Home Bibles ಕೀರ್ತನೆಗಳು 144:4 · ಕನ್ನಡ ಬೈಬಲ್
ಕೀರ್ತನೆಗಳು 144:4 · ಕನ್ನಡ ಬೈಬಲ್

ಮನುಷ್ಯನು ವ್ಯರ್ಥತೆಗೆ ಸಮಾನನಾಗಿದ್ದಾನೆ; ಅವನ ದಿವಸಗಳು ಕಳೆದುಹೋಗುವ ನೆರಳಿನ ಹಾಗಿವೆ.

Cross references

2 ಸಮುವೇಲ 14:14

ನಾವು ಸಾಯುವದು ಅವಶ್ಯವೇ. ನೆಲದ ಮೇಲೆ ಚೆಲ್ಲಲ್ಪಟ್ಟು ತಿರಿಗಿ ಕೂಡಿಸಲ್ಪಡದ ನೀರಿನ ಹಾಗೆ ಇದ್ದೇವೆ. ಆದರೆ ದೇವರು ಯಾರನ್ನೂ ಲಕ್ಷ್ಯಮಾಡುವಾತನಲ್ಲ. ಆದರೂ ಹೊರಡಿಸಲ್ಪಟ್ಟವನು ಹೊರಡಿಸಲ್ಪಟ್ಟಿರದ ಹಾಗೆ ಆಲೋಚನೆಗಳನ್ನು ಮಾಡುವಾತನಾಗಿದ್ದಾನೆ.

1 ದಿನವೃತ್ತಾಂತ 29:15

ನಾವು ನಿನ್ನ ಸಮ್ಮುಖದಲ್ಲಿ ನಮ್ಮ ಸಮಸ್ತ ಪಿತೃಗಳ ಹಾಗೆ ಪರದೇಶಸ್ಥರೂ ಪ್ರವಾಸಿಗಳೂ ಆಗಿದ್ದೇವೆ. ಭೂಮಿಯ ಮೇಲೆ ನಮ್ಮ ದಿವಸಗಳು ನೆರಳಿನ ಹಾಗೆ ಅವೆ; ನೆಲೆಯು ಇಲ್ಲ.

ಯೋಬ 4:19

ಧೂಳಿನಲ್ಲಿ ಅಸ್ತಿವಾರ ಇರುವ ಮಣ್ಣಿನ ಮನೆಗಳ ನಿವಾಸಿಗಳು ಎಷ್ಟು ಕಡಿಮೆ? ನುಸಿಯ ಮುಂದೆ ಅವರು ಜಜ್ಜಲ್ಪಡುತ್ತಾರೆ.

ಯೋಬ 8:9

ನಾವು ನಿನ್ನೆ ಹುಟ್ಟಿದವರೂ ಏನೂ ಅರಿಯವದವರೂ ಆಗಿ ದ್ದೇವೆ; ನಮ್ಮ ದಿವಸಗಳು ಭೂಮಿಯ ಮೇಲೆ ನೆರಳಿ ನಂತಿವೆ.

ಯೋಬ 14:1

ಸ್ತ್ರೀಯಿಂದ ಹುಟ್ಟಿದ ಮನುಷ್ಯನು ಕಡಿಮೆದಿವಸದವನೂ ಕಳವಳದಿಂದ ತುಂಬಿದ ವನೂ ಆಗಿದ್ದಾನೆ.

ಯೋಬ 14:2

ಅವನು ಹೂವಿನ ಹಾಗೆ ಅರಳು ತ್ತಾನೆ ಮತ್ತು ಕೊಯ್ಯಲ್ಪಡುತ್ತಾನೆ; ಅವನು ನೆರಳಿನಂತೆ ಓಡಿಹೋಗುತ್ತಾನೆ, ಹಾಗೂ ಮುಂದುವರೆಯುವ ದಿಲ್ಲ.

ಕೀರ್ತನೆಗಳು 39:5

ಇಗೋ, ನನ್ನ ದಿವಸ ಗಳನ್ನು ಗೇಣುದ್ದವಾಗಿ ಮಾಡಿದ್ದೀ; ನನ್ನ ಆಯುಷ್ಯವು ನಿನ್ನ ಮುಂದೆ ಏನೂ ಇಲ್ಲದ ಹಾಗಿದೆ; ನಿಶ್ಚಯವಾಗಿ ಉತ್ತಮ ಸ್ಥಿತಿಯಲ್ಲಿರುವ ಪ್ರತಿಯೊಬ್ಬನು ಒಟ್ಟಾರೆಯಲ್ಲಿ ವ್ಯರ್ಥವಾದವನೇ. ಸೆಲಾ.

