Home Bibles ಕೀರ್ತನೆಗಳು 30:10 · ಕನ್ನಡ ಬೈಬಲ್
ಕೀರ್ತನೆಗಳು 30:10 · ಕನ್ನಡ ಬೈಬಲ್

ಓ ಕರ್ತನೇ, ಕೇಳು; ನನ್ನ ಮೇಲೆ ಕರುಣೆಯಿಡು. ಕರ್ತನೇ, ನನಗೆ ಸಹಾಯಕನಾಗಿರು.

Cross references

ಕೀರ್ತನೆಗಳು 6:6

ನಾನು ನರನರಳಿ ದಣಿದಿದ್ದೇನೆ; ಪ್ರತಿ ರಾತ್ರಿಯೂ ನನ್ನ ಕಣ್ಣೀರಿನಿಂದ ಮಂಚವು ತೇಲಾ ಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನೆದು ಹೋಗುತ್ತದೆ.

ಕೀರ್ತನೆಗಳು 27:7

ಓ ಕರ್ತನೇ, ನಾನು ಕೂಗುವ ಸ್ವರವನ್ನು ಕೇಳು; ನನ್ನನ್ನು ಕರುಣಿಸಿ ನನಗೆ ಉತ್ತರಕೊಡು.

ಕೀರ್ತನೆಗಳು 28:7

ಕರ್ತನು ನನ್ನ ಬಲವೂ ಗುರಾಣಿಯೂ ಆಗಿದ್ದಾನೆ; ನನ್ನ ಹೃದಯವು ಆತನಲ್ಲಿ ಭರವಸವಿಟ್ಟದ್ದರಿಂದ ಸಹಾಯ ಹೊಂದಿದೆನು; ಆದದರಿಂದ ನನ್ನ ಹೃದಯವು ಬಹಳವಾಗಿ ಉತ್ಸಾಹ ಪಡುವದು; ನನ್ನ ಹಾಡಿನಿಂದ ಆತನನ್ನು ಕೊಂಡಾ ಡುವೆನು.

ಕೀರ್ತನೆಗಳು 51:1

ಓ ದೇವರೇ, ನನ್ನ ಮೇಲೆ ಕರುಣೆಯಿಡು; ನಿನ್ನ ಪ್ರೀತಿಕರುಣೆಯ ಪ್ರಕಾರ ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ದ್ರೋಹ ಗಳನ್ನು ಅಳಿಸಿಬಿಡು.

ಕೀರ್ತನೆಗಳು 54:4

ಇಗೋ, ದೇವರು ನನ್ನ ಸಹಾಯಕನು; ಕರ್ತನು ನನ್ನ ಪ್ರಾಣವನ್ನು ಉದ್ಧಾರ ಮಾಡುವವರ ಸಂಗಡ ಇದ್ದಾನೆ.

ಕೀರ್ತನೆಗಳು 143:1

ಓ ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ವಿಜ್ಞಾಪನೆಗಳಿಗೆ ಕಿವಿ ಗೊಡು; ನಿನ್ನ ನಂಬಿಗಸ್ತಿಕೆಯಲ್ಲಿಯೂ ನೀತಿಯಲ್ಲಿಯೂ ನನಗೆ ಉತ್ತರಕೊಡು.

ಕೀರ್ತನೆಗಳು 143:7

ಓ ಕರ್ತನೇ, ನನಗೆ ಬೇಗನೆ ಉತ್ತರಕೊಡು; ನನ್ನ ಪ್ರಾಣವು ಕುಂದಿಹೋಗಿದೆ; ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನವಾಗದ ಹಾಗೆ ನಿನ್ನ ಮುಖ ವನ್ನು ನನಗೆ ಮರೆಮಾಡಬೇಡ.

Interlinear

Choose Theme