ಕರ್ತನು ಬಡವನ ಆಶ್ರಯವಾಗಿರು ವದರಿಂದ ನೀವು ಅವನ ಆಲೋಚನೆಯನ್ನು ನಾಚಿಕೆ ಪಡಿಸಿದ್ದೀರಿ.ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬರಲಿ; ಕರ್ತನು ತನ್ನ ಜನರನ್ನು ಸೆರೆಯಿಂದ ತಿರಿಗಿ ಬರಮಾಡುವಾಗ ಯಾಕೋಬನು ಉಲ್ಲಾಸಿ ಸುವನು, ಇಸ್ರಾಯೇಲನು ಸಂತೋಷಿಸುವನು.
Cross references
ಈ ಬಲಹೀನರಾದ ಯೆಹೂ ದ್ಯರು ಮಾಡುವದೇನು? ತಮ್ಮನ್ನು ಬಲಪಡಿಸು ವರೋ? ಬಲಿಯನ್ನು ಅರ್ಪಿಸುವರೋ? ಒಂದೇ ದಿವಸದಲ್ಲಿ ತೀರಿಸುವರೋ? ಮಣ್ಣು ದಿಬ್ಬೆಗಳಲ್ಲಿರುವ ಸುಡಲ್ಪಟ್ಟ ಕಲ್ಲುಗಳನ್ನು ಉಜ್ಜೀವಿಸ ಮಾಡುವರೋ ಅಂದನು.
ದೇವರಲ್ಲಿ ಇವನಿಗೆ ಯಾವ ಸಹಾಯವೂ ಇಲ್ಲವೆಂದು ನನ್ನ ವಿಷಯದಲ್ಲಿ ಅನೇಕರು ಹೇಳುತ್ತಾರೆ. ಸೆಲಾ.
ಓ ಮನುಷ್ಯರ ಪುತ್ರರೇ, ನನ್ನ ಘನವನ್ನು ಅವ ಮಾನಕ್ಕೆ ತಿರುಗಿಸುವದು ಎಷ್ಟರ ವರೆಗೆ? ನೀವು ವ್ಯರ್ಥವಾದದ್ದನ್ನು ಪ್ರೀತಿಮಾಡಿ ಸುಳ್ಳನ್ನು ಹುಡುಕು ವದು ಎಷ್ಟರ ವರೆಗೆ? ಸೆಲಾ.
ಕರ್ತನು ಕುಗ್ಗಿದವರಿಗೆ ಆಶ್ರಯವಾಗಿರುವನು, ಇಕ್ಕಟ್ಟಿನ ಸಮಯದಲ್ಲಿ ಸಹ ಆಶ್ರಯವಾಗಿರುವನು.
ನನ್ನನ್ನು ನೋಡುವವರೆಲ್ಲರು ನನ್ನನ್ನು ಗೇಲಿ ಮಾಡಿ ನಗುವರು, ಅವರು ತುಟಿ ಅಗಲಮಾಡಿ ತಲೆ ಆಡಿಸುತ್ತಾ--
ಆದರೆ ನಾನು ದೀನನೂ ಬಡ ವನೂ ಆಗಿದ್ದೇನೆ; ಆದರೂ ಕರ್ತನು ನನಗೋಸ್ಕರ ಯೋಚಿಸುತ್ತಾನೆ; ನನ್ನ ಸಹಾಯವೂ ನನ್ನನ್ನು ತಪ್ಪಿಸುವಾ ತನೂ ನೀನೇ; ಓ ನನ್ನ ದೇವರೇ, ತಡ ಮಾಡಬೇಡ.
ನನ್ನ ವೈರಿಗಳು--ನಿನ್ನ ದೇವರು ಎಲ್ಲಿ ಎಂದು ದಿನವೆಲ್ಲಾ ನನಗೆ ಹೇಳಿ ನನ್ನನ್ನು ನಿಂದಿಸಿದ್ದರಿಂದ ನನ್ನ ಎಲುಬುಗಳು ಮುರಿದಹಾಗಿವೆ.ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.
ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ, ನಾನು ಹೇಳುವದೇನಂದರೆ -- ನೀನು ನನ್ನ ಆಶ್ರಯವೂ ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀ ಎಂಬದೇ.
ನೀನು ನಂಬುವ ದೇವರು, ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು;
ಕರ್ತನು ಅವುಗಳಲ್ಲಿರುವದರಿಂದ ಈ ಎರಡು ಜನಾಂಗಗಳೂ ಈ ಎರಡು ರಾಜ್ಯಗಳೂ ನನ್ನವಾಗು ವವು. ನೀನು ಹೇಳಿದ್ದರಿಂದ ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ.
ಈಗ ನೀವು ಸಿದ್ಧ ವಾಗಿದ್ದು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆ ಯನ್ನು ಆರಾಧಿಸಿದರೆ ಸರಿ; ಆದರೆ ನೀವು ಆರಾಧಿಸ ದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು ಎಂದು ಹೇಳಿದನು.
ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ; ಮತ್ತು ನೀನು ದೇವಕುಮಾರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ ಅಂದರು.
ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.