Home Bibles ಕೀರ್ತನೆಗಳು 30:1 · ಕನ್ನಡ ಬೈಬಲ್
ಕೀರ್ತನೆಗಳು 30:1 · ಕನ್ನಡ ಬೈಬಲ್

ಓ ಕರ್ತನೇ, ನಿನ್ನನ್ನು ಕೊಂಡಾಡುವೆನು; ನೀನು ನನ್ನ ಶತ್ರುಗಳು ನನ್ನ ವಿಷಯದಲ್ಲಿ ಸಂತೋಷಪಡದಂತೆ ಮಾಡಿ ನನ್ನನ್ನು ಮೇಲಕ್ಕೆ ಎತ್ತಿದ್ದೀ.

Cross references

ದ್ವಿತೀಯೋಪದೇಶಕಾಂಡ 20:5

ಆಗ ಅಧಿಕಾರಿಗಳು ಜನಕ್ಕೆ--ಹೊಸ ಮನೆಯನ್ನು ಕಟ್ಟಿ ಗೃಹಪ್ರತಿಷ್ಠೆಮಾಡದ ಮನುಷ್ಯನು ಯುದ್ಧದಲ್ಲಿ ಸಾಯಲಾಗಿ ಮತ್ತೊಬ್ಬನು ಗೃಹಪ್ರತಿಷ್ಠೆಮಾಡದ ಹಾಗೆ ಅವನು ತಿರುಗಿಕೊಂಡು ತನ್ನ ಮನೆಗೆ ಹೋಗಲಿ.

2 ಸಮುವೇಲ 5:11

ಆಗ ತೂರಿನ ಅರಸನಾದ ಹೀರಾ ಮನು ದಾವೀದನ ಬಳಿಗೆ ದೂತರನ್ನೂ ದೇವದಾರು ಮರಗಳನ್ನೂ ಬಡಿಗೆಯವರನ್ನೂ ಶಿಲ್ಪಿಗಳನ್ನೂ ಕಳು ಹಿಸಿದನು. ಅವರು ದಾವೀದನಿಗೆ ಮನೆಯನ್ನು ಕಟ್ಟಿ ದರು.

2 ಸಮುವೇಲ 6:20

ಆಗ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವದಕ್ಕೆ ಹೋದಾಗ ಸೌಲನ ಮಗಳಾದ ವಿಾಕಲಳು ದಾವೀದನಿಗೆ ಎದುರಾಗಿ ಬಂದು--ನಿಷ್ಪ್ರ ಯೋಜಕ ಮನುಷ್ಯರಲ್ಲಿ ಒಬ್ಬನು ನಾಚಿಕೆ ಇಲ್ಲದೆ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿದ ಹಾಗೆಯೇ ಈಹೊತ್ತು ತನ್ನ ಸೇವಕರ ದಾಸಿಗಳ ಕಣ್ಣುಮುಂದೆ ತನ್ನ ವಸ್ತ್ರ ಗಳನ್ನು ಬಿಚ್ಚಿಹಾಕಿದ್ದ ಇಸ್ರಾಯೇಲಿನ ಅರಸನು ಈ ಹೊತ್ತು ಎಷ್ಟು ಘನಪಟ್ಟನು ಅಂದಳು.

2 ಸಮುವೇಲ 7:2

ಅರ ಸನು ಪ್ರವಾದಿಯಾದ ನಾತಾನನಿಗೆ--ನೋಡು, ನಾನು ದೇವದಾರುಗಳ ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಮಂಜೂಷವು ತೆರೆಗಳ ಮಧ್ಯದಲ್ಲಿ ವಾಸವಾಗಿದೆ ಅಂದನು.

2 ಸಮುವೇಲ 20:3

ದಾವೀದನು ಯೆರೂಸಲೇಮಿನಲ್ಲಿರುವ ತನ್ನ ಮನೆಗೆ ಬಂದನು; ಅರಸನು ಮನೆಯಲ್ಲಿ ಕಾಯಲಿಟ್ಟ ಉಪಪತ್ನಿಗಳಾದ ಹತ್ತುಮಂದಿ ಸ್ತ್ರೀಯರನ್ನು ತೆಗೆದು ಕೊಂಡು ಅವರನ್ನು ಒಂದು ಕಾವಲಿನಲ್ಲಿ ಇರಿಸಿ ಸಾಕುತ್ತಿದ್ದನು. ಆದರೆ ಅವರನ್ನು ತಿರುಗಿ ಕೂಡಲಿಲ್ಲ. ಹಾಗೆಯೇ ಅವರು ಸಾಯುವ ದಿವಸದ ವರೆಗೂ ಕಾವಲಲ್ಲಿ ಇರಿಸಲ್ಪಟ್ಟು ವಿಧವೆಯರ ಹಾಗೆಯೇ ಬದುಕಿದರು.

