Home Bibles ಕೀರ್ತನೆಗಳು 27:1 · ಕನ್ನಡ ಬೈಬಲ್
ಕೀರ್ತನೆಗಳು 27:1 · ಕನ್ನಡ ಬೈಬಲ್

ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?

Cross references

ನಿರ್ಗಮಕಾಂಡ 15:2

ಕರ್ತನು ನನ್ನ ಬಲವೂ ಕೀರ್ತನೆಯೂ ಆಗಿದ್ದಾನೆ, ಆತನು ನನ್ನ ರಕ್ಷಣೆಯಾದನು, ಆತನು ನನ್ನ ದೇವರು, ಆತನಿಗಾಗಿ ನಾನು ಒಂದು ನಿವಾಸವನ್ನು ಸಿದ್ಧಮಾಡುವೆನು. ಆತನು ನನ್ನ ತಂದೆಯ ದೇವರು, ನಾನು ಆತನನ್ನು ಘನಪಡಿಸುವೆನು.

ದ್ವಿತೀಯೋಪದೇಶಕಾಂಡ 7:18

ನೀನು ಅವರಿಗೆ ಭಯಪಡಬೇಡ; ನಿನ್ನ ದೇವರಾದ ಕರ್ತನು ಫರೋಹನಿಗೂ ಎಲ್ಲಾ ಐಗುಪ್ತಕ್ಕೂ ಮಾಡಿದ್ದನು

ದ್ವಿತೀಯೋಪದೇಶಕಾಂಡ 7:21

ಅವರಿಗೆ ಹೆದರಬೇಡ, ನಿನ್ನ ದೇವರಾದ ಕರ್ತನು ಭಯಂಕರನಾದ ದೊಡ್ಡ ದೇವರಾಗಿ ನಿನ್ನ ಮಧ್ಯದಲ್ಲಿದ್ದಾನೆ.

ಯೋಬ 29:3

ಆಗ ಆತನ ದೀಪವು ನನ್ನ ತಲೆಯ ಮೇಲೆ ಹೊಳೆ ಯಿತು; ಆತನ ಬೆಳಕಿನಿಂದ ಕತ್ತಲಲ್ಲಿ ನಡೆದೆನು.

ಕೀರ್ತನೆಗಳು 3:8

ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ.

ಕೀರ್ತನೆಗಳು 11:1

ಕರ್ತನಲ್ಲಿ ನಾನು ಭರವಸವನ್ನು ಇಟ್ಟಿದ್ದೇನೆ; ಪಕ್ಷಿಯಂತೆ ನಿಮ್ಮ ಬೆಟ್ಟಕ್ಕೆ ಓಡು ಎಂದು ನನ್ನ ಪ್ರಾಣಕ್ಕೆ ನೀವು ಹೇಳುವದು ಹೇಗೆ?

ಕೀರ್ತನೆಗಳು 18:1

ನನ್ನ ಬಲವಾಗಿರುವ ಓ ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆ.

ಕೀರ್ತನೆಗಳು 18:28

ನೀನು ನನ್ನ ದೀಪವನ್ನು ಬೆಳಗಿಸುವಿ; ನನ್ನ ದೇವ ರಾದ ಕರ್ತನು ನನ್ನ ಕತ್ತಲೆಯನ್ನು ಪ್ರಕಾಶಿಸುವಂತೆ ಮಾಡುವನು.

ಕೀರ್ತನೆಗಳು 18:29

ನಿನ್ನಿಂದ ನಾನು ದಂಡಿನ ಮೇಲೆ ಬಿದ್ದೆನು; ನನ್ನ ದೇವರಿಂದ ಗೋಡೆ ನೆಗೆದೆನು.

ಕೀರ್ತನೆಗಳು 18:46

ಕರ್ತನು ಜೀವಿತನಾಗಿದ್ದಾನೆ; ನನ್ನ ಬಂಡೆ ಯಾದಾತನು ಸ್ತುತಿಹೊಂದಲಿ; ನನ್ನ ರಕ್ಷಣೆಯ ದೇವರು ಘನಹೊಂದಲಿ.

