Home Bibles ಕೀರ್ತನೆಗಳು 22:15 · ಕನ್ನಡ ಬೈಬಲ್
ಕೀರ್ತನೆಗಳು 22:15 · ಕನ್ನಡ ಬೈಬಲ್

ನನ್ನ ಶಕ್ತಿ ಬೋಕಿಯ ಹಾಗೆ ಒಣಗಿ ಹೋಗಿದೆ; ನನ್ನ ನಾಲಿಗೆ ಅಂಗಳಕ್ಕೆ ಹತ್ತುತ್ತದೆ; ಮರಣದ ಧೂಳಿಗೆ ನನ್ನನ್ನು ಬರಮಾಡಿದಿ.

Cross references

ಆದಿಕಾಂಡ 3:19

ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.

ಆದಿಕಾಂಡ 18:27

ಆಗ ಅಬ್ರಹಾಮನು--ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಕರ್ತನ ಸಂಗಡ ಮಾತನಾಡುವದಕ್ಕೆ ಮುಂಗೊಂಡಿದ್ದೇನೆ.

2 ಸಮುವೇಲ 14:14

ನಾವು ಸಾಯುವದು ಅವಶ್ಯವೇ. ನೆಲದ ಮೇಲೆ ಚೆಲ್ಲಲ್ಪಟ್ಟು ತಿರಿಗಿ ಕೂಡಿಸಲ್ಪಡದ ನೀರಿನ ಹಾಗೆ ಇದ್ದೇವೆ. ಆದರೆ ದೇವರು ಯಾರನ್ನೂ ಲಕ್ಷ್ಯಮಾಡುವಾತನಲ್ಲ. ಆದರೂ ಹೊರಡಿಸಲ್ಪಟ್ಟವನು ಹೊರಡಿಸಲ್ಪಟ್ಟಿರದ ಹಾಗೆ ಆಲೋಚನೆಗಳನ್ನು ಮಾಡುವಾತನಾಗಿದ್ದಾನೆ.

ಯೋಬ 7:21

ಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ.

ಯೋಬ 10:9

ಕುಂಬಾ ರನ ಮಣ್ಣಿನಂತೆ ನನ್ನನ್ನು ರೂಪಿಸಿದ್ದೀ ಎಂದು ಜ್ಞಾಪಕ ಮಾಡಿಕೋ ಎಂದು ಬೇಡಿಕೊಳ್ಳುತ್ತೇನೆ; ಆದಾಗ್ಯೂ ನನ್ನನ್ನು ಧೂಳಿಗೆ ತಿರುಗಿಸುತ್ತಿಯೋ?

ಯೋಬ 19:20

ನನ್ನ ಚರ್ಮಕ್ಕೂ ನನ್ನ ಮಾಂಸಕ್ಕೂ ನನ್ನ ಎಲುಬು ಅಂಟುತ್ತದೆ; ನನ್ನ ಹಲ್ಲುಗಳ ತೊಗಲಿ ನೊಂದಿಗೆ ತಪ್ಪಿಸಿಕೊಂಡೆನು.

ಯೋಬ 29:10

ಘನವುಳ್ಳವರು ಮೌನವಾದರು; ಅವರ ನಾಲಿಗೆ ಅವರ ಅಂಗಳಕ್ಕೆ ಅಂಟಿತು.

ಯೋಬ 30:16

ಆದರೆ ಈಗ ನನ್ನ ಪ್ರಾಣವು ನನ್ನಲ್ಲಿ ಹೊಯ್ಯಲ್ಪಡುವದು; ದೀನತ್ವದ ದಿವಸಗಳು ನನ್ನನ್ನು ಹಿಡಿದವೆ.

ಯೋಬ 34:15

ಶರೀರಗಳೆಲ್ಲಾ ಒಟ್ಟಾಗಿ ನಾಶವಾಗು ವವು. ಮತ್ತು ಮನುಷ್ಯನು ದೂಳಿಗೆ ತಿರುಗುವನು.

ಕೀರ್ತನೆಗಳು 30:9

ನಾನು ಕುಣಿಯಲ್ಲಿಳಿ ದರೆ ನನ್ನ ರಕ್ತದಲ್ಲಿ ಲಾಭವೇನು? ಧೂಳು ನಿನ್ನನ್ನು ಕೊಂಡಾಡುವದೋ? ಅದು ನಿನ್ನ ಸತ್ಯವನ್ನು ತಿಳಿಸು ವದೋ?