2 ಸಮುವೇಲ 24:25

ಆಗ ದಾವೀದನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು. ಹೀಗೆ ಕರ್ತನು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ ಇಸ್ರಾ ಯೇಲಿನ ಕಡೆಯಿಂದ ಆ ಬಾಧೆಯು ನಿಂತಿತು.

1 ಅರಸುಗಳು 8:63

ಸೊಲೊಮೋನನು ಕರ್ತನಿಗೆ ಅರ್ಪಿಸಿದ ಸಮಾ ಧಾನದ ಬಲಿಗಳಿಗೋಸ್ಕರ ಇಪ್ಪತ್ತೆರಡು ಸಾವಿರ ಎತ್ತು ಗಳನ್ನೂ ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನೂ ಅರ್ಪಿಸಿದನು. ಹೀಗೆಯೇ ಅರಸನೂ ಇಸ್ರಾಯೇಲಿನ ಸಮಸ್ತ ಮಕ್ಕಳೂ ಕರ್ತನ ಮಂದಿರವನ್ನು ಪ್ರತಿಷ್ಠೆ ಮಾಡಿದರು.

1 ದಿನವೃತ್ತಾಂತ 21:6

ಆದರೆ ಲೇವಿಯರನ್ನೂ ಬೆನ್ಯಾವಿಾನ್ಯ ರನ್ನೂ ಅವರಲ್ಲಿ ಎಣಿಸಲಿಲ್ಲ; ಯಾಕಂದರೆ ಅರಸನ ಮಾತು ಯೋವಾಬನಿಗೆ ಅಸಹ್ಯಕರವಾಗಿತ್ತು.

ಕೀರ್ತನೆಗಳು 13:4

ನನ್ನ ಶತ್ರುವು--ಅವನನ್ನು ಗೆದ್ದೆನೆಂದು ಹೇಳದ ಹಾಗೆಯೂ ನಾನು ಕದಲುವಾಗ ನನ್ನನ್ನು ಹಿಂಸಿಸುವವರು ಉಲ್ಲಾಸಪಡದ ಹಾಗೆಯೂ ನನ್ನ ಕಣ್ಣುಗಳನ್ನು ಬೆಳಗುವ ಹಾಗೆ ಮಾಡು.

ಕೀರ್ತನೆಗಳು 25:2

ಓ ನನ್ನ ದೇವರೇ, ನಾನು ನಿನ್ನಲ್ಲಿ ಭರವಸೆ ಇಡುತ್ತೇನೆ; ನಾನು ಆಶಾಭಂಗ ಪಡದಂತೆಮಾಡು; ನನ್ನ ಶತ್ರುಗಳು ನನ್ನ ಮೇಲೆ ಜಯೋತ್ಸಾಹ ಮಾಡದಿರಲಿ.

ಕೀರ್ತನೆಗಳು 27:6

ಈಗ ನನ್ನ ಸುತ್ತಲಿರುವ ಶತ್ರುಗಳ ಮೇಲೆ ನನ್ನ ತಲೆಯು ಎತ್ತಲ್ಪಟ್ಟಿರುವದು. ಆದದರಿಂದ ಆತನ ಗುಡಾರದಲ್ಲಿ ಉತ್ಸಾಹದ ಬಲಿಗಳನ್ನು ಅರ್ಪಿ ಸುವೆನು; ಹೌದು, ಕರ್ತನಿಗೆ ಹಾಡಿ ಕೀರ್ತಿಸುವೆನು.

ಕೀರ್ತನೆಗಳು 28:9

ನಿನ್ನ ಜನ ರನ್ನು ರಕ್ಷಿಸು; ನಿನ್ನ ಸ್ವಾಸ್ಥ್ಯವನ್ನು ಆಶೀರ್ವದಿಸು; ಅವರನ್ನು ಪರಿಪಾಲಿಸುತ್ತಾ ಯುಗಯುಗಕ್ಕೂ ಅವ ರನ್ನು ಮೇಲಕ್ಕೆ ಎತ್ತು.

ಕೀರ್ತನೆಗಳು 34:3

ನನ್ನ ಸಂಗಡ ಕರ್ತ ನನ್ನು ಘನಪಡಿಸಿರಿ. ನಾವು ಒಟ್ಟಾಗಿ ಆತನ ಹೆಸ ರನ್ನು ಘನಪಡಿಸೋಣ.

