Home Bibles ☰ Books ಕೀರ್ತನೆಗಳು 148:13 · ಕನ್ನಡ ಬೈಬಲ್
ಕೀರ್ತನೆಗಳು 148:13 · ಕನ್ನಡ ಬೈಬಲ್

ಕರ್ತನ ಹೆಸರನ್ನು ಸ್ತುತಿಸಿರಿ; ಆತನ ಹೆಸರು ಮಾತ್ರ ಶ್ರೇಷ್ಠವಾಗಿದೆ; ಆತನ ಮಹಿಮೆಯು ಭೂಮ್ಯಾಕಾಶಗಳ ಮೇಲೆ ಅದೆ.ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ; ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು, ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ; ಕರ್ತನನ್ನು ಸ್ತುತಿಸಿರಿ.

Cross references

1 ದಿನವೃತ್ತಾಂತ 29:11

ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ.

ಕೀರ್ತನೆಗಳು 8:1

ನಮ್ಮ ದೇವರಾದ ಓ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ. ನಿನ್ನ ಮಹಿಮೆಯನ್ನು ಆಕಾಶಗಳ ಮೇಲೆ ಇರಿಸಿದ್ದೀ.

ಕೀರ್ತನೆಗಳು 8:2

ಶತ್ರುವನ್ನೂ ಮುಯ್ಯಿಗೆ ಮುಯ್ಯಿ ಕೊಡುವವನನ್ನೂ ನಿಲ್ಲಿಸಿಬಿಡುವದಕ್ಕೆ ನಿನ್ನ ವೈರಿಗಳ ನಿಮಿತ್ತ ಶಿಶುಗಳ ಮತ್ತು ಮೊಲೆ ಕೂಸುಗಳ ಬಾಯಿಂದ ನೀನು ನಿನ್ನ ಬಲವನ್ನು ಸ್ಥಾಪಿಸಿದ್ದೀ.

ಕೀರ್ತನೆಗಳು 8:9

ಓ ಕರ್ತನೇ, ನಮ್ಮ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ.

ಕೀರ್ತನೆಗಳು 57:6

ಅವರು ನನ್ನ ಹೆಜ್ಜೆಗಳಿಗೆ ಬಲೆಯೊಡ್ಡಿದ್ದಾರೆ. ನನ್ನ ಪ್ರಾಣವು ಕುಗ್ಗಿಹೋಗಿದೆ; ನನ್ನ ಮುಂದೆ ಕುಣಿಯನ್ನು ಅಗೆದು ಅದರ ನಡುವೆ ತಾವೇ ಬಿದ್ದಿದ್ದಾರೆ. ಸೆಲಾ.

ಕೀರ್ತನೆಗಳು 72:19

ಆತನ ಮಹಿಮೆಯುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ; ಆತನ ಮಹಿ ಮೆಯು ಭೂಮಿಯನ್ನೆಲ್ಲಾ ತುಂಬಲಿ. ಆಮೆನ್‌. ಆಮೆನ್‌.ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.

ಕೀರ್ತನೆಗಳು 99:3

ನಿನ್ನ ಭಯಂಕರವಾದ ಹೆಸರನ್ನು ಅವರು ಕೊಂಡಾ ಡಲಿ; ಅದು ಪರಿಶುದ್ಧವಾದದ್ದೇ.

ಕೀರ್ತನೆಗಳು 99:9

ನಮ್ಮ ದೇವರಾದ ಕರ್ತನನ್ನು ಉನ್ನತಪಡಿಸಿರಿ; ಆತನ ಪರಿ ಶುದ್ಧ ಪರ್ವತದಲ್ಲಿ ಆರಾಧಿಸಿರಿ; ನಮ್ಮ ದೇವರಾದ ಕರ್ತನು ಪರಿಶುದ್ಧನೇ.

ಕೀರ್ತನೆಗಳು 108:4

ಆಕಾಶಕ್ಕಿಂತ ನಿನ್ನ ಕರುಣೆಯೂ ಮೇಘಗಳನ್ನು ನಿಲುಕುವಂಥ ನಿನ್ನ ಸತ್ಯವೂ ದೊಡ್ಡದು.

ಕೀರ್ತನೆಗಳು 113:4

ಕರ್ತನು ಎಲ್ಲಾ ಜನಾಂಗಗಳ ಮೇಲೆ ಉನ್ನತವಾದವನು; ಆತನ ಮಹಿಮೆಯು ಆಕಾ ಶಗಳ ಮೇಲೆ ಇದೆ.

ಕೀರ್ತನೆಗಳು 150:6

ಶ್ವಾಸವಿರುವದೆಲ್ಲಾ ಕರ್ತನನ್ನು ಸ್ತುತಿಸಲಿ. ಕರ್ತನನ್ನು ಸ್ತುತಿಸಿರಿ.

ಪರಮಗೀತ 5:9

ಇತರ ಪ್ರಿಯನಿಗಿಂತ ನಿನ್ನ ಪ್ರಿಯನ ಅತಿಶಯ ವೇನು? ಸ್ತ್ರೀಯರಲ್ಲಿ ಅತಿ ಸುಂದರಿಯೇ, ನೀನು ನಮಗೆ ಹೀಗೆ ಆಣೆ ಇಡುವದಕ್ಕೆ ಇತರ ಪ್ರಿಯನಿಗಿಂತ ನಿನ್ನ ಪ್ರಿಯನ ಅತಿಶಯವೇನು?

ಪರಮಗೀತ 5:16

ಯೆರೂಸಲೇಮಿನ ಕುಮಾರ್ತೆ ಯರೇ, ಅವನ ಬಾಯಿ ಬಹು ಮಧುರವಾಗಿದೆ; ಹೌದು, ಅವನು ಸರ್ವಾಂಗ ಸುಂದರನು. ಇವನೇ ನನ್ನ ಪ್ರಿಯನು, ಇವನೇ ನನ್ನ ಸ್ನೇಹಿತನು.

ಯೆಶಾಯ 6:3

ಒಬ್ಬನು ಮತ್ತೊಬ್ಬನಿಗೆ--ಸೈನ್ಯಗಳ ಕರ್ತನು ಪರಿ ಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲ ವೆಲ್ಲಾ ಆತನ ಮಹಿಮೆಯಿಂದ ತುಂಬಿಯದೆ ಎಂದು ಕೂಗಿ ಹೇಳಿದನು.

ಯೆಶಾಯ 12:4

ನೀವು--ಕರ್ತನನ್ನು ಕೊಂಡಾ ಡಿರಿ; ಜನರ ಮಧ್ಯದಲ್ಲಿ ಆತನ ಹೆಸರನ್ನೆತ್ತಿ ಕ್ರಿಯೆಗ ಳನ್ನು ಪ್ರಕಟಿಸಿರಿ. ಆತನ ನಾಮವನ್ನು ಉನ್ನತೋನ್ನತ ವೆಂದು ಎತ್ತಿ ಹೇಳಿರಿ ಎಂದು ಆ ದಿನದಲ್ಲಿ ಹೇಳುವಿರಿ.

ಯೆಶಾಯ 33:5

ಕರ್ತನು ಉನ್ನತೋನ್ನತನಾಗಿದ್ದಾನೆ. ಆತನು ಮೇಲಿನ ಲೋಕ ದಲ್ಲಿ ವಾಸಿಸುತ್ತಾನೆ. ಚೀಯೋನನ್ನು ನೀತಿನ್ಯಾಯಗ ಳಿಂದ ತುಂಬಿಸಿದ್ದಾನೆ.

Interlinear

Choose Theme