Home Bibles ಕೀರ್ತನೆಗಳು 24:8 · ಕನ್ನಡ ಬೈಬಲ್
ಕೀರ್ತನೆಗಳು 24:8 · ಕನ್ನಡ ಬೈಬಲ್

ಈ ಮಹಿಮೆಯ ಅರಸನು ಯಾರು? ಬಲವೂ ಪರಾಕ್ರಮವೂ ಉಳ್ಳ ಕರ್ತನು; ಯುದ್ಧದಲ್ಲಿ ಪರಾಕ್ರಮವುಳ್ಳ ಕರ್ತನು.

Cross references

ನಿರ್ಗಮಕಾಂಡ 15:3

ಕರ್ತನು ಯುದ್ಧ ಶೂರನು; ಕರ್ತನು ಎಂಬದೇ ಆತನ ಹೆಸರು.

ಕೀರ್ತನೆಗಳು 45:3

ಓ ಪರಾಕ್ರಮಿಯೇ, ನಿನ್ನ ಮಹಿಮೆಯಿಂದಲೂ ಘನತೆಯಿಂದಲೂ ನಿನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿ ದುಕೋ.

ಕೀರ್ತನೆಗಳು 50:1

ಬಲಿಷ್ಠ ದೇವರಾಗಿರುವ ಕರ್ತನು ತಾನೇ ಮಾತನಾಡಿ ಸೂರ್ಯೋದಯದಿಂದ ಅಸ್ತಮಾನದ ವರೆಗೂ ಭೂನಿವಾಸಿಗಳನ್ನು ಕರೆದಿದ್ದಾನೆ.

ಕೀರ್ತನೆಗಳು 76:3

ಅಲ್ಲಿಯೇ ಬಿಲ್ಲಿನ ಬಾಣಗಳನ್ನೂ ಗುರಾಣಿಯನ್ನೂ ಕತ್ತಿಯನ್ನೂ ಯುದ್ಧವನ್ನೂ ಮುರಿದುಬಿಟ್ಟನು. ಸೆಲಾ.

ಕೀರ್ತನೆಗಳು 93:1

ಕರ್ತನು ಆಳುತ್ತಾನೆ, ಆತನು ಘನತೆಯನ್ನು ಹೊದ್ದುಕೊಂಡಿದ್ದಾನೆ; ಕರ್ತನು ಬಲ ದಿಂದ ಹೊದ್ದುಕೊಂಡಿದ್ದಾನೆ, ಅದರಿಂದ ತನ್ನ ನಡು ವನ್ನು ಕಟ್ಟಿಕೊಂಡಿದ್ದಾನೆ; ಲೋಕವು ಸಹ ಸ್ಥಿರವಾಗಿದೆ; ಕದಲುವದಿಲ್ಲ.

ಯೆಶಾಯ 9:6

ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.

ಯೆಶಾಯ 19:24

ಆ ದಿನದಲ್ಲಿ ಇಸ್ರಾಯೇಲು ಐಗುಪ್ತ್ಯರ ಸಂಗ ಡಲೂ ಅಶ್ಶೂರ್ಯರ ಸಂಗಡಲೂ ಮೂರನೆಯ ದಾಗಿ ದೇಶದ ಮಧ್ಯದಲ್ಲಿ ಆಶೀರ್ವಾದವಾಗಿರುವದು.ನನ್ನ ಪ್ರಜೆಯಾದ ಐಗುಪ್ತಕ್ಕೂ ನನ್ನ ಕೈಗಳ ಕೆಲಸ ವಾದ ಅಶ್ಶೂರ್ಯಕ್ಕೂ ನನ್ನ ಸ್ವಾಸ್ತ್ಯವಾದ ಇಸ್ರಾಯೇ ಲಿಗೂ ನಿಮಗೆ ಆಶೀರ್ವಾದ ಎಂದು ಹೇಳಿ ಅವರಿಗೆ ಆಶೀರ್ವಾದ ಕೊಡುವನು.

ಯೆಶಾಯ 63:1

ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರಗಳನ್ನು ತೊಟ್ಟುಕೊಂಡ ವನಾಗಿ ತನ್ನ ಮಹಾಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? ನೀತಿಯಲ್ಲಿ ಮಾತನಾಡು ವವನೂ ರಕ್ಷಿಸಲು ಬಲಿಷ್ಠನೂ ಆಗಿರುವ ನಾನೇ.

ಕೊಲೊಸ್ಸೆಯವರಿಗೆ 2:15

ಆತನು ದೊರೆತನಗಳನ್ನೂ ಅಧಿಕಾರ ಗಳನ್ನೂ ಕೆಡಿಸಿ ಶಿಲುಬೆಯಲ್ಲಿ ಅವುಗಳ ಮೇಲೆ ವಿಜಯ ಗೊಂಡು ಅವುಗಳನ್ನು ಬಹಿರಂಗವಾಗಿ ತೋರಿಸಿದನು.

ಪ್ರಕಟನೆ 6:2

ಆಗ ಇಗೋ, ಒಂದು ಬಿಳೀ ಕುದುರೆ ಯನ್ನು ನಾನು ನೋಡಿದೆನು; ಅದರ ಮೇಲೆ ಕೂತಿದ್ದವನ ಕೈಯಲ್ಲಿ ಒಂದು ಬಿಲ್ಲು ಇತ್ತು; ಅವನಿಗೆ ಕಿರೀಟ ಕೊಡಲ್ಪಟ್ಟಿತ್ತು; ಅವನು ಜಯಿಸುತ್ತಿರುವವನಾಗಿ ಜಯಿಸುವದಕ್ಕೋಸ್ಕರ ಹೊರಟನು.

ಪ್ರಕಟನೆ 19:11

ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;

Interlinear

Choose Theme