ಕೀರ್ತನೆಗಳು 35:19

ನನ್ನ ಶತ್ರುಗಳು ನನ್ನ ವಿಷ ಯದಲ್ಲಿ ಸುಳ್ಳಾಗಿ ಸಂತೋಷಪಡದೆ ಇರಲಿ; ಇಲ್ಲವೆ ನನ್ನನ್ನು ಕಾರಣವಿಲ್ಲದೆ ಹಗೆಮಾಡುವವರು ಕಣ್ಣು ಸನ್ನೆಮಾಡದೆ ಇರಲಿ.

ಕೀರ್ತನೆಗಳು 35:24

ಓ ಕರ್ತನೇ, ನನ್ನ ದೇವರೇ, ನಿನ್ನ ನೀತಿಯ ಪ್ರಕಾರ ನನಗೆ ನ್ಯಾಯತೀರಿಸು; ಅವರು ನನ್ನ ವಿಷಯವಾಗಿ ಸಂತೋಷಪಡದೆ ಇರಲಿ.

ಕೀರ್ತನೆಗಳು 41:11

ನನ್ನ ಶತ್ರು ನನ್ನ ಮೇಲೆ ಜಯಧ್ವನಿ ಮಾಡದೆ ಇರುವದ ರಿಂದಲೇ ನಿನ್ನ ಒಲುಮೆಯು ನನಗಿರುವ ದೆಂದು ನಾನು ಬಲ್ಲೆನು.

ಕೀರ್ತನೆಗಳು 66:17

ನನ್ನ ಬಾಯಿಂದ ಆತನನ್ನು ಕೂಗಿದೆನು; ನನ್ನ ನಾಲಿಗೆಯಿಂದ ಆತನನ್ನು ಉನ್ನತಪಡಿಸಿದೆನು.

ಕೀರ್ತನೆಗಳು 79:4

ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ.

ಕೀರ್ತನೆಗಳು 79:10

ಅವರ ದೇವರು ಎಲ್ಲಿ ಎಂದು ಅನ್ಯಜನಾಂಗಗಳು ಯಾಕೆ ಹೇಳಬೇಕು? ಚೆಲ್ಲಿರುವ ನಿನ್ನ ಸೇವಕರ ರಕ್ತದ ಪ್ರತಿ ದಂಡನೆಯನ್ನು ನಮ್ಮ ಕಣ್ಣುಗಳ ಮುಂದೆ ಅನ್ಯ ಜನಾಂಗಗಳಲ್ಲಿ ತಿಳಿಯಲ್ಪಡಲಿ.

ಕೀರ್ತನೆಗಳು 89:41

ಮಾರ್ಗಸ್ಥರೆಲ್ಲರು ಅವನನ್ನು ಕೊಳ್ಳೇ ಹೊಡೆಯುತ್ತಾರೆ; ತನ್ನ ನೆರೆಯವರಿಗೆ ಅವನು ನಿಂದೆ ಯಾಗಿದ್ದಾನೆ.

ಕೀರ್ತನೆಗಳು 140:8

ಓ ಕರ್ತನೇ, ದುಷ್ಟರ ಆಶೆಯನ್ನು ನೆರವೇರಿಸಬೇಡ; ಅವರು ಉನ್ನತಕ್ಕೇರುವ ಹಾಗೆ ಅವರ ಯುಕ್ತಿಯನ್ನು ಪೂರೈಸಬೇಡ ಎಂದು ಹೇಳಿದೆನು ಸೆಲಾ.

ಕೀರ್ತನೆಗಳು 145:1

ಓ ಅರಸನಾದ ನನ್ನ ದೇವರೇ, ನಿನ್ನನ್ನು ಘನಪಡಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಸ್ತುತಿಸುವೆನು.

ವಿಲಾಪಗಳು 2:15

ದಾರಿಯಲ್ಲಿ ಹೋಗುವವ ರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ; ಅವರು ಯೆರೂಸಲೇಮಿನ ಕುಮಾರ್ತೆಯ ವಿಷಯದಲ್ಲಿ ಸಿಳ್ಳು ಹಾಕಿ ತಲೆಯಾಡಿಸಿ--ಆ ಮನುಷ್ಯರು ಕರೆಯು ತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ ಸರ್ವ ಭೂಮಿಯ ಸಂತೋಷವೂ ಆಗಿರುವ ನಗರಿಯು ಇದೇಯೋ?

ದಾನಿಯೇಲ 4:37

ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.

Interlinear

Choose Theme