ಕೀರ್ತನೆಗಳು 19:14

ನನ್ನ ಬಲವೂ ನನ್ನ ವಿಮೋಚ ಕನೂ ಆಗಿರುವ ಕರ್ತನೇ, ನನ್ನ ಬಾಯಿಯ ಮಾತು ಗಳೂ ನನ್ನ ಹೃದಯದ ಧ್ಯಾನವೂ ನಿನ್ನ ಮುಂದೆ ಮೆಚ್ಚಿಕೆಯಾಗಿರಲಿ.

ಕೀರ್ತನೆಗಳು 28:7

ಕರ್ತನು ನನ್ನ ಬಲವೂ ಗುರಾಣಿಯೂ ಆಗಿದ್ದಾನೆ; ನನ್ನ ಹೃದಯವು ಆತನಲ್ಲಿ ಭರವಸವಿಟ್ಟದ್ದರಿಂದ ಸಹಾಯ ಹೊಂದಿದೆನು; ಆದದರಿಂದ ನನ್ನ ಹೃದಯವು ಬಹಳವಾಗಿ ಉತ್ಸಾಹ ಪಡುವದು; ನನ್ನ ಹಾಡಿನಿಂದ ಆತನನ್ನು ಕೊಂಡಾ ಡುವೆನು.

ಕೀರ್ತನೆಗಳು 43:2

ನೀನು ನನ್ನ ಬಲವಾದ ದೇವರಾಗಿದ್ದೀ; ಯಾಕೆ ನನ್ನನ್ನು ತಳ್ಳಿ ಬಿಟ್ಟಿದ್ದೀ? ಯಾಕೆ ನಾನು ಶತ್ರುವಿನ ಬಾಧೆಯಲ್ಲಿ ಇದ್ದು ದುಃಖದಲ್ಲಿ ನಡೆದುಕೊಳ್ಳಬೇಕು?

ಕೀರ್ತನೆಗಳು 46:1

ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.

ಕೀರ್ತನೆಗಳು 56:2

ಓ ಅತ್ಯುನ್ನತನೇ, ನನ್ನ ವಿರೋಧಿಗಳು ದಿನವೆಲ್ಲಾ ನನ್ನನ್ನು ನುಂಗಬೇಕೆಂದಿದ್ದಾರೆ; ನನಗೆ ವಿರೋಧವಾಗಿ ಗರ್ವದಿಂದ ಯುದ್ಧಮಾಡುವವರು ಅನೇಕರಾಗಿದ್ದಾರೆ.

ಕೀರ್ತನೆಗಳು 62:2

ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ; ನಾನು ಕದಲುವದೇ ಇಲ್ಲ.

ಕೀರ್ತನೆಗಳು 62:6

ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ. ನಾನು ಕದಲೆನು.

ಕೀರ್ತನೆಗಳು 68:19

ಪ್ರತಿ ದಿನವೂ ನಮ್ಮನ್ನು ಮೇಲುಗಳಿಂದ ತುಂಬಿಸು,ಕರ್ತನು ಅಂದರೆ ನಮ್ಮ ರಕ್ಷಣೆಯ ದೇವರು ಸ್ತುತಿ ಹೊಂದಲಿ. ಸೆಲಾ.

ಕೀರ್ತನೆಗಳು 84:11

ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.

ಕೀರ್ತನೆಗಳು 118:6

ಕರ್ತನು ನನ್ನ ಪರವಾಗಿದ್ದಾನೆ; ನಾನು ಭಯಪಡೆನು; ಮನುಷ್ಯನು ನನಗೆ ಏನು ಮಾಡುವನು?

ಕೀರ್ತನೆಗಳು 118:14

ನನ್ನ ಬಲವೂ ಕೀರ್ತನೆಯೂ ಕರ್ತನೇ; ಆತನೇ ನನಗೆ ರಕ್ಷಣೆಯಾದನು.

ಕೀರ್ತನೆಗಳು 118:21

ನಿನ್ನನ್ನು ಕೊಂಡಾಡು ವೆನು; ನನಗೆ ನೀನು ಉತ್ತರಕೊಟ್ಟು, ನನ್ನ ರಕ್ಷಣೆಯಾದಿ.

ಯೆಶಾಯ 2:5

ಓ ಯಾಕೋಬಿನ ಮನೆತನದವರೇ, ಬನ್ನಿರಿ, ಕರ್ತನ ಬೆಳಕಿನಲ್ಲಿ ನಡೆಯೋಣ.

ಯೆಶಾಯ 12:2

ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.

ಯೆಶಾಯ 45:24

ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.

