್ನ ಕರುಣಾತಿಶಯದಿಂದ ನಿನ್ನ ಆಲಯಕ್ಕೆ ಬರುವೆನು; ನಿನಗೆ ಭಯಪಟ್ಟು ನಿನ್ನ ಪರಿಶುದ್ಧ ಮಂದಿರದ ಕಡೆಗೆ ಆರಾಧಿಸುವೆನು.
ಓ ಕರ್ತನೇ, ನನ್ನ ವಿರೋಧಿಗಳ ನಿಮಿತ್ತ ನಿನ್ನ ನೀತಿಯಲ್ಲಿ ನನ್ನನ್ನು ನಡಿಸು; ನಿನ್ನ ಮಾರ್ಗವನ್ನು ನನ್ನ ಮುಂದೆ ಸರಾಗಮಾಡು.
ನಾನು ನಿನಗೆ ಮೊರೆಯಿಡು ವಾಗ ನನ್ನ ಕೈಗಳನ್ನು ನಿನ್ನ ಪರಿಶುದ್ಧ ದೈವೋಕ್ತಿಯ ಕಡೆಗೆ ಎತ್ತುವಾಗ ನನ್ನ ವಿಜ್ಞಾಪನೆಯ ಶಬ್ದವನ್ನು ಕೇಳು.
ಓ ಕರ್ತನೇ, ಆಕಾಶದಲ್ಲಿ ನಿನ್ನ ಕರುಣೆಯು ಅದೆ; ನಿನ್ನ ನಂಬಿಗಸ್ತಿಕೆಯು ಮೇಘಗಳ ವರೆಗೆ ಮುಟ್ಟಿದೆ.
ದೇವರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ದೇವರಲ್ಲಿ ನಾನು ಭರವಸವಿಟ್ಟಿದ್ದೇನೆ; ನಾನು ಭಯಪಡೆನು, ಮನುಷ್ಯನು ನನಗೆ ಏನು ಮಾಡಬಲ್ಲನು?
ದೇವ ರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ಕರ್ತ ನಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು.
ಕೃಪೆಯೂ ಸತ್ಯವೂ ಸಂಧಿಸಿ ಕೊಳ್ಳುತ್ತವೆ; ನೀತಿಯೂ ಸಮಾಧಾನವೂ ಮುದ್ದಿಟ್ಟು ಕೊಳ್ಳುತ್ತವೆ.
ಆದರೆ ನೀನು ಓ ಕರ್ತನೇ, ಅಂತಃಕರುಣೆಯೂ ದಯೆಯೂ ಉಳ್ಳ ದೇವರು ದೀರ್ಘಶಾಂತನೂ ಬಹಳ ಕೃಪೆಯೂ ಸತ್ಯವೂ ಉಳ್ಳವನೂ ಆಗಿದ್ದೀ.
ಕರ್ತನ ಕರುಣೆಗಳನ್ನು ಯುಗಯುಗಕ್ಕೂ ಹಾಡುವೆನು; ತಲತಲಾಂತರಕ್ಕೂ ನಿನ್ನ ನಂಬಿಗಸ್ತಿಕೆಯನ್ನು ನನ್ನ ಬಾಯಿಂದ ತಿಳಿಯಪಡಿ ಸುವೆನು.
ನಮ್ಮ ದೇವರಾದ ಕರ್ತ ನನ್ನು ಉನ್ನತಪಡಿಸಿರಿ; ಆತನ ಪಾದ ಪೀಠದಲ್ಲಿ ಆರಾ ಧಿಸಿರಿ; ಆತನು ಪರಿಶುದ್ಧನೇ.
ನಮ್ಮ ದೇವರಾದ ಕರ್ತನನ್ನು ಉನ್ನತಪಡಿಸಿರಿ; ಆತನ ಪರಿ ಶುದ್ಧ ಪರ್ವತದಲ್ಲಿ ಆರಾಧಿಸಿರಿ; ನಮ್ಮ ದೇವರಾದ ಕರ್ತನು ಪರಿಶುದ್ಧನೇ.
ಕೃತಜ್ಞತೆಯಿಂದ ಆತನ ಬಾಗಿಲುಗಳಿಗೂ ಸ್ತೋತ್ರದಿಂದ ಆತನ ಅಂಗಳಗಳಿಗೂ ಬನ್ನಿರಿ; ಆತನನ್ನು ಕೊಂಡಾಡಿರಿ, ಆತನ ಹೆಸರನ್ನು ಸ್ತುತಿಸಿರಿ.ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
ನಮಗಲ್ಲ, ಓ ಕರ್ತನೇ, ನಮಗಲ್ಲ, ನಿನ್ನ ಹೆಸರಿಗೆ ಮಾತ್ರ, ನಿನ್ನ ಕರುಣೆಯ ನಿಮಿತ್ತವೂ ನಿನ್ನ ಸತ್ಯದ ನಿಮಿತ್ತವೂ ಘನವುಂಟಾಗಲಿ.
ಕರ್ತನು ಆತನ ನೀತಿಗೋಸ್ಕರ ಬಹಳವಾಗಿ ಮೆಚ್ಚುವನು, ಆತನು ನ್ಯಾಯಪ್ರಮಾಣವನ್ನು ಹೆಚ್ಚಿಸಿ ಘನಪಡಿಸುವನು.
ಕರ್ತನು ನಮಗೆ ಮಾಡಿದ್ದೆಲ್ಲಾದರ ಪ್ರಕಾರ, ಕರ್ತನ ಪ್ರೀತಿ ಕೃಪೆಗಳನ್ನೂ ಕರ್ತನ ಸ್ತೋತ್ರಗಳನ್ನೂ ಜ್ಞಾಪಕಪಡಿಸುವೆನು; ಆತನು ತನ್ನ ಅಂತಃಕರುಣೆಯ ಪ್ರಕಾರವೂ ತನ್ನ ಕೃಪೆಯ ಮಹಾ ಒಳ್ಳೇತನದ ಪ್ರಕಾರವೂ ಇಸ್ರಾಯೇಲಿನ ಮನೆಯವರಿಗೆ ದೊಡ್ಡ ಉಪಕಾರ ಮಾಡಿದನಲ್ಲಾ.
ಯಾವಾಗ ಬರಹಕ್ಕೆ ರುಜುಹಾಕಿದ್ದಾ ಯಿತ್ತೆಂದು ದಾನಿಯೇಲನಿಗೆ ತಿಳಿಯಿತೋ ಆಗ ಅವನು ತನ್ನ ಮನೆಗೆ ಹೋದನು; ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆಯಲ್ಪಟ್ಟಿದ್ದ ರಿಂದ ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ಸ್ತೋತ್ರವನ್ನೂ ಸಲ್ಲಿಸಿ ದನು.
ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.
ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿ ಹೊಂದಲಿ, ಯಾಕಂದರೆ ಆತನು ತನ್ನ ಜನರನ್ನು ಸಂಧಿಸಿ ಅವರನ್ನು ವಿಮೋಚಿ ಸಿದ್ದಾನೆ.
ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
ಹಾಗಾದರೆ ದೇವರವಾಕ್ಯವನ್ನು ಹೊಂದಿದವರು ದೇವರುಗಳೆಂದು ಆತನು ಕರೆದಿರುವಲ್ಲಿ ಬರಹವು ವ್ಯರ್ಥವಾಗಲಾರದಷ್ಟೆ.
ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ.