Home Bibles ಕೀರ್ತನೆಗಳು 30:12 · ಕನ್ನಡ ಬೈಬಲ್
ಕೀರ್ತನೆಗಳು 30:12 · ಕನ್ನಡ ಬೈಬಲ್

ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.

Cross references

ಆದಿಕಾಂಡ 49:6

ನನ್ನ ಪ್ರಾಣವೇ, ಅವರ ರಹಸ್ಯವಾದ ಸಭೆಯಲ್ಲಿ ಸೇರಬೇಡ.ನನ್ನ ಘನವೇ, ಅವರೊಂದಿಗೆ ಬೆರಿಕೆಯಾಗಬೇಡ; ಅವರು ತಮ್ಮ ಕೋಪದಲ್ಲಿ ಮನುಷ್ಯನನ್ನು ಕೊಂದರು. ಅವರು ಸ್ವಇಚ್ಛೆಯಿಂದ ಗೋಡೆಯನ್ನು ಕೆಡವಿಹಾಕಿ ದರು.

ಎಸ್ತೇರ್ 8:16

ಯೆಹೂದ್ಯರಿಗೆ ಬೆಳಕೂ ಸಂತೋಷವೂ ಆನಂದವೂ ಘನವೂ ಉಂಟಾ ಗಿದ್ದವು.ಪ್ರತಿ ಪ್ರಾಂತ್ಯದಲ್ಲಿಯೂ ಪ್ರತಿ ಪಟ್ಟಣ ದಲ್ಲಿಯೂ ಅರಸನ ಮಾತೂ ಅವನ ಆಜ್ಞೆಯೂ ಎಲ್ಲಿಗೆ ಬಂತೋ ಅಲ್ಲಿ ಯೆಹೂದ್ಯರಿಗೆ ಸಂತೋಷವೂ ಆನಂದವೂ ಹಬ್ಬವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಆ ದೇಶದ ಅನೇಕ ಜನರು ಯೆಹೂದ್ಯ ರಾದರು. ಯಾಕಂದರೆ ಯೆಹೂದ್ಯರ ಭಯವು ಅವರ ಮೇಲೆ ಇತ್ತು.

ಎಸ್ತೇರ್ 9:22

ಏನಂದರೆ, ಆ ದಿವಸಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳಿಂದ ತಪ್ಪಿಸಿಕೊಂಡು ವಿಶ್ರಾಂತಿ ಹೊಂದಿದರು. ಆ ತಿಂಗಳು ದುಃಖದಿಂದ ಸಂತೋಷಕ್ಕೂ ಗೋಳಾಡುವಿಕೆಯಿಂದ ಸುದಿನಕ್ಕೂ ಅವರಿಗೆ ಬದಲಾಯಿತು. ಆದದರಿಂದ ಅವರು ಆ ದಿವಸಗಳನ್ನು ಹಬ್ಬದ ದಿವಸಗಳಾಗಿಯೂ ಸಂತೋಷದ ದಿವಸಗಳಾಗಿಯೂ ಒಬ್ಬರಿಗೊಬ್ಬರು ಭಾಗಗಳನ್ನು ಕಳುಹಿಸುವ ದಿವಸಗಳಾಗಿಯೂ ಬಡವ ರಿಗೆ ದಾನಗಳನ್ನು ಕೊಡುವ ದಿವಸಗಳಾಗಿಯೂ ಮಾಡಬೇಕು ಎಂಬದು.

ಕೀರ್ತನೆಗಳು 13:6

ನಾನು ಕರ್ತನಿಗೆ ಹಾಡುವೆನು; ಆತನು ನನಗೆ ಮೇಲು ಮಾಡಿದ್ದಾನೆ.

ಕೀರ್ತನೆಗಳು 16:9

ಆದದರಿಂದ ನನ್ನ ಹೃದಯವು ಸಂತೋಷಿಸಿ ನನ್ನ ಹೆಮ್ಮೆಯು ಉಲ್ಲಾಸಪಡುತ್ತದೆ; ನನ್ನ ಶರೀರವು ಸಹ ನಿರೀಕ್ಷೆಯಿಂದ ವಿಶ್ರಾಂತಿಸುವದು.

