Home Bibles ☰ Books ಕೀರ್ತನೆಗಳು 141:7 · ಕನ್ನಡ ಬೈಬಲ್
ಕೀರ್ತನೆಗಳು 141:7 · ಕನ್ನಡ ಬೈಬಲ್

ಭೂಮಿಯಲ್ಲಿ ಮರವನ್ನು ಕಡಿದು ಸೀಳುವವನ ಹಾಗೆ ನಮ್ಮ ಎಲುಬುಗಳು ಸಮಾಧಿಯ ಬಾಯಿಯ ಹತ್ತಿರ ಚದುರಿ ಅವೆ.

Cross references

1 ಸಮುವೇಲ 22:18

ಅರಸನು ದೋಯೇಗನಿಗೆ--ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು ಅಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು ನಾರುಬಟ್ಟೆಯ ಎಫೋದನ್ನು ಧರಿಸಿಕೊಳ್ಳುವವರಾದ ಎಂಭತ್ತೈದು ಜನರನ್ನು ಆ ದಿನದಲ್ಲಿ ಕೊಂದನು.

ಕೀರ್ತನೆಗಳು 44:22

ಹೌದು, ನಿನ್ನ ನಿಮಿತ್ತ ದಿನ ವೆಲ್ಲಾ ಕೊಲ್ಲಲ್ಪಡುತ್ತೇವೆ; ಕೊಯ್ಗುರಿಗಳ ಹಾಗೆ ಎಣಿಸಲ್ಪಡುತ್ತೇವೆ.

ಕೀರ್ತನೆಗಳು 53:5

ಭಯವಿಲ್ಲದಿರುವಲ್ಲಿ ಅವರು ಭಯ ಭ್ರಾಂತರಾದರು; ನಿನಗೆ ವಿರೋಧವಾಗಿ ದಂಡು ಇಳಿ ಸುವವನ ಎಲುಬುಗಳನ್ನು ದೇವರು ಚದರಿಸಿ ಬಿಟ್ಟಿ ದ್ದಾನೆ. ನೀನು ಅವರನ್ನು ನಾಚಿಕೆಪಡಿಸಿದ್ದೀ; ದೇವರು ಅವರನ್ನು ತಿರಸ್ಕರಿಸಿದ್ದಾನೆ.ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬಂದರೆ ಎಷ್ಟೋ ಒಳ್ಳೇದು. ದೇವರು ತನ್ನ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ ಯಾಕೋಬನು ಉಲ್ಲಾಸಿಸುವನು, ಇಸ್ರಾಯೇಲನು ಸಂತೋಷಿ ಸುವನು.

ರೋಮಾಪುರದವರಿಗೆ 8:36

ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ನಾವು ಕೊಯ್ಗುರಿಗಳಂತೆ ಎಣಿಸಲ್ಪಡುತ್ತಿದ್ದೇವೆ ಎಂದು ಬರೆಯಲ್ಪಟ್ಟಿದೆ.

2 ಕೊರಿಂಥದವರಿಗೆ 1:9

ಆದರೆ ಮರಣವಾಗು ತ್ತದೆಂಬ ನಿರ್ಣಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವ ರಾಗಬೇಕೆಂದು ಹೀಗಾಯಿತು.

ಹೆಬ್ರಿಯರಿಗೆ 11:37

ಕೆಲವರನ್ನು ಕಲ್ಲೆಸೆ ದರು; ಕೆಲವರನ್ನು ಗರಗಸದಿಂದ ಕೊಯ್ದುಕೊಂದರು. ಕೆಲವರನ್ನು ಪರಿಶೋಧಿಸಿದರು, ಕೆಲವರನ್ನು ಕತ್ತಿಯಿಂದ ಕೊಂದರು; ಕೆಲವರು ಕೊರತೆ ಹಿಂಸೆ ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮ ಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು.

ಪ್ರಕಟನೆ 11:8

ಇವರ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಆತ್ಮಿಕವಾಗಿ ಸೊದೋಮ್‌ ಎಂತಲೂ ಐಗುಪ್ತ ಎಂತಲೂ ಕರೆಯುವರು; ನಮ್ಮ ಕರ್ತನು ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟನು.

Interlinear

Choose Theme