Home Bibles ಕೀರ್ತನೆಗಳು 139:24 · ಕನ್ನಡ ಬೈಬಲ್
ಕೀರ್ತನೆಗಳು 139:24 · ಕನ್ನಡ ಬೈಬಲ್

ನನ್ನಲ್ಲಿ ದುಷ್ಟತ ನದ ಮಾರ್ಗ ಉಂಟೇನೋ ನೋಡಿ ನಿತ್ಯವಾದ ಮಾರ್ಗದಲ್ಲಿ ನನ್ನನ್ನು ನಡಿಸು.

Cross references

ಕೀರ್ತನೆಗಳು 5:8

ಓ ಕರ್ತನೇ, ನನ್ನ ವಿರೋಧಿಗಳ ನಿಮಿತ್ತ ನಿನ್ನ ನೀತಿಯಲ್ಲಿ ನನ್ನನ್ನು ನಡಿಸು; ನಿನ್ನ ಮಾರ್ಗವನ್ನು ನನ್ನ ಮುಂದೆ ಸರಾಗಮಾಡು.

ಕೀರ್ತನೆಗಳು 7:3

ನನ್ನ ದೇವರಾದ ಓ ಕರ್ತನೇ, ನಾನು ಇದನ್ನು ಮಾಡಿದರೆ, ಅಂದರೆ ನನ್ನ ಕೈಗಳಲ್ಲಿ ಅಪರಾ ಧವಿದ್ದರೆ,

ಕೀರ್ತನೆಗಳು 16:11

ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.

ಕೀರ್ತನೆಗಳು 17:3

ನೀನು ನನ್ನ ಹೃದಯವನ್ನು ಶೋಧಿಸಿದ್ದೀ, ರಾತ್ರಿಯಲ್ಲಿ ನನ್ನನ್ನು ದರ್ಶಿಸಿದ್ದೀ; ನನ್ನನ್ನು ಪುಟಕ್ಕೆ ಹಾಕಿ ಏನೂ ಕಂಡುಕೊಳ್ಳಲಿಲ್ಲ. ನನ್ನ ಬಾಯಿ ಅತಿ ಕ್ರಮಿಸದಂತೆ ನಾನು ನಿಶ್ಚಯ ಮಾಡಿದ್ದೇನೆ.

ಕೀರ್ತನೆಗಳು 25:8

ಕರ್ತನು ಒಳ್ಳೆಯವನೂ ನ್ಯಾಯವುಳ್ಳವನೂ ಆಗಿ ದ್ದಾನೆ; ಆದದರಿಂದ ಆತನು ಪಾಪದ ಮಾರ್ಗದಲ್ಲಿ ಇರುವವರಿಗೆ ಬೋಧಿಸುವನು.

ಕೀರ್ತನೆಗಳು 27:11

ಓ ಕರ್ತನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನನ್ನ ವಿರೋಧಿಗಳ ನಿಮಿತ್ತ ಸಮವಾದ ಹಾದಿಯಲ್ಲಿ ನನ್ನನ್ನು ನಡಿಸು.

ಕೀರ್ತನೆಗಳು 119:1

ಮಾರ್ಗದಲ್ಲಿ ಅಶುದ್ಧರಾಗದವರೂ ಕರ್ತನ ನ್ಯಾಯಪ್ರಮಾಣದಲ್ಲಿ ನಡೆದುಕೊಳ್ಳುವವರೂ ಧನ್ಯರು.

ಕೀರ್ತನೆಗಳು 119:32

ನಿನ್ನ ಆಜ್ಞೆಗಳ ಮಾರ್ಗದಲ್ಲಿ ಓಡುವೆನು; ನೀನು ನನ್ನ ಹೃದಯವನ್ನು ವಿಶಾಲಮಾಡುತ್ತೀ.

ಕೀರ್ತನೆಗಳು 143:8

ಹೊತ್ತಾರೆಯಲ್ಲಿ ನಿನ್ನ ಪ್ರೀತಿಕರುಣೆಯನ್ನು ನಾನು ಕೇಳುವಂತೆ ಮಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.

ಕೀರ್ತನೆಗಳು 143:10

ನಿನ್ನ ಚಿತ್ತದಂತೆ ಮಾಡುವದಕ್ಕೆ ನನಗೆ ಬೋಧಿಸು; ನೀನು ನನ್ನ ದೇವರು; ಒಳ್ಳೇದಾಗಿರುವ ನಿನ್ನ ಆತ್ಮವು ನನ್ನನ್ನು ನೆಟ್ಟನೆಯ ಭೂಮಿಯಲ್ಲಿ ನಡಿಸಲಿ.

ಸಾಮೇತಿಗಳು 15:9

ದುಷ್ಟರ ಮಾರ್ಗವು ಕರ್ತನಿಗೆ ಅಸಹ್ಯ; ನೀತಿಯನ್ನು ಹಿಂಬಾಲಿಸುವವನನ್ನು ಆತನು ಪ್ರೀತಿಸು ತ್ತಾನೆ.

ಸಾಮೇತಿಗಳು 28:26

ತನ್ನ ಹೃದಯದಲ್ಲಿಯೇ ಭರವಸವಿ ಡುವವನು ಬುದ್ಧಿಹೀನನು; ಜ್ಞಾನದಿಂದ ನಡೆಯುವ ವನು ತಪ್ಪಿಸಿಕೊಳ್ಳುವನು.

ಯೆರೆಮಿಯ 17:9

ಇದಲ್ಲದೆ ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿಯೂ ಒಂದು ರಾಜ್ಯದ ವಿಷಯವಾಗಿಯೂ ಅದನ್ನು ಕಟ್ಟುವದಕ್ಕೂ ನೆಡುವದಕ್ಕೂ ಮಾತನಾಡುತ್ತೇನೋ

ಮತ್ತಾಯ 7:14

ಜೀವಕ್ಕೆ ನಡಿಸುವ ದ್ವಾರವು ಇಕ್ಕಟ್ಟಾದದ್ದೂ ದಾರಿಯು ಬಿಕ್ಕಟ್ಟಾದದ್ದೂ ಆಗಿದೆ; ಆದದರಿಂದ ಅದನ್ನು ಕಂಡುಕೊಳ್ಳುವವರು ಸ್ವಲ್ಪ ಜನ.

ಯೋಹಾನ 14:6

ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.

ಕೊಲೊಸ್ಸೆಯವರಿಗೆ 2:6

ಆದದರಿಂದ ನೀವು ಕರ್ತನಾದ ಕ್ರಿಸ್ತ ಯೇಸುವನ್ನು ಅಂಗೀಕರಿಸಿದಂತೆಯೇ ಆತನಲ್ಲಿದ್ದವರಾಗಿ ನಡೆದು ಕೊಳ್ಳಿರಿ.

ಹೆಬ್ರಿಯರಿಗೆ 12:15

ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ

Interlinear

Choose Theme