Home Bibles ಕೀರ್ತನೆಗಳು 139:4 · ಕನ್ನಡ ಬೈಬಲ್
ಕೀರ್ತನೆಗಳು 139:4 · ಕನ್ನಡ ಬೈಬಲ್

ಇಗೋ, ಓ ಕರ್ತನೇ, ನನ್ನ ನಾಲಿಗೆಯಲ್ಲಿ ನಿನಗೆ ತಿಳಿಯದ ಮಾತು ಒಂದಾದರೂ ಇಲ್ಲ.

Cross references

ಯೋಬ 8:2

ಎಷ್ಟರ ವರೆಗೆ ನೀನು ಇವುಗಳನ್ನು ನುಡಿಯುವಿ? ಎಷ್ಟರ ವರೆಗೆ ನಿನ್ನ ಬಾಯಿಯ ಮಾತುಗಳು ಬಿರುಗಾಳಿಯಂತಿರುವವು?

ಯೋಬ 38:2

ತಿಳು ವಳಿಕೆ ಇಲ್ಲದ ಮಾತುಗಳಿಂದ ಆಲೋಚನೆಯನ್ನು ಕತ್ತಲಾಗಿ ಮಾಡುವ ಇವನಾರು?

ಯೋಬ 42:3

ಆಲೋಚನೆಯನ್ನು ತಿಳುವಳಿಕೆ ಇಲ್ಲದೆ ಮರೆಮಾಡುವವನಾರು? ಆದದರಿಂದ ನಾನು ಗ್ರಹಿ ಸದೆ ಇದ್ದವುಗಳನ್ನು ನಾನು ತಿಳಿಯದಂಥ, ನನಗೆ ಆಶ್ಚರ್ಯವಾದವುಗಳನ್ನು ಉಚ್ಚರಿಸಿದೆನು.

ಯೋಬ 42:6

ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು.

ಕೀರ್ತನೆಗಳು 19:14

ನನ್ನ ಬಲವೂ ನನ್ನ ವಿಮೋಚ ಕನೂ ಆಗಿರುವ ಕರ್ತನೇ, ನನ್ನ ಬಾಯಿಯ ಮಾತು ಗಳೂ ನನ್ನ ಹೃದಯದ ಧ್ಯಾನವೂ ನಿನ್ನ ಮುಂದೆ ಮೆಚ್ಚಿಕೆಯಾಗಿರಲಿ.

ಕೀರ್ತನೆಗಳು 50:19

ನೀನು ನಿನ್ನ ಬಾಯನ್ನು ಕೇಡಿಗೆ ಒಪ್ಪಿಸುತ್ತೀ; ನಿನ್ನ ನಾಲಿಗೆಯು ಮೋಸವನ್ನು ಜೋಡಿಸುತ್ತದೆ.

ಯೆರೆಮಿಯ 29:23

ಇಗೋ, ಕರ್ತನ ಬಿರುಗಾಳಿ ರೌದ್ರವಾಗಿ ಹೊರ ಡುತ್ತದೆ. ಅದು ಬಡಕೊಂಡು ಹೋಗುವ ಬಿರುಗಾಳಿ ಯೇ; ಬಾಧೆಯು ದುಷ್ಟರ ತಲೆಯ ಮೇಲೆ ಬೀಳುವದು.ಕರ್ತನ ಕೋಪದ ಉರಿಯು ಅದನ್ನು ಮಾಡುವ ವರೆಗೂ ತನ್ನ ಹೃದಯದ ಆಲೋಚನೆಗಳನ್ನು ನಡಿಸಿ ರುವ ವರೆಗೂ ತಿರುಗುವದಿಲ್ಲ; ನೀವು ಅಂತ್ಯದಿನದಲ್ಲಿ ಅದನ್ನು ಯೋಚಿಸುವಿರಿ.

ಸೆಫನ್ಯ 1:12

ಆ ಕಾಲದಲ್ಲಿ ಆಗುವದೇನಂದರೆ--ನಾನು ಯೆರೂಸಲೇಮನ್ನು ದೀಪಗಳಿಂದ ಶೋಧಿಸುವೆನು; ಕರ್ತನು ಒಳ್ಳೇದನ್ನಾದರೂ ಕೆಟ್ಟದ್ದನ್ನಾದರೂ ಮಾಡು ವದಿಲ್ಲವೆಂದು ತಮ್ಮ ಹೃದಯಗಳಲ್ಲಿ ಅನ್ನುವವರಾಗಿ ಮರೆಯಾದವುಗಳ ಮೇಲೆ ಕಟ್ಟಿಕೊಂಡಿರುವ ಮನುಷ್ಯ ರನ್ನು ದಂಡಿಸುವೆನು.

ಮಲಾಕಿ 3:13

ನಿಮ್ಮ ಮಾತುಗಳು ನನಗೆ ವಿರೋಧವಾಗಿ ಬಲವಾಗಿದ್ದವೆಂದು ಕರ್ತನು ಹೇಳುತ್ತಾನೆ; ಆದಾಗ್ಯೂ, ನೀವು--ನಿನಗೆ ವಿರೋಧವಾಗಿ ಇಷ್ಟೊಂದು ನಾವು ಏನು ಮಾತಾಡಿದ್ದೇವೆ ಅನ್ನುತ್ತೀರಿ.

ಮತ್ತಾಯ 12:35

ಒಳ್ಳೇಮನುಷ್ಯನು ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯವುಗಳನ್ನು ಹೊರಗೆ ತರುತ್ತಾನೆ; ಮತ್ತು ಕೆಟ್ಟಮನುಷ್ಯನು ಕೆಟ್ಟಬೊಕ್ಕಸದಿಂದ ಕೆಟ್ಟವುಗಳನ್ನು ಹೊರಗೆ ತರುತ್ತಾನೆ.

ಹೆಬ್ರಿಯರಿಗೆ 4:12

ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.

ಯಾಕೋಬ 1:26

ನಿಮ್ಮಲ್ಲಿ ಭಕ್ತನೆಂದೆ ಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸ ಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನ ವಾಗಿದೆ.ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.

ಯಾಕೋಬ 3:2

ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಪರಿ ಪೂರ್ಣನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.

Interlinear

Choose Theme