Home Bibles ಕೀರ್ತನೆಗಳು 3:2 · ಕನ್ನಡ ಬೈಬಲ್
ಕೀರ್ತನೆಗಳು 3:2 · ಕನ್ನಡ ಬೈಬಲ್

ದೇವರಲ್ಲಿ ಇವನಿಗೆ ಯಾವ ಸಹಾಯವೂ ಇಲ್ಲವೆಂದು ನನ್ನ ವಿಷಯದಲ್ಲಿ ಅನೇಕರು ಹೇಳುತ್ತಾರೆ. ಸೆಲಾ.

Cross references

2 ಸಮುವೇಲ 16:7

ಶಿಮ್ಮಿ ಅವನನ್ನು ದೂಷಿಸುತ್ತಾ--ರಕ್ತದ ಮನುಷ್ಯನೇ, ಬೆಲಿಯಾಳನ ಮನುಷ್ಯನೇ, ಹೊರಟು ಬಾ, ಹೊರಟು ಬಾ.

ಕೀರ್ತನೆಗಳು 3:4

ನನ್ನ ಧ್ವನಿಯೆತ್ತಿ ಕರ್ತನಿಗೆ ಮೊರೆಯಿಟ್ಟೆನು; ಆತನು ತನ್ನ ಪರಿಶುದ್ಧ ಪರ್ವತದಿಂದ ನನ್ನ ಮೊರೆಯನ್ನು ಕೇಳಿದನು. ಸೆಲಾ.

ಕೀರ್ತನೆಗಳು 3:8

ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ.

ಕೀರ್ತನೆಗಳು 4:2

ಓ ಮನುಷ್ಯರ ಪುತ್ರರೇ, ನನ್ನ ಘನವನ್ನು ಅವ ಮಾನಕ್ಕೆ ತಿರುಗಿಸುವದು ಎಷ್ಟರ ವರೆಗೆ? ನೀವು ವ್ಯರ್ಥವಾದದ್ದನ್ನು ಪ್ರೀತಿಮಾಡಿ ಸುಳ್ಳನ್ನು ಹುಡುಕು ವದು ಎಷ್ಟರ ವರೆಗೆ? ಸೆಲಾ.

ಕೀರ್ತನೆಗಳು 4:4

ಭಯಭಕ್ತಿಯಿಂದಿರ್ರಿ; ಪಾಪಮಾಡಬೇಡಿರಿ; ಹಾಸಿಗೆ ಗಳ ಮೇಲೆ ನಿಮ್ಮ ಸ್ವಂತ ಹೃದಯದಲ್ಲಿ ಮಾತನಾಡಿ ಮೌನವಾಗಿರ್ರಿ. ಸೆಲಾ.

ಕೀರ್ತನೆಗಳು 22:7

ನನ್ನನ್ನು ನೋಡುವವರೆಲ್ಲರು ನನ್ನನ್ನು ಗೇಲಿ ಮಾಡಿ ನಗುವರು, ಅವರು ತುಟಿ ಅಗಲಮಾಡಿ ತಲೆ ಆಡಿಸುತ್ತಾ--

ಕೀರ್ತನೆಗಳು 42:3

ನಿನ್ನ ದೇವರು ಎಲ್ಲಿ ಎಂದು ಅವರು ದಿನವೆಲ್ಲಾ ನನಗೆ ಹೇಳುವ ದರಿಂದ ನನ್ನ ಕಣ್ಣೀರು ನನಗೆ ಹಗಲಿರುಳು ಆಹಾರ ವಾಗಿದೆ.

ಕೀರ್ತನೆಗಳು 42:10

ನನ್ನ ವೈರಿಗಳು--ನಿನ್ನ ದೇವರು ಎಲ್ಲಿ ಎಂದು ದಿನವೆಲ್ಲಾ ನನಗೆ ಹೇಳಿ ನನ್ನನ್ನು ನಿಂದಿಸಿದ್ದರಿಂದ ನನ್ನ ಎಲುಬುಗಳು ಮುರಿದಹಾಗಿವೆ.ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.

ಕೀರ್ತನೆಗಳು 71:11

ದೇವರು ಅವನನ್ನು ಕೈ ಬಿಟ್ಟಿದ್ದಾನೆ; ಅವನನ್ನು ಹಿಂಸಿಸಿ, ಹಿಡಿದುಕೊಳ್ಳಿರಿ; ಅವನನ್ನು ಬಿಡಿಸುವವನು ಯಾರೂ ಇಲ್ಲ ಎಂದು ಅವರು ಅನ್ನುತ್ತಾರೆ.

ಕೀರ್ತನೆಗಳು 124:2

ಮನುಷ್ಯರು ನಮಗೆ ವಿರೋಧವಾಗಿ ಏಳುವಾಗ, ಕರ್ತನು ನಮಗಿಲ್ಲದಿದ್ದರೆ ನಮ್ಮ ಮೇಲೆ ಅವರ ಕೋಪವು ಉರಿದು,

ಹಬಕ್ಕೂಕ 3:3

ದೇವರು ತೇಮಾನಿ ನಿಂದಲೂ ಪರಿಶುದ್ಧನು ಪಾರಾನ್‌ ಪರ್ವತದಿಂದಲೂ ಬಂದನು. ಸೆಲಾ. ಆತನ ಮಹಿಮೆ ಆಕಾಶಗಳನ್ನು ಮುಚ್ಚಿತು: ಆತನ ಸ್ತೋತ್ರವು ಭೂಮಿಯನ್ನು ತುಂಬಿ ಸಿತು.

ಹಬಕ್ಕೂಕ 3:9

ನೀನು ಗೋತ್ರಗಳಿಗೆ ಆಣೆ ಯಿಟ್ಟ ವಾಕ್ಯದ ಪ್ರಕಾರ ನಿನ್ನ ಬಿಲ್ಲು ಪೂರ್ಣ ಬರಿದಾ ಯಿತು. ಸೆಲಾ. ಭೂಮಿಯನ್ನು ನದಿಗಳಿಂದ ಸೀಳಿದಿ.

ಹಬಕ್ಕೂಕ 3:13

ನಿನ್ನ ಜನರ ರಕ್ಷಣೆಗೋಸ್ಕರವೂ ನಿನ್ನ ಅಭಿಷಿಕ್ತರ ರಕ್ಷಣೆಗೊಸ್ಕರವೂ ನೀನು ಹೊರಟು ಹೋಗಿ ಕುತ್ತಿಗೆಯ ವರೆಗೂ ಆಸ್ತಿವಾರವನ್ನು ಬರಿದು ಮಾಡಿದ ಹಾಗೆ ದುಷ್ಟರ ಮನೆಯ ತಲೆಯನ್ನು ಗಾಯ ಮಾಡಿಬಿಟ್ಟಿದ್ದೀ. ಸೆಲಾ.

ಮತ್ತಾಯ 27:42

ಇವನು ಬೇರೆಯವರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.ಇವನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗಿಳಿದು ಬರಲಿ; ಆಗ ನಾವು ಅವನನ್ನು ನಂಬುವೆವು;

Interlinear

Choose Theme