Home Bibles ಕೀರ್ತನೆಗಳು 28:1 · ಕನ್ನಡ ಬೈಬಲ್
ಕೀರ್ತನೆಗಳು 28:1 · ಕನ್ನಡ ಬೈಬಲ್

ನನ್ನ ಬಂಡೆಯಾದ ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ; ಮೌನವಾಗಿರಬೇಡ. ನೀನು ಸುಮ್ಮನಿದ್ದರೆ ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನನಾಗುವೆನು.

Cross references

ಯೋಬ 33:28

ಆತನು ಅವನ ಪ್ರಾಣವು ಕುಣಿಗೆ ಹೋಗದಂತೆ ಕಾಪಾಡುವನು. ಅವನ ಪ್ರಾಣವು ಬೆಳಕನ್ನು ನೋಡುವದು.

ಕೀರ್ತನೆಗಳು 3:4

ನನ್ನ ಧ್ವನಿಯೆತ್ತಿ ಕರ್ತನಿಗೆ ಮೊರೆಯಿಟ್ಟೆನು; ಆತನು ತನ್ನ ಪರಿಶುದ್ಧ ಪರ್ವತದಿಂದ ನನ್ನ ಮೊರೆಯನ್ನು ಕೇಳಿದನು. ಸೆಲಾ.

ಕೀರ್ತನೆಗಳು 5:2

ನನ್ನ ಅರಸನೇ, ನನ್ನ ದೇವರೇ, ನನ್ನ ಮೊರೆಯ ಶಬ್ದವನ್ನು ಆಲೈಸು; ನಿನ್ನನ್ನೇ ಪ್ರಾರ್ಥಿಸುತ್ತೇನೆ.

ಕೀರ್ತನೆಗಳು 18:2

ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸು ವಾತನೂ ನನ್ನ ದೇವರೂ ನಾನು ಭರವಸವಿಡುವ ನನ್ನ ಬಲವೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ಉನ್ನತವಾದ ದುರ್ಗವೂ ಆಗಿದ್ದಾನೆ.

ಕೀರ್ತನೆಗಳು 22:2

ಓ ನನ್ನ ದೇವರೇ, ಹಗಲಿನಲ್ಲಿ ಕರೆಯುತ್ತೇನೆ; ನೀನು ಉತ್ತರ ಕೊಡುವದಿಲ್ಲ; ರಾತ್ರಿಯಲ್ಲಿಯೂ ನಾನು ಮೌನವಾಗಿರು ವದಿಲ್ಲ.

ಕೀರ್ತನೆಗಳು 30:4

ಓ ಕರ್ತನ ಪರಿಶುದ್ಧರೇ, ಆತನನ್ನು ಕೀರ್ತಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ.

ಕೀರ್ತನೆಗಳು 30:9

ನಾನು ಕುಣಿಯಲ್ಲಿಳಿ ದರೆ ನನ್ನ ರಕ್ತದಲ್ಲಿ ಲಾಭವೇನು? ಧೂಳು ನಿನ್ನನ್ನು ಕೊಂಡಾಡುವದೋ? ಅದು ನಿನ್ನ ಸತ್ಯವನ್ನು ತಿಳಿಸು ವದೋ?

ಕೀರ್ತನೆಗಳು 35:22

ಓ ಕರ್ತನೇ, ನೀನು ಇದನ್ನು ನೋಡಿದ್ದೀ; ಸುಮ್ಮನಿರಬೇಡ, ಓ ಕರ್ತನೇ, ನನಗೆ ದೂರವಾಗಿರ ಬೇಡ.

ಕೀರ್ತನೆಗಳು 39:12

ಓ ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಮೊರೆಗೆ ಕಿವಿಗೊಡು; ನನ್ನ ಕಣ್ಣೀರಿಗೆ ಮೌನ ವಾಗಿರಬೇಡ. ನಾನು ನಿನ್ನ ಸಂಗಡ ಪರದೇಶಸ್ಥನು; ನನ್ನ ತಂದೆಗಳೆಲ್ಲರ ಹಾಗೆ ಪ್ರವಾಸಿಯಾಗಿದ್ದೇನೆ.ಕರ್ತನೇ ನನ್ನನ್ನು ಉಳಿಸು; ಆಗ ನಾನು ಇಲ್ಲಿಂದ ಹೋಗಿಬಿಟ್ಟು ಇಲ್ಲದೆ ಹೋಗುವದಕ್ಕಿಂತ ಮುಂಚೆ ಬಲವನ್ನು ತಿರಿಗಿ ಪಡೆಯುವೆನು.

ಕೀರ್ತನೆಗಳು 42:9

ದೇವರೇ, ಯಾಕೆ ನನ್ನನ್ನು ಮರೆತುಬಿಟ್ಟಿದ್ದೀ? ಯಾಕೆ ನಾನು ಶತ್ರುವಿನ ಬಾಧೆಯಲ್ಲಿ ಇದ್ದು ದುಃಖದಲ್ಲಿ ನಡೆದು ಕೊಳ್ಳಬೇಕೆಂದು ನನ್ನ ಬಂಡೆಯಾದ ದೇವರಿಗೆ ನಾನು ಹೇಳುವೆನು?

ಕೀರ್ತನೆಗಳು 69:15

ನೀರಿನ ಪ್ರವಾಹವು ನನ್ನ ಮೇಲೆ ಹಾದು ಹೋಗದೇ ಇರಲಿ; ಅಗಾಧವು ನನ್ನನ್ನು ನುಂಗದೆ ಇರಲಿ; ಕುಣಿಯು ನನಗಾಗಿ ತನ್ನ ಬಾಯನ್ನು ಮುಟ್ಟ ದಿರಲಿ.

