ನಾನು ನಿನಗೆ ಮೊರೆಯಿಡು ವಾಗ ನನ್ನ ಕೈಗಳನ್ನು ನಿನ್ನ ಪರಿಶುದ್ಧ ದೈವೋಕ್ತಿಯ ಕಡೆಗೆ ಎತ್ತುವಾಗ ನನ್ನ ವಿಜ್ಞಾಪನೆಯ ಶಬ್ದವನ್ನು ಕೇಳು.
Cross references
ಮಂದಿರದ ಸುತ್ತಲೂ ದೈವೋಕ್ತಿಯ ಸುತ್ತಲೂ ಗೋಡೆಗಳಿಗೆ ಸವಿಾಪವಾಗಿ ಕೊಠಡಿಗಳನ್ನು ಕಟ್ಟಿಸಿದನು.
ಕರ್ತನ ಒಡಂಬಡಿಕೆಯ ಮಂಜೂಷವನ್ನು ಅಲ್ಲಿ ಇರಿಸುವದಕ್ಕೆ ಮನೆಯೊಳಗೆ ದೈವೋಕ್ತಿಯ ಸ್ಥಾನವನ್ನು ಸಿದ್ಧಮಾಡಿಸಿದನು.
ಮನೆ ಎಲ್ಲಾ ಮುಗಿ ಯುವ ವರೆಗೂ ಅವನು ಮನೆಯನ್ನೆಲ್ಲಾ ಚಿನ್ನದಿಂದ ಹೊದಿಸಿ ಪರಿಶುದ್ಧಸ್ಥಾನದ ಮುಂಭಾಗದಲ್ಲಿರುವ ಬಲಿ ಪೀಠವನ್ನೆಲ್ಲಾ ಚಿನ್ನದಿಂದ ಹೊದಿಸಿದನು.
ಇದಲ್ಲದೆ ಯಾಜಕರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಮಹಾಪರಿಶುದ್ಧ ಸ್ಥಳವೆಂಬ ದೈವೋ ಕ್ತಿಯ ಮಂದಿರದ ಸ್ಥಾನಕ್ಕೆ ತಂದು ಕೆರೂಬಿಗಳ ರೆಕ್ಕೆಗಳ ಕೆಳಗೆ ಅದರ ಸ್ಥಳದಲ್ಲಿ ಇಟ್ಟರು.
ಆದರೆ ನನ್ನ ದೇವರಾದ ಕರ್ತನೇ, ನಿನ್ನ ಸೇವಕನ ಪ್ರಾರ್ಥನೆಗೂ ವಿಜ್ಞಾಪನೆಗೂ ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥಿಸುವ ಪ್ರಾರ್ಥನೆಯ ಕೂಗನ್ನೂ ಕೇಳು.
ನಿನ್ನ ಸೇವಕನ ವಿಜ್ಞಾಪನೆಯನ್ನೂ ನಿನ್ನ ಜನರಾದ ಇಸ್ರಾಯೇಲ್ಯರ ವಿಜ್ಞಾಪನೆಯನ್ನೂ ಕೇಳು. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ ನೀನು ಆಕಾಶದಲ್ಲಿ ವಾಸಮಾಡುವ ಸ್ಥಳದಲ್ಲಿ ಕೇಳಿ ಮನ್ನಿಸು.
ನಿನ್ನ ಜನರಾದ ಸಮಸ್ತ ಇಸ್ರಾಯೇಲಿನ ಯಾವ ಮನುಷ್ಯ ನಾದರೂ ಯಾವ ಪ್ರಾರ್ಥನೆಯನ್ನಾದರೂ ವಿಜ್ಞಾಪನೆ ಯನ್ನಾದರೂ ಮಾಡಿದರೆ ತನ್ನ ಸ್ವಂತ ಹೃದಯದ ಬಾಧೆಯನ್ನು ತಿಳಿದು
ಸೊಲೊಮೋನನು ಐದು ಮೊಳ ಉದ್ದವೂ ಐದು ಮೊಳ ಅಗಲವೂ ಮೂರು ಮೊಳ ಎತ್ತರವೂ ಆಗಿರುವ ಒಂದು ತಾಮ್ರದ ಪೀಠವನ್ನು ಮಾಡಿಸಿ ಅಂಗಳದ ಮಧ್ಯದಲ್ಲಿ ಅದನ್ನು ಇರಿಸಿ ತಾನು ಅದರ ಮೇಲೆ ನಿಂತು ಇಸ್ರಾಯೇಲಿನ ಸಮಸ್ತ ಸಭೆಯ ಮುಂದೆ ಮೊಣಕಾಲೂರಿ ಆಕಾಶಕ್ಕೆ ತನ್ನ ಕೈಗಳನ್ನು ಚಾಚಿ--
ನಾನಾದರೋ, ನಿನ್ನ ಕರುಣಾತಿಶಯದಿಂದ ನಿನ್ನ ಆಲಯಕ್ಕೆ ಬರುವೆನು; ನಿನಗೆ ಭಯಪಟ್ಟು ನಿನ್ನ ಪರಿಶುದ್ಧ ಮಂದಿರದ ಕಡೆಗೆ ಆರಾಧಿಸುವೆನು.