ಯೆಶಾಯ 51:6

ಆಕಾಶಗಳ ಕಡೆಗೆ ನಿಮ್ಮ ಕಣ್ಣುಗಳನ್ನು ಎತ್ತಿರಿ ಮತ್ತು ಕೆಳಗಿರುವ ಭೂಮಿಯನ್ನು ನೋಡಿರಿ. ಯಾಕಂದರೆ ಆಕಾಶಗಳು ಹೊಗೆಯಂತೆ ಅಗೋಚರವಾಗುವವು, ಭೂಮಿಯು ಹಳೆಯ ಬಟ್ಟೆಯಂತಾಗುವದು. ಅದರಲ್ಲಿ ವಾಸಿಸುವ ವರು ಅದೇ ರೀತಿಯಲ್ಲಿ ಸಾಯುವರು. ಆದರೆ ನನ್ನ ರಕ್ಷಣೆಯು ಶಾಶ್ವತವಾಗಿರುವದು ಮತ್ತು ನನ್ನ ನೀತಿಯು ಎಂದಿಗೂ ರದ್ದಾಗದು.

ಯೆಶಾಯ 60:1

ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು.

ಯೆಶಾಯ 60:19

ಇನ್ನು ಮೇಲೆ ಸೂರ್ಯನು ನಿನಗೆ ಹಗಲಿ ನಲ್ಲಿ ಬೆಳಕಾಗಿರುವದಿಲ್ಲ, ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವದಿಲ್ಲ; ಆದರೆ ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು. ನಿನ್ನ ದೇವರು ನಿನ್ನ ಪ್ರಭೆಯಾಗಿರುವನು.

ಯೆಶಾಯ 61:10

ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.

ಯೆರೆಮಿಯ 20:11

ಯೆಹೂದದ ಅರಸನ ಮನೆಯವರಿಗೆ ಹೀಗೆ ಹೇಳು--

ಮೀಕ 7:7

ಆದರೆ ನಾನು ಕರ್ತನನ್ನು ಎದುರು ನೋಡುವೆನು; ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು; ನನ್ನ ದೇವರು ನನ್ನನ್ನು ಕೇಳುವನು.

ಮೀಕ 7:8

ನನ್ನ ಶತ್ರುವೇ, ನನ್ನ ಮೇಲೆ ಸಂತೋಷಪಡಬೇಡ; ನಾನು ಬಿದ್ದಿದ್ದರೂ ತಿರುಗಿ ಏಳುವೆನು; ಕತ್ತಲೆಯಲ್ಲಿ ಕೂತುಕೊಂಡರೂ ನನಗೆ ಬೆಳಕು ಕರ್ತನೇ.

ಮಲಾಕಿ 4:2

ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.

ಮತ್ತಾಯ 8:26

ಆಗ ಆತನು ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ಯಾಕೆ ಭಯಪಡುತ್ತೀರಿ ಎಂದು ಹೇಳಿ ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು. ಆಗ ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.

ಲೂಕ 2:30

ಯಾಕಂದರೆ ನನ್ನ ಕಣ್ಣುಗಳು ನಿನ್ನ ರಕ್ಷಣೆಯನ್ನು ನೋಡಿದವು.

ಲೂಕ 3:6

ಮಾನವರೆಲ್ಲರು ದೇವರ ರಕ್ಷಣೆಯನ್ನು ಕಾಣುವರು ಎಂದೂ ಬರೆದಿರುವಂತೆ ಹೀಗಾಯಿತು.

ಯೋಹಾನ 1:1

ಆದಿಯಲ್ಲಿ ವಾಕ್ಯವಿದ್ದನು; ಆ ವಾಕ್ಯವು ದೇವರೊಂದಿಗೆ ಇದ್ದನು; ಆ ವಾಕ್ಯವು ದೇವರಾಗಿದ್ದನು.

ಯೋಹಾನ 1:9

ಲೋಕದಲ್ಲಿ ಬರುವ ಪ್ರತಿಯೊಬ್ಬ ಮನುಷ್ಯನಿಗೆ ಆತನು ಬೆಳಕನ್ನು ಕೊಡುವ ನಿಜವಾದ ಬೆಳಕಾಗಿದ್ದನು.

ಯೋಹಾನ 8:12

ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.

ರೋಮಾಪುರದವರಿಗೆ 8:31

ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?

Interlinear

Choose Theme