Psalm
Chapter 14
ಕನ್ನಡ ಬೈಬಲ್1ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಕೃತ್ಯಗಳನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ.
2ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ಕರ್ತನು ಆಕಾಶದಿಂದ ಮನುಷ್ಯನ ಮಕ್ಕಳ ಮೇಲೆ ಕಣ್ಣಿಟ್ಟನು.
3ಅವರೆಲ್ಲರೂ ತಪ್ಪಿಹೋಗಿದ್ದಾರೆ, ಅವರೆಲ್ಲರೂ ಏಕವಾಗಿ ಹೊಲೆ ಯಾಗಿದ್ದಾರೆ; ಒಳ್ಳೆಯದನ್ನು ಮಾಡುವವನು ಇಲ್ಲ; ಒಬ್ಬನಾದರೂ ಇಲ್ಲ.
4ಕರ್ತನನ್ನು ಪ್ರಾರ್ಥಿಸದೆ ರೊಟ್ಟಿಯನ್ನೋ ಎಂಬಂತೆ ನನ್ನ ಜನರನ್ನು ತಿಂದು ಅಪರಾಧಮಾಡಿದವರಿಗೆ ತಿಳುವಳಿಕೆಯಿಲ್ಲವೋ?
5ಅಲ್ಲಿ ಅವರು ಭಯಭ್ರಾಂತ ರಾದರು; ಯಾಕಂದರೆ ದೇವರು ನೀತಿವಂತರ ಸಂತತಿ ಯಲ್ಲಿ ಇದ್ದಾನೆ.
6ಕರ್ತನು ಬಡವನ ಆಶ್ರಯವಾಗಿರು ವದರಿಂದ ನೀವು ಅವನ ಆಲೋಚನೆಯನ್ನು ನಾಚಿಕೆ ಪಡಿಸಿದ್ದೀರಿ.ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬರಲಿ; ಕರ್ತನು ತನ್ನ ಜನರನ್ನು ಸೆರೆಯಿಂದ ತಿರಿಗಿ ಬರಮಾಡುವಾಗ ಯಾಕೋಬನು ಉಲ್ಲಾಸಿ ಸುವನು, ಇಸ್ರಾಯೇಲನು ಸಂತೋಷಿಸುವನು.
7ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬರಲಿ; ಕರ್ತನು ತನ್ನ ಜನರನ್ನು ಸೆರೆಯಿಂದ ತಿರಿಗಿ ಬರಮಾಡುವಾಗ ಯಾಕೋಬನು ಉಲ್ಲಾಸಿ ಸುವನು, ಇಸ್ರಾಯೇಲನು ಸಂತೋಷಿಸುವನು.
Bible Study with Steffi App
Download Free ↗
Memorize verses with spaced repetition. Free, no ads, 15+ languages.