Home Bibles ಕೀರ್ತನೆಗಳು 26:11 · ಕನ್ನಡ ಬೈಬಲ್
ಕೀರ್ತನೆಗಳು 26:11 · ಕನ್ನಡ ಬೈಬಲ್

ನಾನಾದರೋ ನನ್ನ ಯಥಾರ್ಥತ್ವದಲ್ಲಿ ನಡೆಯು ತ್ತೇನೆ: ನನ್ನನ್ನು ವಿಮೋಚಿಸು; ನನಗೆ ಕರುಣೆಯುಳ್ಳ ವನಾಗಿರು.ನನ್ನ ಪಾದವು ಸಮಸ್ಥಳದಲ್ಲಿ ನಿಲ್ಲುತ್ತದೆ; ಸಭೆಗಳಲ್ಲಿ ನಾನು ಕರ್ತನನ್ನು ಸ್ತುತಿಸುವೆನು.

Cross references

1 ಸಮುವೇಲ 12:2

ಇಗೋ, ಆ ಅರಸನು ಇನ್ನು ಮುಂದೆ ನಿಮ್ಮನ್ನು ನಡಿಸುತ್ತಾನೆ. ಈಗ ನಾನು ತಲೆನರೆತ ಮುದುಕನಾಗಿದ್ದೇನೆ. ಇಗೋ, ನನ್ನ ಕುಮಾರರು ನಿಮ್ಮ ಸಂಗಡ ಇದ್ದಾರೆ. ನಾನು ನನ್ನ ಬಾಲ್ಯದಿಂದ ಈ ದಿನದ ವರೆಗೂ ನಿಮ್ಮ ಮುಂದೆ ನಡಕೊಂಡಿದ್ದೇನೆ.

2 ದಿನವೃತ್ತಾಂತ 31:20

ಹೀಗೆಯೇ ಹಿಜ್ಕೀಯನು ಸಮಸ್ತ ಯೆಹೂದದಲ್ಲಿ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಉತ್ತಮವಾದ ದ್ದನ್ನೂ ಸರಿಯಾದದ್ದನ್ನೂ ಸತ್ಯವಾದದ್ದನ್ನೂ ನಡಿಸಿ ದನು.ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು.

ನೆಹೆಮ್ಯ 5:15

ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು ನಾಲ್ವತ್ತು ಬೆಳ್ಳಿಯ ಶೇಕೆಲುಗಳ ಹೊರ ತಾಗಿ ಅವರಿಂದ ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಾ ಇದ್ದರು. ಅವರ ಸೇವಕರು ಸಹ ಜನರನ್ನು ಆಳುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹೀಗೆ ಮಾಡಿದವನಲ್ಲ.

ನೆಹೆಮ್ಯ 13:14

ನನ್ನ ದೇವರೇ, ಇದಕ್ಕೋಸ್ಕರ ನನ್ನನ್ನು ಜ್ಞಾಪಕ ಮಾಡು; ನಾನು ದೇವರ ಆಲಯಕೋಸ್ಕರವೂ ಅದರ ವಿಚಾರಗಳಿಗೋಸ್ಕರವೂ ಮಾಡಿದ ನನ್ನ ಕೆಲಸಗ ಳನ್ನು ಅಳಿಸಿಬಿಡಬೇಡ.

ನೆಹೆಮ್ಯ 13:22

ಆಗ ಲೇವಿಯರು ತಮ್ಮನ್ನು ಶುಚಿ ಮಾಡಿಕೊಳ್ಳಬೇಕೆಂದೂ ಸಬ್ಬತ್‌ ದಿವಸವನ್ನು ಪರಿಶುದ್ಧ ಮಾಡುವ ಹಾಗೆ ಅವರು ಬಂದು ಬಾಗಲುಗಳನ್ನು ಕಾಯಬೇಕೆಂದೂ ಅವರಿಗೆ ಹೇಳಿದೆನು. ನನ್ನ ದೇವರೇ, ಇದಕ್ಕೋಸ್ಕರ ನೀನು ನನ್ನನ್ನು ನೆನಸಿ ನಿನ್ನ ಮಹಾ ಕೃಪೆಯ ಪ್ರಕಾರ ನನ್ನನ್ನು ಕರುಣಿಸು ಅಂದೆನು.

ನೆಹೆಮ್ಯ 13:31

ವರ್ಗಗಳನ್ನೂ ಅರ್ಪಣೆಯ ಕಟ್ಟಿಗೆಗಳಿಗೋಸ್ಕರವೂ ಪ್ರಥಮ ಫಲಗಳಿಗೋಸ್ಕರವೂ ದೃಢವಾದ ಕಾಲ ಗಳನ್ನೂ ನೇಮಿಸಿದೆನು. ನನ್ನ ದೇವರೇ, ಒಳ್ಳೇದಕ್ಕಾಗಿ ನನ್ನನ್ನು ಜ್ಞಾಪಕಮಾಡು.