ಕೀರ್ತನೆಗಳು 32:3

ನಾನು ಮೌನವಾಗಿದ್ದಾಗ ದಿನವೆಲ್ಲಾ ನರಳುವದ ರಿಂದ ನನ್ನ ಎಲುಬುಗಳು ಸವೆದು ಹೋದವು.

ಕೀರ್ತನೆಗಳು 38:10

ನನ್ನ ಹೃದಯವು ಬಡಿದುಕೊಳ್ಳುತ್ತದೆ; ನನ್ನ ಶಕ್ತಿಯು ನನ್ನನ್ನು ಬಿಟ್ಟು ಹೋಗಿದೆ; ನನ್ನ ಕಣ್ಣುಗಳ ಬೆಳಕು ಸಹ ನನ್ನಲ್ಲಿ ಇಲ್ಲ.

ಕೀರ್ತನೆಗಳು 69:3

ನಾನು ಕೂಗಿ ದಣಿದಿದ್ದೇನೆ; ನನ್ನ ಗಂಟಲು ಒಣಗಿದೆ; ನಾನು ದೇವ ರನ್ನು ಎದುರು ನೋಡುವದರಿಂದ ನನ್ನ ಕಣ್ಣುಗಳು ಕ್ಷೀಣಿಸುತ್ತವೆ.

ಕೀರ್ತನೆಗಳು 69:21

ನನ್ನ ಆಹಾರಕ್ಕಾಗಿ ಕಹಿಯಾದದನ್ನು ಕೊಟ್ಟರು; ನನಗೆ ದಾಹವಾದಾಗ ಹುಳಿರಸವನ್ನು ಕುಡಿಯ ಕೊಟ್ಟರು.

ಕೀರ್ತನೆಗಳು 104:29

ನೀನು ನಿನ್ನ ಮುಖವನ್ನು ಮರೆಮಾಡಲು ತಲ್ಲಣಿಸುತ್ತವೆ; ನೀನು ಅವುಗಳ ಶ್ವಾಸವನ್ನು ತೆಗೆದು ಬಿಡಲು, ಅವು ಸತ್ತುಹೋಗಿ, ತಮ್ಮ ಧೂಳಿಗೆ ತಿರುಗುತ್ತವೆ.

ಸಾಮೇತಿಗಳು 17:22

ಹರ್ಷ ಹೃದಯನು ಔಷಧದಂತೆ ಒಳ್ಳೇದು ಮಾಡುತ್ತಾನೆ; ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ.

ಯೆಶಾಯ 53:12

ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.

ವಿಲಾಪಗಳು 4:4

ಮೊಲೆಕೂಸಿನ ನಾಲಿಗೆಯು ದಾಹದಿಂದ ಅಂಗಳಕ್ಕೆ ಹತ್ತುತ್ತದೆ, ಎಳೆಕೂಸುಗಳು ರೊಟ್ಟಿ ಕೇಳುತ್ತವೆ; ಆದರೆ ಅವರಿಗೆ ಯಾರೂ ಕೊಡುವದಿಲ್ಲ.

ದಾನಿಯೇಲ 12:2

ಭೂಮಿಯ ಧೂಳಿನೊಳಗೆ ನಿದ್ರೆಮಾಡುವವ ರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನೂ ಕೆಲವರು ನಿತ್ಯ ನಾಚಿಕೆಗಳನ್ನೂ ಅನುಭವಿಸುವರು.

ಮತ್ತಾಯ 27:50

ಯೇಸು ತಿರಿಗಿ ಮಹಾಶಬ್ದದಿಂದ ಕೂಗಿ ಆತ್ಮವನ್ನು ಒಪ್ಪಿಸಿಕೊಟ್ಟನು.

ಯೋಹಾನ 19:28

ಇದಾದ ಮೇಲೆ ಯೇಸು ಆಗ ಎಲ್ಲವೂ ಪೂರೈಸಲ್ಪಟ್ಟಿತೆಂದು ತಿಳಿದು ಬರಹವು ನೆರವೇರು ವಂತೆ--ನನಗೆ ನೀರಡಿಕೆಯಾಗಿದೆ ಅಂದನು.

1 ಕೊರಿಂಥದವರಿಗೆ 15:3

ನಾನು ಸಹ ಎಲ್ಲಾದಕ್ಕಿಂತಲೂ ಮೊದಲು ಹೊಂದಿದ್ದನ್ನು ನಿಮಗೆ ತಿಳಿಸಿದ್ದೇನೆ. ಅದೇನಂದರೆ, ಬರಹದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತನು.

Interlinear

Choose Theme