ಕೀರ್ತನೆಗಳು 77:1

ನನ್ನ ಸ್ವರದಿಂದ ದೇವರಿಗೆ ಮೊರೆಯಿಟ್ಟೆನು, ದೇವರಿಗೆ ನನ್ನ ಸ್ವರದಿಂದ ಮೊರೆಯಿಟ್ಟೆನು; ಆತನು ನನ್ನ ಮೊರೆಯನ್ನು ಆಲೈಸಿದನು.

ಕೀರ್ತನೆಗಳು 83:1

ಓ ದೇವರೇ, ಮೌನವಾಗಿರಬೇಡ; ಓ ದೇವರೇ, ಮೌನವಾಗಿರಬೇಡ; ಸುಮ್ಮ ನಿರಬೇಡ.

ಕೀರ್ತನೆಗಳು 88:4

ಕುಣಿಗೆ ಇಳಿಯುವವರ ಸಂಗಡ ಎಣಿಸಲ್ಪಟ್ಟಿದ್ದೇನೆ; ಬಲವಿಲ್ಲದ ಮನುಷ್ಯನ ಹಾಗಿದ್ದೇನೆ.

ಕೀರ್ತನೆಗಳು 88:5

ಕೊಲ್ಲಲ್ಪಟ್ಟು ಸಮಾಧಿಯಲ್ಲಿ ಮಲಗಿರುವವರನ್ನು ನೀನು ಇನ್ನು ಜ್ಞಾಪಕಮಾಡಿಕೊಳ್ಳದ ಹಾಗೆ ಸತ್ತವ ರಲ್ಲಿ ಬಿಡಲ್ಪಟ್ಟಿದ್ದೇನೆ; ಅವರು ನಿನ್ನ ಕೈಯಿಂದ ಕಡಿ ಯಲ್ಪಟ್ಟಿದ್ದಾರೆ.

ಕೀರ್ತನೆಗಳು 142:1

ನನ್ನ ಸ್ವರವೆತ್ತಿ ಕರ್ತನಿಗೆ ಮೊರೆಯಿಟ್ಟಿದ್ದೇನೆ ಸ್ವರವೆತ್ತಿ ನನ್ನ ಕರ್ತನಿಗೆ ವಿಜ್ಞಾಪನೆ ಮಾಡಿದ್ದೇನೆ.

ಕೀರ್ತನೆಗಳು 142:2

ಆತನ ಮುಂದೆ ನನ್ನ ಚಿಂತೆಯನ್ನು ಹೊಯ್ದಿದ್ದೇನೆ; ನನ್ನ ಇಕ್ಕಟ್ಟನ್ನು ಆತನ ಮುಂದೆ ತಿಳಿಸಿದ್ದೇನೆ.

ಕೀರ್ತನೆಗಳು 143:7

ಓ ಕರ್ತನೇ, ನನಗೆ ಬೇಗನೆ ಉತ್ತರಕೊಡು; ನನ್ನ ಪ್ರಾಣವು ಕುಂದಿಹೋಗಿದೆ; ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನವಾಗದ ಹಾಗೆ ನಿನ್ನ ಮುಖ ವನ್ನು ನನಗೆ ಮರೆಮಾಡಬೇಡ.

ಸಾಮೇತಿಗಳು 1:12

ಗುಂಡಿಯೊಳಕ್ಕೆ ಹೋಗುವವರನ್ನು ನುಂಗುವಂತೆ ಸಂಪೂರ್ಣವಾಗಿ ನಾವು ಅವರನ್ನು ಸಮಾಧಿಯಂತೆ ನುಂಗಿಬಿಡೋಣ.

ಯೆಶಾಯ 26:4

ನೀವು ಕರ್ತನಲ್ಲಿ ಸದಾ ಭರವಸವಿಡಿರಿ; ಕರ್ತನಾದ ಯೆಹೋವನಲ್ಲಿ ನಿತ್ಯವಾದ ಬಲವುಂಟು.

ಯೆಶಾಯ 38:18

ಸಮಾಧಿಯು ನಿನ್ನನ್ನು ಹೊಗಳುವದಿಲ್ಲ, ಮರಣವು ನಿನ್ನನ್ನು ಕೊಂಡಾಡುವದಿಲ್ಲ; ಕುಣಿಯೊಳಕ್ಕೆ ಹೋಗುವವರು ನಿನ್ನ ಸತ್ಯತೆಯಲ್ಲಿ ಭರವಸವಿಡಲಾರರು.

ಪ್ರಕಟನೆ 20:3

ಆ ಸಾವಿರ ವರುಷ ತೀರುವ ತನಕ ಅವನು ಇನ್ನು ಎಂದಿಗೂ ಜನಾಂಗಗಳನ್ನು ಮರುಳು ಗೊಳಿಸದ ಹಾಗೆ ದೂತನು ಅವನನ್ನು ತಳವಿಲ್ಲದ ತಗ್ಗಿನಲ್ಲಿ ದೊಬ್ಬಿ ಅವನನ್ನು ಮುಚ್ಚಿ ಅದರ ಮೇಲೆ ಮುದ್ರೆ ಹಾಕಿದನು. ಆ ಸಾವಿರ ವರುಷಗಳಾದ ಮೇಲೆ ಅವನಿಗೆ ಸ್ವಲ್ಪ ಕಾಲ ಬಿಡುಗಡೆಯಾಗತಕ್ಕದ್ದು.

Interlinear

Choose Theme