ಯೋಬ 1:1

ಊಚ್‌ ಎಂಬ ದೇಶದಲ್ಲಿ ಒಬ್ಬ ಮನುಷ್ಯನು ಇದ್ದನು. ಅವನ ಹೆಸರು ಯೋಬ. ಆ ಮನುಷ್ಯನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲ ಗುವವನೂ ಆಗಿದ್ದನು.

ಕೀರ್ತನೆಗಳು 26:1

ಓ ಕರ್ತನೇ, ನನಗೆ ನ್ಯಾಯತೀರಿಸು; ಯಾಕಂದರೆ ನಾನು ನನ್ನ ಯಥಾರ್ಥತ್ವ ದಲ್ಲಿ ನಡೆದುಕೊಂಡಿದ್ದೇನೆ. ನಾನು ಕರ್ತನಲ್ಲಿ ಭರ ವಸವಿಟ್ಟಿದ್ದೇನೆ; ನಾನು ಕದಲುವದಿಲ್ಲ.

ಕೀರ್ತನೆಗಳು 49:7

ಆದರೆ ಸದಾ ಕಾಲಕ್ಕೂ ಬದುಕಿರುವಂತೆ ಮಾಡಿ ಕೊಳೆಯುವಿಕೆಯನ್ನು ನೋಡದ ಹಾಗೆ ತನ್ನ ಸಹೋದರನನ್ನು ಯಾವ ಮನುಷ್ಯನೂ

ಕೀರ್ತನೆಗಳು 49:15

ಆದರೆ ದೇವರು ನನ್ನ ಪ್ರಾಣವನ್ನು ಸಮಾಧಿಯ ಬಲದಿಂದ ವಿಮೋಚನೆ ಮಾಡುವನು, ಆತನು ನನ್ನನ್ನು ಅಂಗೀಕರಿಸುವನು. ಸೆಲಾ.

ಕೀರ್ತನೆಗಳು 69:18

ಸವಿಾಪವಾಗಿದ್ದು ನನ್ನ ಪ್ರಾಣವನ್ನು ರಕ್ಷಿಸು ನನ್ನನ್ನು ನನ್ನ ಶತ್ರುಗಳ ನಿಮಿತ್ತ ವಾಗಿ ವಿಮೋಚಿಸು.

ಕೀರ್ತನೆಗಳು 101:2

ಸಂಪೂರ್ಣವಾದ ಮಾರ್ಗದಲ್ಲಿ ಬುದ್ಧಿ ಯಿಂದ ನಡೆದು ಕೊಳ್ಳುವೆನು; ಯಾವಾಗ ನನ್ನ ಬಳಿಗೆ ಬರುವಿ? ನನ್ನ ಹೃದಯದ ಸಂಪೂರ್ಣತೆಯಿಂದ ನನ್ನ ಮನೆಯೊಳಗೆ ನಡೆದುಕೊಳ್ಳುವೆನು.

ಕೀರ್ತನೆಗಳು 103:3

ಆತನು ನಿನ್ನ ಅಪ ರಾಧಗಳನ್ನೆಲ್ಲಾ ಮನ್ನಿಸಿ ನಿನ್ನ ರೋಗಗಳನ್ನೆಲ್ಲಾ ಸ್ವಸ್ಥ ಮಾಡಿ

ಕೀರ್ತನೆಗಳು 103:7

ಆತನು ತನ್ನ ಮಾರ್ಗಗಳನ್ನು ಮೋಶೆಗೂ ತನ್ನ ಕ್ರಿಯೆಗಳನ್ನು ಇಸ್ರಾಯೇಲಿನ ಮಕ್ಕಳಿಗೂ ತಿಳಿಯಮಾಡಿದನು.

ಯೆಶಾಯ 38:3

ಓ ಕರ್ತನೇ, ನಾನು ನಿನ್ನ ಮುಂದೆ ಸತ್ಯವಾಗಿಯೂ ಯಥಾರ್ಥ ಹೃದಯದಿಂದಲೂ ನಡೆದು ನಿನ್ನ ದೃಷ್ಟಿ ಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಪು ಮಾಡಿಕೋ ಎಂದು ಬೇಡಿಕೊಂಡು ವ್ಯಥೆಪಟ್ಟು ಅತ್ತನು.

ಲೂಕ 1:6

ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.

1 ತೆಸಲೋನಿಕದವರಿಗೆ 2:10

ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ಶುದ್ಧರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬದಕ್ಕೆ ನೀವು ಸಾಕ್ಷಿಗಳು. ದೇವರೂ ಸಾಕ್ಷಿ.

ತೀತ 2:14

ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.

1 ಪೇತ್ರ 1:18

ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ;

Interlinear

Choose Theme