ಕೀರ್ತನೆಗಳು 39:6

ನಿಶ್ಚಯವಾಗಿ ಮನುಷ್ಯನು ವ್ಯರ್ಥವಾದ ತೋರಿಕೆ ಯಲ್ಲಿ ನಡೆದುಕೊಳ್ಳುತ್ತಾನೆ; ನಿಶ್ಚಯವಾಗಿ ವ್ಯರ್ಥ ವಾದ ಗದ್ದಲ ಮಾಡುತ್ತಾರೆ. ಅವನು ಐಶ್ವರ್ಯವನ್ನು ಕುಪ್ಪೆ ಮಾಡುತ್ತಾನೆ; ಆದರೆ ಅದನ್ನು ಕೂಡಿಸುವವರು ಯಾರೋ ಅರಿಯನು.

ಕೀರ್ತನೆಗಳು 39:11

ಅಕ್ರಮ ಕ್ಕೋಸ್ಕರ ಗದರಿಕೆಗಳಿಂದ ನೀನು ಮನುಷ್ಯನನ್ನು ಶಿಕ್ಷಿಸಿದರೆ ಅವನ ಸೌಂದರ್ಯವನ್ನು ನುಸಿಯ ಹಾಗೆ ಹಾಳುಮಾಡುತ್ತೀ; ನಿಶ್ಚಯವಾಗಿ ಪ್ರತಿ ಮನುಷ್ಯನು ವ್ಯರ್ಥವಾದವನೇ--ಸೆಲಾ.

ಕೀರ್ತನೆಗಳು 62:9

ನಿಶ್ಚಯವಾಗಿ ಅಲ್ಪರು ವ್ಯರ್ಥರೇ, ಘನವಂತರು ಸುಳ್ಳೇ; ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿದರೆ ಧೂಳಿ ಗಿಂತಲೂ ಲಘುವಾಗಿದ್ದಾರೆ.

ಕೀರ್ತನೆಗಳು 89:47

ನನ್ನ ಆಯುಸ್ಸು ಎಷ್ಟು ಕಡಿಮೆ ಯೆಂದು ಜ್ಞಾಪಕಮಾಡಿಕೋ; ಎಲ್ಲಾ ಮನುಷ್ಯರನ್ನು ಯಾಕೆ ವ್ಯರ್ಥವಾಗಿ ನಿರ್ಮಿಸಿದ್ದೀ?

ಕೀರ್ತನೆಗಳು 102:11

ನನ್ನ ದಿವಸಗಳು ನೀಳದ ನೆರಳಿನ ಹಾಗಿವೆ; ನಾನು ಹುಲ್ಲಿನ ಹಾಗೆ ಒಣಗುತ್ತೇನೆ.

ಕೀರ್ತನೆಗಳು 103:15

ಮನುಷ್ಯನ ದಿವಸಗಳೋ ಹುಲ್ಲಿನ ಹಾಗೆ ಅವೆ; ಅವನು ಹೊಲದ ಹೂವಿನ ಹಾಗೆಯೇ ಶೋಭಿಸುತ್ತಾನೆ.

ಕೀರ್ತನೆಗಳು 109:23

ನಾನು ಸಂಜೆಯ ನೆರಳಿನಂತೆ ಗತಿಸಿಹೋಗುತ್ತಿದ್ದೇನೆ; ಮಿಡತೆಯ ಹಾಗೆ ಬಡಿಯಲ್ಪ ಟ್ಟಿದ್ದೇನೆ;

ಸಭಾಪ್ರಸಂಗಿ 1:2

ವ್ಯರ್ಥಗಳಲ್ಲಿ ವ್ಯರ್ಥ, ವ್ಯರ್ಥಗಳಲ್ಲಿ ವ್ಯರ್ಥ ಎಂದು ಪ್ರಸಂಗಿ ಹೇಳುತ್ತಾನೆ; ಎಲ್ಲವೂ ವ್ಯರ್ಥ.

ಸಭಾಪ್ರಸಂಗಿ 1:14

ಸೂರ್ಯನ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ನಾನು ನೋಡಿದ್ದೇನೆ; ಇಗೋ, ಎಲ್ಲವು ವ್ಯರ್ಥವೂ ಮನಸ್ಸಿಗೆ ಆಯಾಸವೂ ಆಗಿವೆ.

ಸಭಾಪ್ರಸಂಗಿ 8:13

ಆದರೆ ದುಷ್ಟನಿಗೆ ಒಳ್ಳೆಯದಾಗುವದಿಲ್ಲ. ತನ್ನ ನೆರಳಿನ ಹಾಗಿ ರುವ ಅವನ ದಿವಸಗಳನ್ನು ಹೆಚ್ಚಿಸುವದಿಲ್ಲ; ಅವನು ದೇವರ ಮುಂದೆ ಭಯಪಡುವದಿಲ್ಲ.

ಸಭಾಪ್ರಸಂಗಿ 12:8

ವ್ಯರ್ಥದ ವ್ಯರ್ಥಗಳೂ ಎಲ್ಲವೂ ವ್ಯರ್ಥವೇ ಎಂದು ಪ್ರಸಂಗಿ ಹೇಳುವನು.

Interlinear

Choose Theme