ನನ್ನ ಜೀವಮಾನದಲ್ಲೆಲ್ಲಾ ಹೀಗೆಯೇ ನಿನ್ನನ್ನು ಹಾಡಿಹರಸುತ್ತಾ ನಿನ್ನ ಹೆಸರೆತ್ತಿ ಕೈಮುಗಿಯುವೆನು.
ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.
ಕರ್ತನೇ, ನನ್ನ ಸ್ವರವನ್ನು ಕೇಳು; ನಿನ್ನ ಕಿವಿಗಳು ನನ್ನ ವಿಜ್ಞಾಪನೆಗಳ ಮೊರೆಯನ್ನು ಆಲೈಸುತ್ತಾ ಇರಲಿ.
ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದಲ್ಲಿ ಎತ್ತಿ ಕರ್ತನನ್ನು ಸ್ತುತಿಸಿರಿ.ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.
ನಿನ್ನ ಪರಿಶುದ್ಧ ಮಂದಿರದ ಕಡೆಗೆ ಅಡ್ಡ ಬಿದ್ದು ನಿನ್ನ ಪ್ರೀತಿ ಕರುಣೆಯ ನಿಮಿತ್ತವೂ ನಿನ್ನ ಸತ್ಯದ ನಿಮಿತ್ತವೂ ನಿನ್ನ ಹೆಸರನ್ನು ಕೊಂಡಾಡುವೆನು; ನಿನ್ನ ವಾಕ್ಯವನ್ನು ನಿನ್ನ ಎಲ್ಲಾ ಹೆಸರಿಗಿಂತಲೂ ಮಿಗಿಲಾಗಿ ಘನಪಡಿಸಿದ್ದೀ.
ನಾನು ಕರ್ತನಿಗೆ--ನೀನು ನನ್ನ ದೇವರಾಗಿದ್ದೀ; ಕರ್ತನೇ, ನನ್ನ ವಿಜ್ಞಾಪನೆಗಳ ಸ್ವರಕ್ಕೆ ಕಿವಿಗೊಡು.
ಕರ್ತನೇ, ನಿನ್ನನ್ನು ಕೂಗುತ್ತೇನೆ; ನನ್ನ ಬಳಿಗೆ ಬರಲು ತ್ವರೆಯಾಗಿ ಬಾ; ನಾನು ನಿನ್ನನ್ನು ಕರೆಯುವಾಗ, ನನ್ನ ಸ್ವರಕ್ಕೆ ಕಿವಿಗೊಡು.
ನನ್ನ ಪ್ರಾರ್ಥನೆ ನಿನ್ನ ಮುಂದೆ ಧೂಪವಾಗಿಯೂ ನನ್ನ ಕೈ ಎತ್ತುವದು ಸಾಯಂಕಾಲದ ಬಲಿಯಾಗಿಯೂ ಸಿದ್ಧವಾಗಿರಲಿ.
ನನ್ನ ಕೈಗಳನ್ನು ನಿನ್ನ ಕಡೆಗೆ ಚಾಚುತ್ತೇನೆ; ನನ್ನ ಪ್ರಾಣವು ದಾಹಗೊಂಡ ಭೂಮಿಯ ಹಾಗೆ ನಿನಗಾಗಿ ದಾಹಗೊಂಡಿದೆ.
ಎದ್ದೇಳು, ರಾತ್ರಿಯಲ್ಲಿ ಕೂಗು; ನಿನ್ನ ಹೃದಯವನ್ನು ಕರ್ತನ ಸಮ್ಮುಖದಲ್ಲಿ ಆರಂಭದ ಜಾವಗಳಲ್ಲಿ (ನೀರಿನಂತೆ) ಹೊಯ್ಯಿ; ನಿನ್ನ ಕೈಗಳನ್ನು ಆತನ ಕಡೆಗೆ ಎತ್ತು, ಯಾಕಂದರೆ ನಿನ್ನ ಚಿಕ್ಕ ಮಕ್ಕಳ ಪ್ರಾಣವು ಪ್ರತಿಯೊಂದು ಬೀದಿಯ ಬದಿಯಲ್ಲಿ ಹಸಿವೆಯಿಂದ ದುರ್ಬಲವಾಗಿದೆ.
ಯಾವಾಗ ಬರಹಕ್ಕೆ ರುಜುಹಾಕಿದ್ದಾ ಯಿತ್ತೆಂದು ದಾನಿಯೇಲನಿಗೆ ತಿಳಿಯಿತೋ ಆಗ ಅವನು ತನ್ನ ಮನೆಗೆ ಹೋದನು; ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆಯಲ್ಪಟ್ಟಿದ್ದ ರಿಂದ ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ಸ್ತೋತ್ರವನ್ನೂ ಸಲ್ಲಿಸಿ ದನು.
ಆ ಮೇಲೆ ಆ ಮನುಷ್ಯರೆಲ್ಲಾ ಕೂಡಿ ಬಂದು ದಾನಿಯೇಲನು ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡುತ್ತಿರುವ ದನ್ನು ಕಂಡರು.
ಆದದರಿಂದ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ಸಂದೇಹವೂ ಇಲ್ಲದೆ ಪವಿತ್ರವಾದ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ನಾನು ಅಪೇಕ್ಷಿಸು ತ್ತೇನೆ.