Home Bibles ಕೀರ್ತನೆಗಳು 21:12 · ಕನ್ನಡ ಬೈಬಲ್
ಕೀರ್ತನೆಗಳು 21:12 · ಕನ್ನಡ ಬೈಬಲ್

ನೀನು ಅವರನ್ನು ಬೆನ್ನು ತಿರಿಗಿಸುವಂತೆ ಮಾಡುವಿ: ಅವರ ಮುಖಕ್ಕೆ ಎದುರಾಗಿ ನಿನ್ನ ಬಿಲ್ಲನೂ ಹಗ್ಗಗಳಲ್ಲಿ ಹೂಡುವಿ.ಕರ್ತನೇ, ನಿನ್ನ ಸ್ವಂತ ಬಲದಿಂದ ನೀನು ಘನ ಹೊಂದಿದವನಾಗು; ಹೀಗೆ ನಾವು ನಿನ್ನ ಪರಾಕ್ರಮ ವನ್ನು ಹಾಡಿ ಕೀರ್ತಿಸುವೆವು.

Cross references

ಯೋಬ 7:20

ನಾನು ಪಾಪ ಮಾಡಿದ್ದೇನೆ; ಓ ಮನುಷ್ಯರನ್ನು ಕಾಯುವವನೇ, ನಾನು ನಿನಗೆ ಏನು ಮಾಡಲಿ? ನನಗೆ ನಾನೇ ಭಾರವಾಗುವ ಹಾಗೆ ನನ್ನನ್ನು ನಿನಗೆ ಗುರಿಯಾಗಿ ಇಟ್ಟು ಕೊಳ್ಳುವದು ಯಾಕೆ?ಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ.

ಯೋಬ 16:12

ನಾನು ಶಾಂತವಾಗಿದ್ದಾಗ ನನ್ನನ್ನು ಪುಡಿಪುಡಿ ಮಾಡಿದನು. ನನ್ನ ಕುತ್ತಿಗೆ ಹಿಡಿದು ಚೂರುಚೂರಾಗಿ ಮಾಡಿದನು; ನನ್ನನ್ನು ತನಗೆ ಗುರಿಯಾಗಿ ನಿಲ್ಲಿಸಿದನು;

ಕೀರ್ತನೆಗಳು 7:12

ಅವನು ತಿರಿಗಿಕೊಳ್ಳದಿದ್ದರೆ ಆತನು ತನ್ನ ಕತ್ತಿ ಮಸೆಯುವನು: ತನ್ನ ಬಿಲ್ಲು ಬಗ್ಗಿಸಿ ಅದನ್ನು ಸಿದ್ಧಮಾಡಿದ್ದಾನೆ.

ಕೀರ್ತನೆಗಳು 9:3

ನನ್ನ ಶತ್ರುಗಳು ಹಿಂದಕ್ಕೆ ತಿರುಗಿ ನಿನ್ನ ಸಮ್ಮುಖ ದಿಂದ ಬಿದ್ದು ನಾಶವಾಗುವರು.

ಕೀರ್ತನೆಗಳು 18:14

ಹೌದು, ತನ್ನ ಬಾಣಗಳನ್ನು ಕಳುಹಿಸಿ ಅವರನ್ನು ಚದುರಿಸಿದನು; ಮಿಂಚುಗಳನ್ನೆಸೆದು ಅವರನ್ನು ಗಲಿಬಿಲಿ ಮಾಡಿದನು.

ಕೀರ್ತನೆಗಳು 18:40

ನನ್ನ ಹಗೆಯವರನ್ನು ನಾಶಮಾಡುವಂತೆ ಶತ್ರುಗಳ ಕುತ್ತಿಗೆಗಳನ್ನು ನೀನು ನನಗೆ ಕೊಟ್ಟಿದ್ದೀ.

ಕೀರ್ತನೆಗಳು 44:10

ವೈರಿಯ ಮುಂದೆ ನಾವು ಹಿಂದಿರುಗ ಮಾಡುತ್ತೀ; ನಮ್ಮ ಹಗೆಯವರು ತಮಗೋಸ್ಕರ ಕೊಳ್ಳೆ ಇಡುತ್ತಾರೆ.

ಕೀರ್ತನೆಗಳು 56:9

ನಾನು ನಿನ್ನನ್ನು ಕೂಗಿ ಕೊಂಡಾಗ ನನ್ನ ಶತ್ರುಗಳು ಹಿಂದಿರುಗುವರು; ದೇವರು ನನಗಿದ್ದಾನೆ ಎಂಬದನ್ನು ಬಲ್ಲೆನು.

ಕೀರ್ತನೆಗಳು 64:7

ದೇವರು ಅವರ ಕಡೆಗೆ ಬಾಣವನ್ನು ಎಸೆಯು ವಾಗ ಫಕ್ಕನೆ ಅವರಿಗೆ ಗಾಯಗಳಾಗುವವು.

ಯೆಶಾಯ 8:10

ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.

ವಿಲಾಪಗಳು 3:12

ಆತನು ತನ್ನ ಬಿಲ್ಲನ್ನು ಬಗ್ಗಿಸಿದ್ದಾನೆ ಮತ್ತು ನನ್ನನ್ನು ಬಾಣಕ್ಕೆ ಗುರಿಮಾಡಿದ್ದಾನೆ.

Interlinear

Choose Theme