ಕೀರ್ತನೆಗಳು 44:8

ನಾವು ದಿನವೆಲ್ಲಾ ದೇವರಲ್ಲಿ ಹೆಚ್ಚಳ ಪಡುವೆವು; ನಿನ್ನ ಹೆಸರನ್ನು ಯುಗಯುಗಕ್ಕೂ ಕೊಂಡಾ ಡುವೆವು. ಸೆಲಾ.

ಕೀರ್ತನೆಗಳು 57:8

ಎಚ್ಚರವಾಗು, ನನ್ನ ಘನವೇ; ಎಚ್ಚರ ವಾಗು, ವೀಣೆಯೇ, ಕಿನ್ನರಿಯೇ, ನಾನು ಉದಯದಲ್ಲಿ ಎಚ್ಚರಗೊಳ್ಳುವೆನು.

ಕೀರ್ತನೆಗಳು 71:14

ಆದರೆ ನಾನು ಬಿಟ್ಟುಬಿಡದೆ ನಿನ್ನನ್ನು ನಿರೀಕ್ಷಿ ಸುತ್ತಾ ನಿನ್ನನ್ನು ಇನ್ನೂ ಹೆಚ್ಚೆಚ್ಚಾಗಿ ಸುತ್ತಿಸುವೆನು.

ಕೀರ್ತನೆಗಳು 71:23

ನಾನು ನಿನ್ನನ್ನು ಕೀರ್ತಿಸುವಾಗ ನನ್ನ ತುಟಿಗಳೂ ನೀನು ವಿಮೋಚಿಸಿದ ನನ್ನ ಪ್ರಾಣವೂ ಉತ್ಸಾಹ ಧ್ವನಿಗೈಯುವವು.ನನ್ನ ನಾಲಿಗೆಯು ಸಹ ದಿನವೆಲ್ಲಾ ನಿನ್ನ ನೀತಿಯನ್ನು ಮಾತನಾಡುವದು; ನನಗೆ ಕೇಡನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡುತ್ತಾರೆ.

ಕೀರ್ತನೆಗಳು 145:2

ಪ್ರತಿದಿನ ನಿನ್ನನ್ನು ಸ್ತುತಿಸುವೆನು; ಎಂದೆಂದಿಗೂ ನಿನ್ನ ಹೆಸರನ್ನು ಸ್ತುತಿಸುವೆನು.

ಕೀರ್ತನೆಗಳು 146:1

ಕರ್ತನನ್ನು ಸ್ತುತಿಸಿರಿ. ನನ್ನ ಪ್ರಾಣವೇ, ಕರ್ತನನ್ನು ಸ್ತುತಿಸು.

ಯೆಶಾಯ 61:3

ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.

ಲೂಕ 19:40

ಆಗ ಆತನು ಪ್ರತ್ಯುತ್ತರವಾಗಿ ಅವ ರಿಗೆ--ಇವರು ಸುಮ್ಮನಿರುವದಾದರೆ ಈ ಕಲ್ಲುಗಳು ಕೂಡಲೆ ಕೂಗುವವು ಎಂದು ನಾನು ನಿಮಗೆ ಹೇಳು ತ್ತೇನೆ ಅಂದನು.

ಅಪೋಸ್ತಲರ ಕೃತ್ಯಗಳು 4:20

ಯಾಕಂದರೆ ನಾವು ಕಂಡು ಕೇಳಿದವು ಗಳನ್ನು ಮಾತನಾಡದೆ ಇರಲಾರೆವು ಎಂದು ಹೇಳಿದರು.

ಪ್ರಕಟನೆ 4:8

ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಅವುಗಳಿಗೆ ತುಂಬಾ ಕಣ್ಣುಗಳಿದ್ದವು; ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ-- ಇದ್ದಾತನು ಇರುವಾತನೂ ಬರುವಾತನೂ ಸರ್ವಶಕ್ತ ನಾಗಿರುವ ದೇವರಾದ ಕರ್ತನು ಪರಿಶುದ್ಧನು ಪರಿ ಶುದ್ಧನು ಪರಿಶುದ್ಧನು ಎಂದು ಹೇ

ಪ್ರಕಟನೆ 7:12

ಆಮೆನ್‌. ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸ್ತುತಿಯೂ ಮಾನವೂ ಬಲವೂ ಸಾಮ ರ್ಥ್ಯವೂ ಯುಗಯುಗಾಂತರಗಳಲ್ಲಿ ಇರಲಿ ಎಂದು ಹೇಳಿದರು. ಆಮೆನ್‌.

Interlinear

Choose Theme